Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:26 - ಕನ್ನಡ ಸತ್ಯವೇದವು C.L. Bible (BSI)

26 ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ - ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇವಿುನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಪ್ರಭುವಿನ ದೂತನೊಬ್ಬನು ಫಿಲಿಪ್ಪನಿಗೆ, “ನೀನು ಸಿದ್ಧನಾಗಿ ದಕ್ಷಿಣದ ಕಡೆಗೆ ಅಂದರೆ ಜೆರುಸಲೇಮಿನಿಂದ ಗಾಜಾಕ್ಕೆ ಹೋಗುವ ಮರಳುಗಾಡಿನ ಮಾರ್ಗಕ್ಕೆ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದೇವದೂತನೊಬ್ಬನು ಫಿಲಿಪ್ಪನಿಗೆ, “ದಕ್ಷಿಣ ದಿಕ್ಕಿಗೆ ಹೋಗುವ ಮಾರ್ಗದಲ್ಲಿ ಹೋಗು, ಅದು ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಧನಿಯಾಚ್ಯಾ ದೆವ್ ದುತಾನ್ ಫಿಲಿಪಾಕ್, ತಿಯಾ ಉಟುನ್ ತಯಾರ್ ಹೊವ್ನ್ ದಕ್ಷಿನಾಚ್ಯಾ ಭಾಜುಕ್ ಮಟ್ಲ್ಯಾರ್, ಜೆರುಜಲೆಮಾಕ್ನಾ ಗಾಜ್ಯಾಕ್ ಜಾತಲ್ಯಾ ಡಂಗ್ಳಿಚ್ಯಾ ವಾಟೆಕ್ಡೆ ಜಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:26
18 ತಿಳಿವುಗಳ ಹೋಲಿಕೆ  

ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ನಾನು ಯಾವ ದೇವರ ಭಕ್ತನಾಗಿದ್ದೇನೋ, ಯಾವ ದೇವರನ್ನು ಆರಾಧಿಸುತ್ತೇನೋ ಆ ದೇವರ ದೂತನು ನಿನ್ನೆ ರಾತ್ರಿ ದರ್ಶನವಿತ್ತನು:


ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಕೂಡಲೇ ಕೊರ್ನೇಲಿಯನು ತನ್ನ ಇಬ್ಬರು ಪರಿಚಾರಕರನ್ನೂ ತನ್ನ ಪಹರೆಯವರಲ್ಲಿ ಧರ್ಮನಿಷ್ಠನಾಗಿದ್ದ ಒಬ್ಬ ಸೈನಿಕನನ್ನೂ ಕರೆದು,


ಇದನ್ನು ಕಂಡು ಅಷ್ಕೆಲೋನ್ ಭಯದಿಂದ ನಡುಗುವುದು. ಗಾಜಾ ಪಟ್ಟಣ ಸಂಕಟದಿಂದ ಗೋಳಾಡುವುದು; ಎಕ್ರೋನ್ ನಿರಾಶೆಯಿಂದ ಪ್ರಲಾಪಿಸುವುದು; ಗಾಜಾ ಪಟ್ಟಣಕ್ಕೆ ರಾಜನೇ ಇಲ್ಲದಂತಾಗುವುದು. ಅಷ್ಕೆಲೋನ್ ನಿರ್ಜನ ಪ್ರದೇಶವಾಗುವುದು;


ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ-ನಗರಗಳು; ಗಾಜಾ ಸಂಸ್ಥಾನ ಹಾಗೂ ಈಜಿಪ್ಟಿನ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲ ಗ್ರಾಮ, ನಗರಗಳು.


ಏಳು, ಕೆಲಸಕ್ಕೆ ಕೈಹಾಕು; ಸರ್ವೇಶ್ವರ ನಿನ್ನೊಂದಿಗಿರಲಿ!” ಎಂದು ಹೇಳಿದನು.


ಕಾನಾನ್ಯರ ನಾಡು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿ ಇರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಆದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿದ್ದ ಲೆಷಾ ಊರಿನವರೆಗೂ ಹಬ್ಬಿತ್ತು.


ಫಿಲಿಪ್ಪನು ಸಮಾರಿಯದ ಪ್ರಮುಖ ಪಟ್ಟಣ ಒಂದಕ್ಕೆ ಹೋಗಿ ಅಲ್ಲಿಯ ಜನರಿಗೆ ಯೇಸುವೇ ಅಭಿಷಿಕ್ತನಾದ ಲೋಕೋದ್ಧಾರಕನೆಂದು ಸಾರಿದನು.


ಪವಿತ್ರಾತ್ಮರು ಫಿಲಿಪ್ಪನಿಗೆ, “ನೀನು ಮುಂದೆ ಹೋಗಿ ಆ ರಥದ ಜೊತೆಯಲ್ಲೇ ನಡೆ,” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು