Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:29 - ಕನ್ನಡ ಸತ್ಯವೇದವು C.L. Bible (BSI)

29 ಪವಿತ್ರಾತ್ಮರು ಫಿಲಿಪ್ಪನಿಗೆ, “ನೀನು ಮುಂದೆ ಹೋಗಿ ಆ ರಥದ ಜೊತೆಯಲ್ಲೇ ನಡೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದೇವರಾತ್ಮನು ಫಿಲಿಪ್ಪನಿಗೆ - ನೀನು ಆ ರಥದ ಹತ್ತಿರ ಹೋಗಿ ಅದರ ಸಂಗಡಲೇ ನಡೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಪವಿತ್ರಾತ್ಮನು ಫಿಲಿಪ್ಪನಿಗೆ, “ರಥದ ಬಳಿಗೆ ಹೋಗಿ ಅದರ ಸಮೀಪದಲ್ಲಿ ನಿಂತುಕೊ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ, “ನೀನು ಹೋಗಿ ಆ ರಥದ ಜೊತೆಯಲ್ಲಿಯೇ ನಡೆ,” ಎಂದು ಪವಿತ್ರಾತ್ಮರು ಫಿಲಿಪ್ಪನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಪವಿತ್ರ್ ಆತ್ಮ್ಯಾನ್ ಫಿಲಿಪಾಕ್ “ರಥಾಕ್ಡೆ ಜಾವ್ನ್ ತೆಚ್ಯಾ ಜಗ್ಗೊಳ್ ರಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:29
16 ತಿಳಿವುಗಳ ಹೋಲಿಕೆ  

ಪೇತ್ರನು ತನ್ನ ದರ್ಶನವನ್ನು ಕುರಿತು ಇನ್ನೂ ಆಲೋಚಿಸುತ್ತಿರುವಾಗ ಪವಿತ್ರಾತ್ಮ ಅವರು, “ಇಗೋ, ಮೂರು ಜನರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ,


ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.


ಅವನು ಪೌಲನ ಸೊಂಟಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳನ್ನು ಬಿಗಿದುಕೊಂಡು, “ಪವಿತ್ರಾತ್ಮ ಹೀಗೆನ್ನುತ್ತಾರೆ: ‘ಈ ಸೊಂಟಪಟ್ಟಿಯು ಯಾರದೋ ಅವನನ್ನು ಜೆರುಸಲೇಮಿನಲ್ಲಿ ಯೆಹೂದ್ಯರು ಹೀಗೆಯೇ ಕಟ್ಟಿ, ಅನ್ಯಧರ್ಮೀಯರ ವಶಕ್ಕೆ ಒಪ್ಪಿಸುವರು,’ “ ಎಂದನು.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಇಷ್ಟಾನುಸಾರ ಪ್ರತಿಯೊಬ್ಬನಿಗೂ ಹಂಚುತ್ತಾರೆ.


ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.


ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು.


ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.


ಹೀಗೆ ಅವರು ತಮ್ಮತಮ್ಮೊಳಗೆ ಭಿನ್ನಾಭಿಪ್ರಾಯವುಳ್ಳವರಾಗಿ ಅಲ್ಲಿಂದ ಹೊರಟುಹೋಗಲಾರಂಭಿಸಿದರು. ಆಗ ಪೌಲನು ಹೀಗೆಂದನು : “ಪವಿತ್ರಾತ್ಮ ಅವರು ಯೆಶಾಯ ಪ್ರವಾದಿಯ ಮುಖಾಂತರ ನಿಮ್ಮ ಪೂರ್ವಜರಿಗೆ ಎಷ್ಟೊಂದು ವಿಹಿತವಾಗಿ ಹೇಳಿದ್ದಾರೆ:


ಆದಕಾರಣ ಪವಿತ್ರಾತ್ಮ ಹೇಳುವ ಪ್ರಕಾರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು