Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:44 - ಕನ್ನಡ ಸತ್ಯವೇದವು C.L. Bible (BSI)

44 “ದೇವಪ್ರಸನ್ನತೆಯ ಗುಡಾರವು ನಮ್ಮ ಪೂರ್ವಜರ ಬಳಿ ಮರಳುಗಾಡಿನಲ್ಲಿತ್ತು. ಮೋಶೆಯೊಡನೆ ಮಾತನಾಡಿದ ದೇವರು ಅವನಿಗಿತ್ತ ಆಜ್ಞೆಯಂತೆ ಹಾಗೂ ತೋರಿಸಿದ ಆಕಾರದಂತೆ ಅದನ್ನು ನಿರ್ಮಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ದೇವದರ್ಶನಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತಾಡಿದವನು - ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ನೇವಿುಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ದೇವರು ನಮ್ಮ ಪಿತೃಗಳೊಂದಿಗೆ ಯಾವ ಗುಡಾರದಲ್ಲಿ ಮತಾಡಿದ್ದನೋ ಆ ಗುಡಾರವು ಈ ಯೆಹೂದ್ಯರೊಂದಿಗೆ ಮರಳುಗಾಡಿನಲ್ಲಿತ್ತು. ಈ ಗುಡಾರವನ್ನು ನಿರ್ಮಿಸುವ ಬಗೆಯನ್ನು ದೇವರು ಮೋಶೆಗೆ ತಿಳಿಸಿಕೊಟ್ಟನು. ದೇವರು ತನಗೆ ತೋರಿಸಿದ ಆಕಾರದಂತೆಯೇ ಮೋಶೆಯು ಅದನ್ನು ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ಅರಣ್ಯದಲ್ಲಿ ದೇವದರ್ಶನ ಗುಡಾರ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ದೇವರು ಮೋಶೆಗೆ ಆಜ್ಞಾಪಿಸಿದಂತೆ, ಅವನಿಗೆ ತೋರಿಸಿದ ಮಾದರಿಯಂತೆ ಅದನ್ನು ರೂಪಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ದೆವ್ ಹಾಜಿರ್ ರ್‍ಹಾತಲೆ ಬಿರಾಡಾರುಚ್ ಅಮ್ಚ್ಯಾ ಪುರ್ವಜ್ ಲೊಕಾಂಚ್ಯಾ ವಾಂಗ್ಡಾ ಡಂಗ್ಳಿತ್ ಹೊತ್ತೆ, ಹೆ ಬಿಡಾರ್ ತಯಾರ್ ಕರ್‍ತಲೆ ಕಶೆ ಮನುನ್ ದೆವಾನ್ ಮೊಯ್ಜೆಕ್ ಸಾಂಗಲ್ಯಾನ್, ದೆವಾನ್ ಅಪ್ನಾಕ್ ದಾಕ್ವಲ್ಯಾ ಸಾರ್ಕೆಚ್ ತಯಾರ್ ಕರುಕ್ ಮೊಯ್ಜೆಕ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:44
17 ತಿಳಿವುಗಳ ಹೋಲಿಕೆ  

ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಂತೆಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.


ದೇವದರ್ಶನದ ಗುಡಾರವನ್ನು ನಿರ್ಮಿಸಿದಾಗ ಉಪಯೋಗಿಸಿದ ಲೋಹಗಳ ಲೆಕ್ಕ ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಮಾಡಿಸಿದ ಪಟ್ಟಿ:


ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.


ಅಲ್ಲಿ, ಆ ಪವಿತ್ರಸ್ಥಾನದಲ್ಲಿ ಮನುಷ್ಯರಿಂದಲ್ಲ, ದೇವರಿಂದಲೇ ನಿರ್ಮಿತವಾದ ನಿಜವಾದ ಗರ್ಭಗುಡಿಯಲ್ಲಿ, ಅವರು ಯಾಜಕ ಸೇವೆಯನ್ನು ಸಲ್ಲಿಸುತ್ತಿದ್ದಾರೆ.


ಆದರೂ ಆ ಲೇವಿಯರು ಅವಸರಪಡಲಿಲ್ಲ. ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ, “ಸರ್ವೇಶ್ವರನ ದಾಸನಾದ ಮೋಶೆಯ ವಿಧಿಗನುಸಾರ ಇಸ್ರಯೇಲ್ ಸಮಾಜದವರೆಲ್ಲರು ದೇವದರ್ಶನದ ಗುಡಾರಕ್ಕೆ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಜೆರುಸಲೇಮಿನ ಜನರಿಂದಲೂ ವಸೂಲಿ ಮಾಡುವಂತೆ ನೀನೇಕೆ ನೋಡಿಕೊಳ್ಳಲಿಲ್ಲ?


ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ಕುರಿತ ಜ್ಞಾನ ತನಗೆ ಸರ್ವೇಶ್ವರನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,


ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ನಿನ್ನ ಕುಲದ ಮೂಲ ಪುರುಷನಾದ ಲೇವಿಯ ವಂಶದವರನ್ನು ನಿನ್ನ ಜೊತೆಯಲ್ಲಿರಿಸಿಕೊಂಡು, ನಿನ್ನ ಕೈಕೆಳಗೆ ಸೇವೆಮಾಡಿಸು. ಆದರೆ ಮಂಜೂಷವಿರುವ ಗುಡಾರದ ಮುಂದೆ ನೀನು ಮತ್ತು ನಿನ್ನ ಮಕ್ಕಳು ಮಾತ್ರ ಸೇವೆಮಾಡಬೇಕು.


ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.


ಇಸ್ರಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದಾಗ ಮೇಘವೊಂದು ಅದರ ಮೇಲೆ ಆವರಿಸಿಕೊಂಡಿತು. ಸಂಜೆಯಿಂದ ಮುಂಜಾನೆಯವರೆಗೂ ಅದು ಬೆಂಕಿಯಂತೆ ಕಾಣಿಸಿತು.


ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ನಿಲ್ಲಿಸಬೇಕು.


ಆ ಬಲಿಪೀಠವನ್ನು ಹಲಗೆಗಳಿಂದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಿಸಬೇಕು.


ಜನರು ಜೋರ್ಡನ್ ನದಿಯನ್ನು ದಾಟಲು ತಮ್ಮ ತಮ್ಮ ಡೇರೆಗಳಿಂದ ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು