Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:32 - ಕನ್ನಡ ಸತ್ಯವೇದವು C.L. Bible (BSI)

32 ಅವನು ಓದುತ್ತಿದ್ದ ಪ್ರವಾದನೆ ಇದು: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ ಆತನು ಬಾಯ್ದೆರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನು ಓದುತ್ತಿದ್ದ ಶಾಸ್ತ್ರವಚನವು ಯಾವದಂದರೆ - ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವನು ಓದುತ್ತಿದ್ದ ಪವಿತ್ರ ಗ್ರಂಥದ ಭಾಗವು ಇಂತಿದೆ: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ಆತನಿದ್ದನು. ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವ ಕುರಿಯಂತೆ ಆತನಿದ್ದನು. ಆತನು ಬಾಯಿ ತೆರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಕಂಚುಕಿ ಈ ವಾಕ್ಯಭಾಗವನ್ನು ಓದುತ್ತಿದ್ದನು: “ವಧಿಸಲಿಕ್ಕೆ ಒಯ್ದ ಕುರಿಯಂತೆ ಅವರನ್ನು ಕರೆದುಕೊಂಡು ಹೋದರು. ಉಣ್ಣೆ ಕತ್ತರಿಸುವವರ ಮುಂದೆ ಇರುವ ಕುರಿಮರಿಯಂತೆ ಅವರು ಮೌನವಾಗಿದ್ದರು. ಇನ್ನು ಅವರು ತಮ್ಮ ಬಾಯಿ ತೆರೆಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೊ ವಾಚುಲಾಗಲ್ಯಾ ಪವಿತ್ರ್ ಪುಸ್ತಕಾಚೊ ಭಾಗ್ ಖಲೊ ಮಟ್ಲ್ಯಾರ್: ತೊಡ್ತಲ್ಯಾ ಜಾಗ್ಯಾಕ್ ನ್ಹೆಲ್ಲ್ಯಾ ಬಕ್ರ್ಯಾ ಸಾರ್ಕೊ ತೊ ಹೊತ್ತೊ, ಅಪ್ಲಿ ಕೆಸಾ ಕಾಪುಲಾಗಲ್ಯಾಚ್ಯಾ ಫಿಡ್ಯಾತ್ ಗಪ್ ಇಬೆ ಹೊತ್ತ್ಯಾ ಬಕ್ರ್ಯಾ ಸಾರ್ಕೊ ತೊ ಹೊತ್ತೊ, ತೆನಿ ಎಕ್ ಶಬ್ದ್ ಸೈತ್ ಬೊಲುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:32
18 ತಿಳಿವುಗಳ ಹೋಲಿಕೆ  

ಕುರಿ, ಟಗರು, ಹೋತಗಳ ಹಾಗೆ ಅವರನ್ನು ವಧ್ಯಸ್ಥಾನಕ್ಕೆ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ಮೌನದಿಂದಿರುವೆ, ಬಾಯ್ದೆರೆಯದಿರುವೆ I ನನಗೊದಗಿರುವುದು ನಿನ್ನಿಂದಲ್ಲವೆ? II


ಮೌನವಿದ್ದೆ, ಸನ್ನುಡಿಯದೆಯೂ ಸುಮ್ಮನಿದ್ದೆ I ಉಲ್ಬಣಿಸುತ್ತಿತ್ತು ವೇದನೆಯು ಎಡೆಬಿಡದೆ II


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಸರ್ವೇಶ್ವರಾ, ನನ್ನ ಪರಿಚಯ ನಿಮಗಿದೆ ನಿಮ್ಮ ನೋಟ ನನ್ನ ಮೇಲಿದೆ. ನನ್ನ ಹೃದಯ ನಿಮ್ಮೊಂದಿಗಿದೆ, ಇದರ ಪರೀಕ್ಷೆ ನಿಮ್ಮಿಂದಾಗಿದೆ. ಅವರನ್ನೋ, ಕುರಿಗಳೋ ಎಂಬಂತೆ ಕೊಲೆಗೆ ಕರೆದೊಯ್ಯಿರಿ ವಧ್ಯದಿವಸದವರೆಗೂ ಅವರನ್ನು ವಿಂಗಡಿಸಿಡಿ.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು.


ಸರ್ವಾಂಗ ಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,


ಆ ಅಧಿಕಾರಿ ಪ್ರತ್ಯುತ್ತರವಾಗಿ, “ಯಾರಾದರೂ ವಿವರಿಸಿದ ಹೊರತು ಇದು ನನಗೆ ಅರ್ಥವಾಗುವುದಾದರೂ ಹೇಗೆ?” ಎಂದನು. ರಥವನ್ನು ಹತ್ತಿ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಹ್ವಾನಿಸಿದನು.


ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.


ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು