Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:3 - ಕನ್ನಡ ಸತ್ಯವೇದವು C.L. Bible (BSI)

3 ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಸೌಲನು ಸಭೆಯನ್ನು ಹಾಳುಮಾಡಲು ಪ್ರಾರಂಭಿಸಿದನು. ಅವನು ಮನೆಮನೆಗಳಿಗೆ ಹೋಗಿ ಸ್ತ್ರೀಪುರುಷರನ್ನು ಹೊರಗೆಳೆದು ಅವರನ್ನು ಸೆರೆಮನೆಯಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ಸಾವ್ಲಾನ್ ದೆವಾಚ್ಯಾ ಲೊಕಾಂಚೆ ತಾಂಡೆ ಹಾಳ್ ಕರುಕ್ ಚಾಲುಕರ್ಲ್ಯಾನ್, ಹರ್ ಎಕ್ ಘರಾತ್ನಿಬಿ ಗುಸುನ್ ಘವ್ ಮಾನ್ಸಾಕ್ನಿ, ಅನಿ ಬಾಯ್ಕಾ ಮಾನ್ಸಾಕ್ನಿ ಸಗ್ಳ್ಯಾಕ್ನಿಬಿ ಭಾಯ್ರ್ ವಡುನ್ ಬಂದಿಖಾನ್ಯಾತ್ ಘಾಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:3
13 ತಿಳಿವುಗಳ ಹೋಲಿಕೆ  

ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು.


ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ.


ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.


ಅದಕ್ಕೆ ಪ್ರತ್ಯುತ್ತರವಾಗಿ ನಾನು, ‘ಪ್ರಭೂ, ನಿಮ್ಮಲ್ಲಿ ವಿಶ್ವಾಸವಿಟ್ಟವರನ್ನು ನಾನು ಸೆರೆಹಿಡಿದೆ; ಪ್ರಾರ್ಥನಾಮಂದಿರಗಳಿಗೆ ಹೋಗಿ ಅವರನ್ನು ಚಾವಟಿಯಿಂದ ಹೊಡೆದೆ.


ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು.


ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.


ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?


ಕೆಲವು ಭಕ್ತಾಧಿಗಳು ಸ್ತೇಫನನನ್ನು ಸಮಾಧಿಮಾಡಿ ಅವನಿಗಾಗಿ ಅತ್ತು ಗೋಳಾಡಿದರು.


ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು