Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:35 - ಕನ್ನಡ ಸತ್ಯವೇದವು C.L. Bible (BSI)

35 “ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವರು ಯಾವ ಮೋಶೆಯನ್ನು - ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರೆಂದು ಹೇಳಿ ಬೇಡವೆಂದರೋ ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ ಬಿಡುಗಡೆಮಾಡುವವನನ್ನಾಗಿಯೂ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ ‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಆಗಿನ್ ಜಳುಕ್ಲಾಗಲ್ಯಾ ಝಿಳಿತ್ ಮೊಯ್ಜೆನ್ ದೆವ್ ದುತಾಕ್ ಬಗಲ್ಯಾನ್, ದೆವಾನ್ ತ್ಯಾ ದುತಾಕ್ನಾಚ್ ಮೊಯ್ಜೆಕ್ ಇಸ್ರಾಯೆಲ್ ಲೊಕಾಕ್ನಿ ಸುಟ್ಕಾ ಕರ್‍ತಲೊ ಅನಿ ಅದಿಪತಿ ಕರುನ್ ಧಾಡಲೆ, ಖರೆ ತ್ಯಾ ಲೊಕಾನಿ ತೆಕಾ ಅಮ್ಚೊ ಮುಖಂಡ್ ಅನಿ ಝಡ್ತಿ ಕರ್‍ತಲೊ ಮನುನ್ ತುಕಾ ಕೊನಿತರಿ ಸಾಂಗ್ಲಾತ್ ಕಾಯ್? ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:35
32 ತಿಳಿವುಗಳ ಹೋಲಿಕೆ  

ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.


ನ್ಯಾಯತೀರ್ಪು ಬರುವುದು ದೇವನಿಂದಲೇ I ಉನ್ನತಿಯು ಅವನತಿಯು ಆತನಿಂದಲೇ II


ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.


ಇಸ್ರಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ಸ್ಥಳ ಬದಲಾಯಿಸಿ ಅವರ ಹಿಂದಕ್ಕೆ ಬಂದನು. ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಏಕೆಂದರೆ, ದೇವದೂತರ ಮುಖಾಂತರ ನಮ್ಮ ಪೂರ್ವಜರಿಗೆ ಕೊಡಲಾದ ಸಂದೇಶವು ಅಕ್ಷಯವಾಗಿದ್ದು ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪು ಮತ್ತು ಅವಿಧೇಯತೆಯು ಶಿಕ್ಷಾರ್ಹವಾಗಿದ್ದರೆ,


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


“ನಾಲ್ವತ್ತು ವರ್ಷಗಳಾದ ಮೇಲೆ ಒಂದು ದಿನ ಸೀನಾಯಿ ಬೆಟ್ಟದ ಮರಳುಗಾಡಿನಲ್ಲಿ ಉರಿಯುತ್ತಿದ್ದ ಪೊದೆಯೊಂದನ್ನು ಮೋಶೆ ಕಂಡನು. ಅದರಲ್ಲಿ ಒಬ್ಬ ದೇವದೂತನು ಕಾಣಿಸಿಕೊಂಡನು.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


‘ಸರ್ವೇಶ್ವರನಾದ ದೇವರು ನನ್ನನ್ನು ಕಳುಹಿಸಿದಂತೆಯೇ ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವರು. ಆತನು ನಿಮ್ಮ ಸ್ವಂತ ಜನಾಂಗದವನಾಗಿರುವನು. ಆತನು ಹೇಳುವುದನ್ನೆಲ್ಲಾ ನೀವು ಕೇಳಬೇಕು.


“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”


ಅವರಾದರೋ, “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.


ಅದಕ್ಕೆ ಅವರು, “ಬೇಡ, ಇವನು ಬೇಡ. ನಮಗೆ ಬರಬ್ಬನನ್ನು ಬಿಟ್ಟುಕೊಡಿ,” ಎಂದು ಬೊಬ್ಬೆಹಾಕಿದರು. ಬರಬ್ಬನೋ ಒಬ್ಬ ದರೋಡೆಕೋರನಾಗಿದ್ದನು.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ಈಜಿಪ್ಟಿಗೆ ಬಂದ ಯಕೋಬನ ವಂಶದವರಾದ ನಮ್ಮ ಹಿರಿಯರು ಸರ್ವೇಶ್ವರನಿಗೆ ಮೊರೆಯಿಟ್ಟಾಗ, ಅವರು ಮೋಶೆ ಹಾಗು ಆರೋನರ ಮುಖಾಂತರ ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದು ಈ ನಾಡಿನಲ್ಲಿ ನೆಲೆಗೊಳಿಸಿದರು.


ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ನಾನು ಒಬ್ಬ ದೂತನನ್ನು ನಿನಗೆ ಮುಂದಾಗಿ ಕಳಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು, ಹಾಗು ಯೆಬೂಸಿಯರನ್ನು ಅಲ್ಲಿಂದ ಹೊರದೂಡುವೆನು.


ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.


ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು.


ಅದಕ್ಕೆ ಅವನು, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿದವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದುಹಾಕಬೇಕೆಂದಿರುವೆಯಾ?” ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, “ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!” ಎಂದು ಅಂಜಿದನು.


ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು