Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:31 - ಕನ್ನಡ ಸತ್ಯವೇದವು C.L. Bible (BSI)

31 ಆ ಅಧಿಕಾರಿ ಪ್ರತ್ಯುತ್ತರವಾಗಿ, “ಯಾರಾದರೂ ವಿವರಿಸಿದ ಹೊರತು ಇದು ನನಗೆ ಅರ್ಥವಾಗುವುದಾದರೂ ಹೇಗೆ?” ಎಂದನು. ರಥವನ್ನು ಹತ್ತಿ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಹ್ವಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನು - ಯಾರಾದರೂ ನನಗೆ ಅರ್ಥ ತಿಳಿಸಿಕೊಟ್ಟ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ - ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕೂತುಕೋ ಎಂಬದಾಗಿ ಫಿಲಿಪ್ಪನನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆ ಅಧಿಕಾರಿಯು “ನಾನು ಹೇಗೆ ಅರ್ಥಮಾಡಿಕೊಳ್ಳಲಿ? ಬೇರೆ ಯಾರಾದರೂ ನನಗೆ ಅದನ್ನು ವಿವರಿಸಬೇಕು!” ಎಂದು ಉತ್ತರಕೊಟ್ಟನು. ಬಳಿಕ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಅವನು ಫಿಲಿಪ್ಪನನ್ನು ಆಹ್ವಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು, “ಯಾರಾದರೊಬ್ಬರು ಅದನ್ನು ವಿವರಿಸದಿದ್ದರೆ ನನಗೆ ಅರ್ಥವಾಗುವುದು ಹೇಗೆ?” ಎಂದು ಹೇಳಿ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಮಂತ್ರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ತ್ಯಾ ಅಧಿಕಾರಿನ್ ಮಿಯಾ ಕಶೆ ಅರ್ಥ್ ಕರುನ್ ಘೆವ್ಕ್ ಹೊತಾ? ಕೊನ್ ತರಿಬಿ ದುಸ್ರ್ಯಾನಿ ಹೆ ಮಾಕಾ ಕಳ್ವುಚೆ! ಮನುನ್ ಜವಾಬ್ ದಿಲ್ಯಾನ್, ಅನಿ ಅಪ್ನಾಚ್ಯಾ ವಾಂಗ್ಡಾ ರಥಾತ್ ಚಡುನ್ ಬಸ್ ಮನುನ್ ಫಿಲಿಪಾಕ್ ಬಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:31
20 ತಿಳಿವುಗಳ ಹೋಲಿಕೆ  

ಪ್ರಭುವಿನಲ್ಲಿ ವಿಶ್ವಾಸವಿಲ್ಲದಿದ್ದರೆ ಅವರ ನಾಮಸ್ಮರಣೆ ಮಾಡುವುದಾದರೂ ಹೇಗೆ? ಅವರ ವಿಷಯವನ್ನು ಕುರಿತು ಕೇಳದಿದ್ದರೆ ಅವರನ್ನು ವಿಶ್ವಾಸಿಸುವುದಾದರೂ ಹೇಗೆ? ಬೋಧಿಸುವವರು ಇಲ್ಲದಿದ್ದರೆ ಅವರ ವಿಷಯವನ್ನು ಕುರಿತು ಕೇಳುವುದಾದರೂ ಹೇಗೆ?


ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ.


ಅಂತೆಯೇ ಧನಿಕನಾದ ಸಹೋದರನು, ದೇವರು ತನ್ನನ್ನು ದೀನಸ್ಥಿತಿಗೆ ಇಳಿಸಿದಾಗ ಆನಂದಿಸಲಿ.


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು. ಇದು ನಿಶ್ಚಯ,” ಎಂದರು.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ನಾ ಮಂದಮತಿಯಾಗಿದ್ದೆ ಅರಿವಿಲ್ಲದೆ I ನಾ ವನ್ಯಮೃಗನಂತಿದ್ದೆ ನಿನ್ನ ಮುಂದೆ II


ಆಗ ಎಲೀಷನು, “ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇಮರದ ತೋಪುಗಳು, ದ್ರಾಕ್ಷೀತೋಟಗಳು, ಕುರಿದನಗಳು, ಗಂಡಾಳು, ಹೆಣ್ಣಾಳುಗಳು, ಇವನ್ನು ಸಂಪಾದಿಸುವುದಕ್ಕೆ ಇದು ಸಮಯವೇ?


ನಾಮಾನನು ರಥರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು.


ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು.


ಅವನು ಓದುತ್ತಿದ್ದ ಪ್ರವಾದನೆ ಇದು: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ ಆತನು ಬಾಯ್ದೆರೆಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು