Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:22 - ಕನ್ನಡ ಸತ್ಯವೇದವು C.L. Bible (BSI)

22 ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷವಿುಸುವನೋ ಏನೋ ಆತನನ್ನು ಬೇಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈ ದುಷ್ಟತನಕ್ಕಾಗಿ ಪಶ್ಚಾತ್ತಾಪಪಟ್ಟು ಕರ್ತ ಯೇಸುವನ್ನು ಬೇಡಿಕೋ, ಒಂದು ವೇಳೆ ಅವರು ನಿನ್ನ ಹೃದಯದಲ್ಲಿದ್ದ ಈ ವಿಚಾರವನ್ನು ಕ್ಷಮಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಸೆ ಹೊವ್ನ್ ತುಜೊ ಮನ್ ಬದ್ಲುನ್ ಘೆ! ತಿಯಾ ಕರಲಿ ಬುರ್ಶಿ ಕಾಮಾ ಸೊಡುನ್ ದೆವಾಕ್ಡೆ ಪರತ್, ಧನಿಯಾಕ್ಡೆ ಮಾಗ್ನಿ ಕರ ತಿಯಾ ಅಸ್ಲಿ ಯವ್ಜನ್ ಕರಲ್ಯಾಕ್ ತೊ ತುಕಾ ಮಾಪಿ ಕರ್ಲ್ಯಾರ್ ಬಿ ಕರ್‍ತಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:22
23 ತಿಳಿವುಗಳ ಹೋಲಿಕೆ  

ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ.


ಪ್ರಭು ಅವನಿಗೆ, “ನೀನೆದ್ದು ‘ನೇರಬೀದಿ’ ಎಂಬ ಹಾದಿಗೆ ಹೋಗು; ತಾರ್ಸದ ಸೌಲ ಎಂಬ ವ್ಯಕ್ತಿಗಾಗಿ ಯೂದನ ಮನೆಯಲ್ಲಿ ವಿಚಾರಿಸು. ಆ ಸೌಲನು ಪ್ರಾರ್ಥನೆಯಲ್ಲಿರುವುದನ್ನು ಕಾಣುವೆ.


ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖಳಾಗುವಂತೆ ನಾನು ಅವಳಿಗೆ ಕಾಲಾವಕಾಶ ಕೊಟ್ಟೆ. ಆದರೆ ಅವಳು ತನ್ನ ಜಾರತ್ವವನ್ನು ತ್ಯಜಿಸಿ ದೇವರಿಗೆ ಅಭಿಮುಖಳಾಗಲು ನಿರಾಕರಿಸುತ್ತಾಳೆ.


ಅದಕ್ಕೆ ಪೇತ್ರನು, “ನಿನ್ನ ಹಣಕಾಸು ನಿನ್ನೊಂದಿಗೆ ಹಾಳಾಗಿಹೋಗಲಿ; ದೇವರ ವರವನ್ನು ಹಣಕ್ಕೆ ಕೊಳ್ಳಬೇಕೆಂದಿರುವೆಯಾ?


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”


ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.


ಮೂರ್ಖನ ಯೋಜನೆ ಪಾಪಮಯ; ಕುಚೋದ್ಯನು ಜನರಿಂದ ತಿರಸ್ಕೃತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು