Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:12 - ಕನ್ನಡ ಸತ್ಯವೇದವು C.L. Bible (BSI)

12 ಆದರೆ ಫಿಲಿಪ್ಪನು ದೇವರ ಸಾಮ್ರಾಜ್ಯ ಹಾಗೂ ಯೇಸುಕ್ರಿಸ್ತರ ಶುಭಸಂದೇಶವನ್ನು ಬೋಧಿಸಿದಾಗ ಅದರಲ್ಲಿ ವಿಶ್ವಾಸತಳೆದರು. ಸ್ತ್ರೀಪುರುಷರೆನ್ನದೆ ದೀಕ್ಷಾಸ್ನಾನವನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಫಿಲಿಪ್ಪನು ದೇವರ ರಾಜ್ಯದ ಬಗ್ಗೆ ಮತ್ತು ಯೇಸುಕ್ರಿಸ್ತನ ಶಕ್ತಿಯ ಬಗ್ಗೆ ಜನರಿಗೆ ಸುವಾರ್ತೆಯನ್ನು ಹೇಳಿದನು. ಗಂಡಸರು ಮತ್ತು ಹೆಂಗಸರು ಫಿಲಿಪ್ಪನು ಹೇಳಿದ್ದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಫಿಲಿಪ್ಪನು ದೇವರ ರಾಜ್ಯದ ಶುಭವರ್ತಮಾನವನ್ನೂ ಕ್ರಿಸ್ತ ಯೇಸುವಿನ ಹೆಸರನ್ನೂ ಪ್ರಕಟಿಸಿದಾಗ ಅಲ್ಲಿಯ ಸ್ತ್ರೀ ಪುರುಷರು ಅದನ್ನು ನಂಬಿ ದೀಕ್ಷಾಸ್ನಾನವನ್ನು ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ಫಿಲಿಪ್ಪಾನ್ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಅನಿ ಜೆಜು ಕ್ರಿಸ್ತಾಚ್ಯಾ ತಾಕ್ತಿಚ್ಯಾ ವಿಶಯಾತ್ ಲೊಕಾಕ್ನಿ ಬರಿ ಖಬರ್ ಸಾಂಗ್ಲ್ಯಾನ್ ಘೊಮ್ಸಾನಿ , ಅನಿ ಬಾಯ್ಕೊ ಮಾನ್ಸಾನಿ ಪಿಲಿಪಾನ್ ಸಾಂಗಲ್ಯಾಕ್ ವಿಶ್ವಾಸ್ ಕರ್‍ಲ್ಯಾನಿ, ಅನಿ ಬಾಲ್ತಿಮ್ ಕರುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:12
22 ತಿಳಿವುಗಳ ಹೋಲಿಕೆ  

ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಹೌದು, ಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆ; ಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ.


ಆದರೂ ಪ್ರಭುವಿನ ಮಟ್ಟಿಗೆ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀ ಇಲ್ಲದೆ ಪುರುಷನೂ ಇಲ್ಲ.


ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.


ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.


ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು.


ಆದರೂ ಪ್ರಭುವನ್ನು ವಿಶ್ವಾಸಿಸುತ್ತಿದ್ದ ಸ್ತ್ರೀಪುರುಷರ ಸಂಖ್ಯೆ ಅಧಿಕವಾಗುತ್ತಾ ಬಂದಿತು.


ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿಮಾಡಿಕೊಳ್ಳಲಿ; ನೀನಾದರೋ, ಹೋಗು, ದೇವರ ಸಾಮ್ರಾಜ್ಯವನ್ನು ಪ್ರಚಾರಮಾಡು,” ಎಂದು ಹೇಳಿದರು.


ಅನಂತರ ದೇವರ ಸಾಮ್ರಾಜ್ಯವನ್ನು ಕುರಿತು ಬೋಧಿಸುವುದಕ್ಕೂ ರೋಗಿಗಳನ್ನು ಗುಣಪಡಿಸುವುದಕ್ಕೂ ಅವರನ್ನು ಕಳುಹಿಸಿದರು.


ಚದರಿಹೋದ ಭಕ್ತವಿಶ್ವಾಸಿಗಳು ಎಲ್ಲೆಲ್ಲೂ ಹೋಗಿ ಶುಭಸಂದೇಶವನ್ನು ಸಾರುತ್ತಿದ್ದರು.


ಇದನ್ನು ಕೇಳಿದಾಗ ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು