Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:45 - ಕನ್ನಡ ಸತ್ಯವೇದವು C.L. Bible (BSI)

45 ಅನಂತರ ಬಂದ ನಮ್ಮ ಪಿತೃಗಳು ಅದನ್ನು ಸ್ವಾಸ್ತ್ಯವಾಗಿ ಪಡೆದರು. ದೇವರು ಅನ್ಯಜನಾಂಗಗಳನ್ನು ಓಡಿಸಿ ಸ್ವಾಧೀನಮಾಡಿಕೊಟ್ಟ ನಾಡಿಗೆ, ಅವರು ಯೆಹೋಶುವನ ಮುಖಂಡತ್ವದಲ್ಲಿ ಹೋದಾಗ, ಆ ಗುಡಾರವನ್ನೂ ತೆಗೆದುಕೊಂಡು ಹೋದರು. ದಾವೀದನ ಕಾಲದವರೆಗೂ ಅದು ಅಲ್ಲೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ನಮ್ಮ ಹಿರಿಯರು ಅದನ್ನು ತಮ್ಮ ತಂದೆಗಳಿಂದ ಹೊಂದಿದರು; ಅವರು ಯೆಹೋಶುವನ ಹಿಂದೆ ಬಂದು ದೇವರು ತಮ್ಮ ಮುಂದೆ ಹೊರಡಿಸಿದ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಇಲ್ಲೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತೆ ಬಿಡಾರ್ ಅಮ್ಚ್ಯಾ ಪುರ್ವಜ್ಯಾಕ್ನಿ ತೆಂಚ್ಯಾ ಬಾಬಾಂಚ್ಯಾಕ್ನಾ ಗಾವ್ಲೆ ಅನಿ ತೆನಿ ಜೊಶ್ವಾಚ್ಯಾ ಫುಡಾರ್ಕಿತ್ ಹ್ಯಾ ದೆಶಾಕ್ ಹಾನ್ಲ್ಯಾನಿ,ತ್ಯಾ ಯೆಳಾತ್ ಹ್ಯೊ ದೆಶ್ ಅನ್ಯಾ ಲೊಕಾಂಚ್ಯಾ ಹಾತಿತ್ ಹೊತ್ತೊ, ಖರೆ ದೆವಾನ್ ತೆಂಕಾ ಅಮ್ಚ್ಯಾ ಪುರ್ವಜಾಂಚ್ಯಾ ಇದ್ರಾಕುಚ್ ಭಾಯ್ರ್ ಘಾಟ್ಲ್ಯಾನ್ ಅನಿ ದಾವಿದಾಚ್ಯಾ ಯೆಳ್ ಪತರ್ಬಿ ಹೆ ಬಿಡಾರ್ ಥೈಚ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:45
20 ತಿಳಿವುಗಳ ಹೋಲಿಕೆ  

ಹೊರಗಟ್ಟಿದೆ ಪರಕೀಯರನು, ನಮ್ಮ ಪೂರ್ವಜರ ನೆಲೆಗೊಳಿಸಲು I ವಿನಾಶಗೊಳಿಸಿದೆ ಅನ್ಯರನು, ನಮ್ಮವರನು ವಿಕಾಸಗೊಳಿಸಲು II


ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು.


ಈ ನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು.


ಸರ್ವೇಶ್ವರ ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾರೆ. ನಮ್ಮನ್ನು ಪ್ರತಿಭಟಿಸಿ ನಿಂತವನು ಒಬ್ಬನೂ ಇಲ್ಲ.


ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಯೆಹೋಶುವನು ಆ ಜನರನ್ನು ವಾಗ್ದತ್ತ ವಿಶ್ರಾಂತಿಗೆ ಸೇರಿಸಿದ್ದರೆ ದೇವರು ಬೇರೊಂದು ದಿನವನ್ನು ಗೊತ್ತುಮಾಡುತ್ತಿರಲಿಲ್ಲ.


ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II


ಅಂತೆಯೇ ಸೇರಿ ಸ್ವಾಧೀನಮಾಡಿಕೊಂಡರು ಆ ನಾಡನು ಅವರಿಗಧೀನಪಡಿಸಿದಿರಿ ಅದರ ರಾಜರನು, ಪ್ರಜೆಗಳನು, ನಿವಾಸಿಗಳನು, ಆ ಕಾನಾನ್ಯರನು, ತಮಗಿಷ್ಟಾನುಸಾರ ನಡೆಸಲು.


ಆದರೂ ದಾವೀದನು ಸರ್ವೇಶ್ವರನ ದೂತ ಹಿಡಿದಿದ್ದ ಕತ್ತಿಗೆ ಹೆದರಿ, ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಬಲಿಯರ್ಪಿಸಿದನು.


ಯಾಜಕ ಚಾದೋಕ ಮತ್ತು ಅವನ ಜೊತೆ ಯಾಜಕರು ಗಿಬ್ಯೋನಿನಲ್ಲಿದ್ದ ಸರ್ವೇಶ್ವರನ ಗುಡಾರದಲ್ಲಿ ಆರಾಧನೆಯನ್ನು ನಡೆಸಲು ನೇಮಕರಾಗಿದ್ದರು.


ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ ಹಾಗು ಅದರಲ್ಲಿದ್ದ ಪವಿತ್ರವಸ್ತುಗಳನ್ನು ಹೊತ್ತರು.


ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಶಿಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.


ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ I ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು