Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:36 - ಕನ್ನಡ ಸತ್ಯವೇದವು C.L. Bible (BSI)

36 ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು - ಅಗೋ, ನೀರು; ನನಗೆ ದೀಕ್ಷಾಸ್ನಾನವಾಗುವದಕ್ಕೆ ಅಡ್ಡಿ ಏನು ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆಕೊಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಜಾಂವ್ಗೆತ್ - ಜಾಂವ್ಗೆತ್, ಅನಿ ಪಾನಿ ಹೊತ್ತ್ಯಾ ಎಕ್ ಜಾಗ್ಯಾಚ್ಯಾ ಜಗ್ಗೊಳ್ ಪಾವ್ಲೆ, ತನ್ನಾ ತೊ ಅಧಿಕಾರಿ “ಹೆಬಕ್! ಹಿತ್ತೆ ಪಾನಿ ಹಾಯ್! ಮಿಯಾ ಬಾಲ್ತಿಮ್ ಕರುನ್ ಘೆವ್ಕ್ ಕಾಯ್‍ತರಿಬಿ ಅಡ್ಕಳ್ ಹಾಯ್ ಕಾಯ್?” ಮನುನ್ ಪಿಲಿಪಾಕ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:36
9 ತಿಳಿವುಗಳ ಹೋಲಿಕೆ  

“ನಮ್ಮಂತೆಯೇ ಪವಿತ್ರಾತ್ಮ ಅವರನ್ನು ಪಡೆದಿರುವ ಈ ಜನರಿಗೆ ದೀಕ್ಷಾಸ್ನಾನ ಕೊಡಲು ಅಭ್ಯಂತರವಿದೆಯೇ?’ ಎಂದನು.


ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನದೀಕ್ಷೆಯನ್ನು ಮಾಡಿಸುತ್ತಿದ್ದನು. ಜನರು ಬಂದು ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಈತನಿಂದ ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.


ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.


(ಫಿಲಿಪ್ಪನು, “ನೀವು ಹೃದಯಪೂರ್ವಕವಾಗಿ ವಿಶ್ವಾಸಿಸುವುದಾದರೆ ದೀಕ್ಷಾಸ್ನಾನವನ್ನು ಪಡೆಯಬಹುದು,” ಎಂದನು. “ಯೇಸುಕ್ರಿಸ್ತ ದೇವರ ಪುತ್ರ ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಅಧಿಕಾರಿ ಪ್ರತ್ಯುತ್ತರವಿತ್ತನು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು