Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:8 - ಕನ್ನಡ ಸತ್ಯವೇದವು C.L. Bible (BSI)

8 ಆಮೇಲೆ ದೇವರು ಅಬ್ರಹಾಮನೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಆ ಒಡಂಬಡಿಕೆಯ ಚಿಹ್ನೆಯನ್ನಾಗಿ ಸುನ್ನತಿಯನ್ನು ವಿಧಿಸಿದರು.ಅದರಂತೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಹುಟ್ಟಿದ ಎಂಟನೆಯ ದಿನ ಸುನ್ನತಿಯನ್ನು ಮಾಡಿದನು. ಇಸಾಕನು ತನ್ನ ಮಗ ಯಕೋಬನಿಗೂ, ಯಕೋಬನು ತನ್ನ ಹನ್ನೆರಡು ಮಕ್ಕಳಾದ ನಮ್ಮ ಪಿತಾಮಹರಿಗೂ ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ನೇವಿುಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿವಸದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಮೂಲಪಿತೃಗಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾನಾ ದೆವಾನ್ ಅಬ್ರಾಹಾಮಾಚ್ಯಾ ವಾಂಗ್ಡಾ ಎಕ್ ಕರಾರ್ ಕರುನ್ ಘೆಟ್ಲ್ಯಾನ್, ತ್ಯಾ ಕರಾರಾಚಿ ವಳಕ್‍ ಸುನ್ನತ್ ಕರ್‍ತಲೆ, ತಸೆ ಹೊವ್ನ್ ತೆನಿ ಲೆಕಾಕ್ ಆಟ್ವ್ಯಾ ದಿಸಾಕ್ ಸುನ್ನತ್ ಕರಸ್ಲ್ಯಾನ್, ಇಸಾಕಾನ್ಬಿ ಅಪ್ಲೊ ಲೆಕ್ ಜಾಕೊಬಾಕ್ ಸುನ್ನತ್ ಕರಸ್ಲ್ಯಾನ್, ಅನಿ ಜಾಕೊಬಾನ್ ಅಮ್ಚಿ ಪುರ್ವಜ್ ಲೊಕಾ ಹೊವ್ನ್ ಹೊತ್ಯಾ ಅಪ್ಲ್ಯಾ ಬಾರಾ ಲೆಕಾಕ್ನಿಬಿ ಸುನ್ನತ್ ಕರಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:8
20 ತಿಳಿವುಗಳ ಹೋಲಿಕೆ  

“ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.


ಆ ಬಳಿಕ ಅವರು ಬೇತೇಲನ್ನು ಬಿಟ್ಟು ಹೊರಟರು. ಎಫ್ರಾತೂರಿಗೆ ಸೇರುವುದಕ್ಕೆ ಇನ್ನು ಸ್ವಲ್ಪ ದೂರವಿದ್ದಾಗ ರಾಖೇಲಳಿಗೆ ಹೆರಿಗೆಯ ಕಾಲ ಬಂದಿತು.


ನಮ್ಮ ಪಿತಾಮಹ ಅಬ್ರಹಾಮನೇ ತಾನು ಗೆದ್ದುತಂದ ಶ್ರೇಷ್ಠ ವಸ್ತುಗಳಲ್ಲಿ ದಶಮಾಂಶವನ್ನು ಈ ಮೆಲ್ಕಿಸದೇಕನಿಗೆ ಸಲ್ಲಿಸಿ ಗೌರವಿಸಬೇಕಾದರೆ ಆತನು ಎಂಥ ಮಹಾಪುರುಷನೆಂದು ನೀವೇ ಆಲೋಚಿಸಿ ನೋಡಿ.


ದೇವರು ಅಬ್ರಹಾಮನೊಂದಿಗೆ ಮಾಡಿಮುಗಿಸಿದ ಒಪ್ಪಂದವನ್ನು ನಾನೂರ ಮೂವತ್ತು ವರ್ಷಗಳಾದ ಮೇಲೆ ಬಂದ ಧರ್ಮಶಾಸ್ತ್ರದಿಂದ ರದ್ದುಪಡಿಸಲಾಗದು; ಆ ವಾಗ್ದಾನವನ್ನು ವ್ಯರ್ಥಪಡಿಸಲಾಗದು.


ಪ್ರಿಯ ಸಹೋದರರೇ, ದೈನಂದಿನ ಜೀವನದಿಂದ ಒಂದು ಉದಾಹರಣೆಯನ್ನೇ ತೆಗೆದುಕೊಳ್ಳೋಣ: ಒಬ್ಬನು ಮತ್ತೊಬ್ಬನೊಡನೆ ಒಂದು ಒಪ್ಪಂದ ಮಾಡಿಕೊಳ್ಳುತ್ತಾನೆ. ಕ್ರಮಬದ್ಧವಾಗಿ ಅದನ್ನು ಮಾಡಿ ಮುಗಿಸಿದ ಮೇಲೆ ಯಾರೂ ಅದನ್ನು ರದ್ದುಮಾಡುವಂತಿಲ್ಲ, ಬದಲಾಯಿಸುವಂತಿಲ್ಲ.


ಹೀಗೆ ಪರಿಗಣಿಸಿದ್ದು ಯಾವಾಗ? ಅಬ್ರಹಾಮನಿಗೆ ಸುನ್ನತಿ ಆಗುವುದಕ್ಕೆ ಮೊದಲೋ ಅಥವಾ ಅನಂತರವೊ? ಆತನು ಸುನ್ನತಿ ಮಾಡಿಸಿಕೊಳ್ಳುವ ಮೊದಲೇ ಹೀಗೆ ಪರಿಗಣಿಸಲಾಯಿತು; ಸುನ್ನತಿಮಾಡಿಸಿಕೊಂಡ ನಂತರವಲ್ಲ.


ಸುನ್ನತಿಯನ್ನು ಆಚರಿಸಬೇಕೆಂದು ನಿಯಮಿಸಿದವನು ಮೋಶೆ. (ವಾಸ್ತವವಾಗಿ ಅದು ಮೋಶೆಯ ಕಾಲದಿಂದಲ್ಲ, ಪೂರ್ವಜರ ಕಾಲದಿಂದಲೂ ರೂಢಿಯಲ್ಲಿತ್ತು). ಸಬ್ಬತ್ ದಿನದಲ್ಲಿಯೂ ನೀವು ಸುನ್ನತಿಯನ್ನು ಮಾಡುವುದುಂಟು.


ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು.


ಅಬ್ರಹಾಮನ ಮಗ ಇಸಾಕನಿಗೆ ಇಬ್ಬರು ಮಕ್ಕಳು - ಏಸಾವ ಮತ್ತು ಯಕೋಬ.


ಆದರೆ ರಾಖೇಲಳು ಸತ್ತುಹೋದಳು. ಪ್ರಾಣಹೋಗುತ್ತಿದ್ದಾಗ ಆಕೆ ಆ ಮಗುವಿಗೆ ‘ಬೆನೋನಿ’ ಎಂದು ಹೆಸರಿಟ್ಟಳು. ಅದರ ತಂದೆಯಾದರೋ ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು.


ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.


ಅವನು ಬಿಲ್ಹಾಳನ್ನು ಕೂಡಲು ಅವಳು ಗರ್ಭಿಣಿಯಾಗಿ ಒಂದು ಗಂಡು ಮಗುವನ್ನು ಹೆತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು