Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:2 - ಕನ್ನಡ ಸತ್ಯವೇದವು C.L. Bible (BSI)

2 ಕೆಲವು ಭಕ್ತಾಧಿಗಳು ಸ್ತೇಫನನನ್ನು ಸಮಾಧಿಮಾಡಿ ಅವನಿಗಾಗಿ ಅತ್ತು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಭಕ್ತರಾದ ಜನರು ಸ್ತೆಫನನನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವಭಕ್ತರು ಸ್ತೆಫನನ ಶವಸಂಸ್ಕಾರ ಮಾಡಿ, ಅವನಿಗಾಗಿ ಬಹಳ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಥೊಡ್ಯಾ ಲೊಕಾನಿ ಸ್ತೆಪನಾಕ್ ನ್ಹೆವ್ನ್ ಸಮಾಧಿ ಕರ್‍ಲ್ಯಾನಿ, ಅನಿ ತೆನಿ ಸ್ತೆಪನಾ ಸಾಟ್ನಿ ಲೈ ರಡುನ್ ಅಳಾಪ್ ಕರ್‍ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:2
19 ತಿಳಿವುಗಳ ಹೋಲಿಕೆ  

ಅವನೂ ಅವನ ಕುಟುಂಬವೂ ದೇವರಲ್ಲಿ ಭಯಭಕ್ತಿಯಿಂದ ಜೀವಿಸುತ್ತಿದ್ದರು. ಯೆಹೂದ್ಯರಿಗೆ ಅವನು - ಧಾರಾಳವಾಗಿ ದಾನಧರ್ಮಮಾಡುತ್ತಿದ್ದನು. ದೇವರಿಗೆ ತಪ್ಪದೆ ಪ್ರಾರ್ಥನೆ ಸಲ್ಲಿಸುತ್ತಿದ್ದನು.


ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿಂದ ಧರ್ಮನಿಷ್ಠ ಯೆಹೂದ್ಯರು ಜೆರುಸಲೇಮಿಗೆ ಬಂದು ತಂಗಿದರು.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.


“ಸತ್ತವನಿಗಾಗಿ (ಯೋಷೀಯನಿಗಾಗಿ) ಅಳಬೇಡಿ ಅವನಿಗಾಗಿ ಗೋಳಾಡಬೇಡಿ. ಬದಲಿಗೆ ಸೆರೆಹೋದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ ಇನ್ನು ಅವನು ಹಿಂತಿರುಗನು ಸ್ವಂತ ನಾಡನ್ನು ಮತ್ತೆ ನೋಡನು!


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತೆಯನ್ನು ರಚಿಸಿದನು. ಎಲ್ಲ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗು ತಮ್ಮ ಶೋಕಗೀತೆಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತೆ ಗ್ರಂಥದಲ್ಲಿ ಲಿಖಿತವಾಗಿವೆ.


ಹಿಜ್ಕೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಲು, ಅವನ ಶವವನ್ನು ದಾವೀದವಂಶದವರ ಕುಟುಂಬದ ಸ್ಮಶಾನಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಶವಸಂಸ್ಕಾರ ನಡೆಯುವಾಗ ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗ ಮನಸ್ಸೆ ಅರಸನಾದನು.


ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣೀತಟ್ಟುಗಳನ್ನು ಉಟ್ಟುಕೊಂಡು, ಸಂತಾಪಸೂಚಿಸುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ,” ಎಂದು ಆಜ್ಞಾಪಿಸಿದನು. ತಾನೂ ಚಟ್ಟದ ಹಿಂದೆ ಹೋದನು.


ಸಮುವೇಲನು ಮರಣಹೊಂದಿದ್ದನು. ಇಸ್ರಯೇಲರು ಅವನಿಗಾಗಿ ಸಂತಾಪ ಸೂಚಿಸುತ್ತಾ ಅವನ ಶವವನ್ನು ಅವನ ಸ್ವಂತ ಊರಾದ ರಾಮಾದಲ್ಲಿ ಸಮಾಧಿಮಾಡಿದ್ದರು. ಸೌಲನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೇತಾಳಿಕರನ್ನೂ ನಾಡಿನಿಂದ ಹೊರಡಿಸಿಬಿಟ್ಟಿದ್ದನು.


ಮೋವಾಬ್ಯರ ಬಯಲಿನಲ್ಲಿ ಇಸ್ರಯೇಲರು ಮೋಶೆಗಾಗಿ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಸಂತಾಪದ ದಿನಗಳು ಮುಗಿದವು.


ಆರೋನನು ಸತ್ತುಹೋದುದನ್ನು ಇಸ್ರಯೇಲ್ ಸಮಾಜದವರೆಲ್ಲರೂ ತಿಳಿದು ಅವನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದರು.


ಇಷ್ಟು ವರ್ಷಗಳಾದ ಮೇಲೆ ಆಕೆ ಕಾನಾನ್ ನಾಡಿನ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಕಾಲವಾದಳು. ಅಬ್ರಹಾಮನು ಅಲ್ಲಿಗೆ ಬಂದು ಅವಳಿಗಾಗಿ ಕಣ್ಣೀರಿಟ್ಟು ಗೋಳಾಡಿದನು.


ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.


ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.


ಅವನ ಸಂಗಡ ರಥಗಳೂ ಕುದುರೆಸವಾರರೂ ಸಹ ಇದ್ದರು. ಹೀಗೆ ದೊಡ್ಡ ಜನಸಮೂಹವೇ ಅವನೊಂದಿಗೆ ಹೋಯಿತು.


ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು