Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:48 - ಕನ್ನಡ ಸತ್ಯವೇದವು C.L. Bible (BSI)

48 ಆದರೆ ಪರಾತ್ಪರ ದೇವರು ಮಾನವ ನಿರ್ಮಿತ ಆಲಯಗಳಲ್ಲಿ ಮನೆಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆದರೂ ಪರಾತ್ಪರನು ಕೈಯಿಂದ ಕಟ್ಟಿದ ಮನೆಗಳಲ್ಲಿ ವಾಸಮಾಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 “ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 “ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಖರೆ ಪ್ರವಾದಿನಿ ಸಾಂಗಲ್ಲ್ಯಾ ಸಾರ್ಕೆ ಸಗ್ಳ್ಯಾತ್ ಮೊಟೊ ದೆವ್ ಮಾನ್ಸಾನಿ ಅಪ್ಲ್ಯಾ ಹಾತಿನ್ ಬಾಂದಲ್ಯಾ ಘರಾತ್ನಿ ವಸ್ತಿ ರ್‍ಹಾಯ್ನಾ, ಮನುನ್ ಲಿವಲ್ಲೆ ಹಾಯ್:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:48
17 ತಿಳಿವುಗಳ ಹೋಲಿಕೆ  

“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


“ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಪ್ರಭುವನೆ ನಿನ್ನಾಶ್ರಯವಾಗಿಸಿಕೊಂಡಿರುವುದರಿಂದ I ಪರಾತ್ಪರನನೆ ನಿನ್ನ ನಿವಾಸ ಆಗಿಸಿಕೊಂಡದ್ದರಿಂದ II


ಇದು ಕಾವಲುಗಾರ ದೂತನ ತೀರ್ಮಾನ; ಹಾಗು ದೇವರ ತೀರ್ಪು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದರ ಆಳ್ವಿಕೆಯನ್ನು ಅವರು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಕನಿಷ್ಠರನ್ನೂ ಆ ಪದವಿಗೆ ನೇಮಿಸುತ್ತಾರೆ. ಇದು ಎಲ್ಲಾ ಜನರಿಗೆ ತಿಳಿದಿರಬೇಕೆಂಬುದೇ ಈ ತೀರ್ಮಾನ,' ಎಂದು ಸಾರಿದನು.


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ನೀನಾದರೊ ಪ್ರಭು, ಸರ್ವದಾ ಇರುವೆ I ಮಹೋನ್ನತದೊಳು ವಿರಾಜಿಸುತ್ತಿರುವೆ II


ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II


ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.


ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”


ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.


ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು