Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:14 - ಕನ್ನಡ ಸತ್ಯವೇದವು C.L. Bible (BSI)

14 ಸಮಾರಿಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿದ ಸಮಾಚಾರ ಪ್ರೇಷಿತರಿಗೆ ಮುಟ್ಟಿತು. ಅವರು ಪೇತ್ರ ಮತ್ತು ಯೊವಾನ್ನರನ್ನು ಅಲ್ಲಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇವಿುನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಪೊಸ್ತಲರು ಇನ್ನೂ ಜೆರುಸಲೇಮಿನಲ್ಲಿದ್ದರು. ಸಮಾರ್ಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಅಪೊಸ್ತಲರು ಪೇತ್ರ ಮತ್ತು ಯೋಹಾನರನ್ನು ಸಮಾರ್ಯದ ಜನರ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದರು ಎಂಬ ಸಮಾಚಾರ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಗೆ ತಲುಪಿದ್ದರಿಂದ, ಅವರ ಬಳಿಗೆ ಪೇತ್ರ ಮತ್ತು ಯೋಹಾನರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಪೊಸ್ತಲಾ ಅಜುನ್ ಜೆರುಜಲೆಮಾತ್ ರಾತಾನಾ ಸರ್ಮಾಯಾ ಮನ್ತಲ್ಯಾ ಗಾಂವಾತ್ಲ್ಯಾ ಲೊಕಾನಿ ದೆವಾಚಿ ಗೊಸ್ಟಿಯಾ ಸ್ವಿಕಾರ್ ಕರುನ್ ಘೆಟ್ಲ್ಯಾನಿ ಮನ್ತಲೆ ಆಯ್ಕಲ್ಯಾ ತನ್ನಾ ತೆನಿ ಪೆದ್ರುಕ್, ಅನಿ ಜುವಾಂವಾಕ್ ತ್ಯಾ ಲೊಕಾಂಚ್ಯಾ ಜಗ್ಗೊಳ್ ಧಾಡುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:14
15 ತಿಳಿವುಗಳ ಹೋಲಿಕೆ  

ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.


ಸತ್ಯವನ್ನು ಪ್ರೀತಿಸದೆ, ಜೀವೋದ್ಧಾರವನ್ನು ನಿರಾಕರಿಸಿ, ವಿನಾಶದ ಮಾರ್ಗದಲ್ಲಿರುವವರನ್ನು ಎಲ್ಲಾ ತರಹದ ಕುಯುಕ್ತಿಯಿಂದ ಅವನು ವಂಚಿಸುವನು.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.


ಅನ್ಯಧರ್ಮದವರೂ ಸಹ ದೈವವಾಕ್ಯವನ್ನು ಸ್ವೀಕರಿಸಿದರೆಂಬ ಸುದ್ದಿ ಜುದೇಯದಲ್ಲಿದ್ದ ಪ್ರೇಷಿತರಿಗೂ ವಿಶ್ವಾಸಿಗಳಿಗೂ ಮುಟ್ಟಿತು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.


ಆದುದರಿಂದ ಯೇಸುಸ್ವಾಮಿ ತಮ್ಮ ಶಿಷ್ಯರಾದ ಪೇತ್ರ ಹಾಗೂ ಯೊವಾನ್ನನನ್ನು ಕರೆದು, “ಹೋಗಿ, ಪಾಸ್ಕಭೋಜನ ಸಿದ್ಧಮಾಡಿರಿ,” ಎಂದರು.


ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.


ಅವನು ಸರ್ವೇಶ್ವರನ ಅಪ್ಪಣೆಯಿಂದ ಬೇತೇಲಿನ ಬಲಿಪೀಠಕ್ಕೆ ವಿರುದ್ಧ ಹಾಗು ಸಮಾರಿಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರುದ್ಧ ಹೇಳಿದ ಮಾತುಗಳು ನಿಸ್ಸಂದೇಹವಾಗಿ ನೆರವೇರುವುವು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು