Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:4 - ಕನ್ನಡ ಸತ್ಯವೇದವು C.L. Bible (BSI)

4 ಚದರಿಹೋದ ಭಕ್ತವಿಶ್ವಾಸಿಗಳು ಎಲ್ಲೆಲ್ಲೂ ಹೋಗಿ ಶುಭಸಂದೇಶವನ್ನು ಸಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತಾವಾಕ್ಯವನ್ನು ಸಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ವಿಶ್ವಾಸಿಗಳು ಎಲ್ಲೆಲ್ಲಿಯೂ ಚದರಿಹೋದರು. ವಿಶ್ವಾಸಿಗಳು ತಾವು ಹೋದ ಪ್ರತಿಯೊಂದು ಸ್ಥಳದಲ್ಲಿಯೂ ಜನರಿಗೆ ಸುವಾರ್ತೆಯನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಚದರಿಹೋದವರು ತಾವು ಹೋದಲ್ಲೆಲ್ಲಾ ವಾಕ್ಯವನ್ನು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ದೆವಾಚಿ ವಿಶ್ವಾಸಿ ಲೊಕಾ ಲೈ ಕಡೆ ಪಗಳ್ಲಿ, ಅನಿ ತೆನಿ ಗೆಲ್ಯಾಕ್ಡೆ ಸಗ್ಳ್ಯಾಕ್ಡೆಬಿ ದೆವಾಚಿ ಬರಿ ಖಬರ್ ಲೊಕಾಕ್ನಿ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:4
8 ತಿಳಿವುಗಳ ಹೋಲಿಕೆ  

ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.


ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.


ನಿಮಗೆ ತಿಳಿದಿರುವಂತೆ ನಾವು ನಿಮ್ಮಲ್ಲಿಗೆ ಬರುವ ಮೊದಲೇ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆ, ಅವಮಾನಗಳನ್ನು ಸಹಿಸಿದೆವು. ತೀವ್ರವಾದ ವಿರೋಧವಿದ್ದರೂ ದೇವರ ನೆರವಿನಿಂದ ನಿರ್ಭೀತರಾಗಿ ಶುಭಸಂದೇಶವನ್ನು ನಿಮಗೆ ಸಾರಿದೆವು.


ಇತ್ತ ಪೌಲ ಮತ್ತು ಬಾರ್ನಬ ಅಂತಿಯೋಕ್ಯದಲ್ಲೇ ತಂಗಿದ್ದು ಅನೇಕರೊಡಗೂಡಿ ಪ್ರಭುವಿನ ವಾಕ್ಯವನ್ನು ಬೋಧಿಸುತ್ತಾ ಶುಭಸಂದೇಶವನ್ನು ಸಾರುತ್ತಾ ಇದ್ದರು.


ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು.


ಆದರೆ ಫಿಲಿಪ್ಪನು ದೇವರ ಸಾಮ್ರಾಜ್ಯ ಹಾಗೂ ಯೇಸುಕ್ರಿಸ್ತರ ಶುಭಸಂದೇಶವನ್ನು ಬೋಧಿಸಿದಾಗ ಅದರಲ್ಲಿ ವಿಶ್ವಾಸತಳೆದರು. ಸ್ತ್ರೀಪುರುಷರೆನ್ನದೆ ದೀಕ್ಷಾಸ್ನಾನವನ್ನು ಪಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು