Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:43 - ಕನ್ನಡ ಸತ್ಯವೇದವು C.L. Bible (BSI)

43 ವಿಗ್ರಹಗಳನ್ನು ಮಾಡಿ ಪೂಜಿಸಿದಿರಿ; ಮೋಲೆಕ ದೇವರ ಗುಡಾರವನ್ನೂ ನಕ್ಷತ್ರಾಧಿಪತಿಯಾದ ರೇಫಾ ದೇವತೆಯ ಪ್ರತಿಮೆಯನ್ನೂ ಹೊತ್ತುಕೊಂಡು ಹೋದಿರಿ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆ ಗಡಿಪಾರುಮಾಡುತ್ತೇನೆ,’ ಎಂದು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅದಕ್ಕೆ ಬದಲಾಗಿ ನೀವು ಆರಾಧಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೆಫಾನ್ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋಗುತ್ತಿದ್ದಿರಲ್ಲಾ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಗಡಿಪಾರು ಮಾಡುವೆನು’ ಎಂಬುದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅದಕ್ಕೆ ಬದಲಾಗಿ ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೊಂಫಾ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಗಡೀಪಾರು ಮಾಡುವೆನು ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನೀವು ನಿಮ್ಮೊಂದಿಗೆ ಮೊಲೋಖನ (ಸುಳ್ಳುದೇವರ) ಗುಡಾರವನ್ನು ಮತ್ತು ನಿಮ್ಮ ರೇಫಾ ದೇವತೆಯ ನಕ್ಷತ್ರರೂಪವನ್ನು ಹೊತ್ತುಕೊಂಡು ಹೋದಿರಿ. ಆರಾಧಿಸುವುದಕ್ಕಾಗಿ ನೀವು ಮಾಡಿಕೊಂಡ ವಿಗ್ರಹಗಳೇ ಇವು. ಆದ್ದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಕಳುಹಿಸಿಬಿಡುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಮೊಲೋಖನ ಗುಡಾರವನ್ನೂ ರೊಂಫಾ ದೇವತೆಯ ನಕ್ಷತ್ರವನ್ನೂ ನೀವು ನಿರ್ಮಿಸಿಕೊಂಡ ವಿಗ್ರಹಗಳನ್ನೂ ಪೂಜಿಸಿದಿರಿ. ಆದ್ದರಿಂದ ಬಾಬಿಲೋನಿನ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ,’ ಎಂದು ಬರೆದಿರುವ ಪ್ರಕಾರ ಇದು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಅನಿ ತುಮಿ ತುಮ್ಚ್ಯಾ ವಾಂಗ್ಡಾ ಮೊಲೊಕ್ ಮನ್ತಲ್ಯಾ ದೆವಾಚೆ ಬಿಡಾರ್, ಅನಿ ತುಮ್ಚ್ಯಾ ರೆಫಾ ಮನ್ತಲ್ಯಾ ದೆವತೆಚೊ ಚುಕ್ಕಿಚೊ ರುಪ್ ಉಕ್ಲುನ್ ಘೆವ್ನ್ ಗೆಲ್ಯಾಸಿ, ಫುಜ್ಯಾ ಕರುಕ್ ಮನುನ್ ತುಮಿ ಕರುನ್ ಘೆಟಲ್ಲಿ ಮುರ್ತಿಯಾ ಹಿಚ್ ತಸೆ ಹೊವ್ನ್ ಮಿಯಾ ತುಮ್ಕಾ ಬಾಬಿಲೊನಾಚ್ಯಾ ತಿಕ್ಡಿನ್ ಧಾಡುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:43
13 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.


ಅವನು ಇಸ್ರಯೇಲರನ್ನು ಸೆರೆಹಿಡಿದು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳು ಇವುಗಳಿಗೆ ಕಳುಹಿಸಿದನು.


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ನಿಮ್ಮ ಮಕ್ಕಳಲ್ಲಿ ಯಾರನ್ನೂ ಮೋಲೆಕ ದೇವತೆಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ಸರ್ವೇಶ್ವರ ನಾನೇ.


ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”


“ಇಸ್ರಯೇಲಿನ ವಂಶದವರೇ, ನಲವತ್ತು ವರ್ಷಗಳ ಕಾಲ ನೀವು ಮರಳುಗಾಡಿನಲ್ಲಿದ್ದಾಗ, ಬಲಿಪ್ರಾಣಿಗಳನ್ನಾಗಲೀ, ಧಾನ್ಯನೈವೇದ್ಯಗಳನ್ನಾಗಲಿ ನೀವು ಅರ್ಪಿಸಬೇಕೆಂದು ನಾನು ಕೇಳಿದ್ದುಂಟೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು