Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:55 - ಕನ್ನಡ ಸತ್ಯವೇದವು C.L. Bible (BSI)

55 ಆದರೆ ಸ್ತೇಫನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಆದರೆ ಸ್ತೆಫನನು ಪವಿತ್ರಾತ್ಮಭರಿತನಾಗಿದ್ದನು. ಅವನು ಆಕಾಶದತ್ತ ಕಣ್ಣೆತ್ತಿ ನೋಡಿ, ದೇವರ ಮಹಿಮೆಯನ್ನೂ ಯೇಸುವು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಆದರೆ ಪವಿತ್ರಾತ್ಮಭರಿತನಾದ ಸ್ತೆಫನನು ಪರಲೋಕದ ಕಡೆಗೆ ನೋಡಿ, ದೇವರ ಮಹಿಮೆಯನ್ನೂ ದೇವರ ಬಲಗಡೆಯಲ್ಲಿ ಯೇಸು ನಿಂತುಕೊಂಡಿರುವುದನ್ನೂ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ಖರೆ ಸ್ತೆಪೆನ್ ಪವಿತ್ರ್ ಆತ್ಮ್ಯಾನ್ ಭರಲ್ಲೊ ಹೊತ್ತೊ, ತೆನೆ ಮಳ್ಬಾಕ್ಡೆ ಡೊಳೆ ಉಕ್ಲುನ್ ದೆವಾಚಿ ಮಹಿಮಾ ಅನಿ ಜೆಜು ದೆವಾಚ್ಯಾ ಉಜ್ಜ್ಯಾ ಬಾಜುನ್ ಇಬೆ ಹೊತ್ತೆ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:55
27 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.


ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮಧ್ಯೆ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು.


ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು.


ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ಯೇಸುವಿನ ಮಹಿಮೆಯನ್ನು ಮನಗಂಡು, ಅವರನ್ನು ಕುರಿತು ಮಾತನಾಡುವಾಗ ಯೆಶಾಯನು ಹೇಳಿದ ಮಾತುಗಳಿವು.


ನಿಂತಿರುವನು ಪ್ರಭು ಬಡವನ ಬಲಗಡೆ I ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ II


ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


ಆಗ ಸರ್ವೇಶ್ವರನ ತೇಜಸ್ಸು ಪಟ್ಟಣದ ಮಧ್ಯದಿಂದ ಏರಿ, ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು.


ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.


ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.


ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.


ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: “ಜನರ ಅಧಿಕಾರಿಗಳೇ, ಪ್ರಮುಖರೇ,


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು.


ನಾನೆದ್ದು ಬಯಲು ಪ್ರದೇಶಕ್ಕೆ ಹೊರಟುಬಂದಾಗ, ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತ ದರ್ಶನವು ಆದಂತೆ, ಇಗೋ ಅಲ್ಲಿಯೂ ಸರ್ವೇಶ್ವರನ ಮಹಿಮೆ ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆ.


ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ , ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು