Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:5 - ಕನ್ನಡ ಸತ್ಯವೇದವು C.L. Bible (BSI)

5 ಫಿಲಿಪ್ಪನು ಸಮಾರಿಯದ ಪ್ರಮುಖ ಪಟ್ಟಣ ಒಂದಕ್ಕೆ ಹೋಗಿ ಅಲ್ಲಿಯ ಜನರಿಗೆ ಯೇಸುವೇ ಅಭಿಷಿಕ್ತನಾದ ಲೋಕೋದ್ಧಾರಕನೆಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನನ್ನು ಅಲ್ಲಿರುವವರಿಗೆ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಫಿಲಿಪ್ಪನು ಸಮಾರ್ಯ ಪಟ್ಟಣಕ್ಕೆ ಹೋಗಿ ಕ್ರಿಸ್ತನ ಬಗ್ಗೆ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಫಿಲಿಪ್ಪನು ಸಮಾರ್ಯದ ಒಂದು ಪಟ್ಟಣಕ್ಕೆ ಹೋಗಿ ಅಲ್ಲಿ ಕ್ರಿಸ್ತ ಯೇಸುವಿನ ಸಂದೇಶ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಫಿಲಿಪಾನ್ ಸಮಾರ್ಯ್ ಮನ್ತಲ್ಯಾ ಮುಖ್ಯ್ ಗಾಂವಾಕ್ ಜಾವ್ನ್ ಕ್ರಿಸ್ತಾಚ್ಯಾ ವಿಶಯಾತ್ ಪರ್ಗಟ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:5
18 ತಿಳಿವುಗಳ ಹೋಲಿಕೆ  

ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು.


ಮಾರನೆಯ ದಿನ ಅಲ್ಲಿಂದ ಹೊರಟು ಸೆಜರೇಯಕ್ಕೆ ಬಂದೆವು. ಅಲ್ಲಿ ಶುಭಸಂದೇಶ ಪ್ರಚಾರಕ ಫಿಲಿಪ್ಪನ ಮನೆಗೆ ಹೋಗಿ ಅವನೊಡನೆ ತಂಗಿದೆವು. ಜೆರುಸಲೇಮಿನಲ್ಲಿ ಆಯ್ಕೆಯಾದ ಏಳುಮಂದಿಯಲ್ಲಿ ಇವನೂ ಒಬ್ಬನು.


ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು.


ಈಗಾಗಲೇ ಅಸ್ತಿವಾರ ಹಾಕಲಾಗಿದೆ. ಯೇಸುಕ್ರಿಸ್ತರೇ ಆ ಅಸ್ತಿವಾರ. ಇದಲ್ಲದೆ, ಬೇರೆ ಅಸ್ತಿವಾರವನ್ನು ಯಾರೂ ಹಾಕಲಾಗದು.


ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.


ಯೇಸುವೇ ಲೋಕೋದ್ಧಾರಕನೆಂದು ಪ್ರತಿದಿನ ದೇವಾಲಯದಲ್ಲೂ ಮನೆಮನೆಗಳಲ್ಲೂ ಉಪದೇಶಿಸುವುದರಲ್ಲಿ ಹಾಗೂ ಸಾರುವುದರಲ್ಲಿ ನಿರತರಾದರು.


ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ.


ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು.


ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಜನಸಮೂಹವು ಅವನಿಗೆ ಕಿವಿಕೊಟ್ಟಿತು. ಅವನು ಮಾಡಿದ ಅದ್ಭುತಕಾರ್ಯಗಳನ್ನು ಕಣ್ಣಾರೆ ಕಂಡಿತು; ಅವನ ಬೋಧನೆಯನ್ನು ಒಮ್ಮನಸ್ಸಿನಿಂದ ಸ್ವೀಕರಿಸಿತು.


ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.


ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು