Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:9 - ಕನ್ನಡ ಸತ್ಯವೇದವು C.L. Bible (BSI)

9 ಆ ಪಟ್ಟಣದಲ್ಲಿ ಆಗ ಸಿಮೋನನೆಂಬ ಒಬ್ಬ ಮಂತ್ರವಾದಿ ಇದ್ದನು. ಅವನು ಸಮಾರಿಯದ ಜನತೆಯನ್ನು ತನ್ನ ಮಾಯಮಂತ್ರಗಳಿಂದ ಮಂಕುಗೊಳಿಸಿದ್ದನು. ತಾನೊಬ್ಬ ಮಹಾಪುರುಷನೆಂದು ಕೊಚ್ಚಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಆ ಪಟ್ಟಣದಲ್ಲಿ ಸಿಮೋನ ಎಂಬ ಒಬ್ಬನಿದ್ದನು. ಫಿಲಿಪ್ಪನು ಅಲ್ಲಿಗೆ ಬರುವುದಕ್ಕಿಂತ ಮೊದಲಿನಿಂದಲೂ ಸಿಮೋನನು ಮಂತ್ರತಂತ್ರಗಳನ್ನು ಮಾಡುತ್ತಿದ್ದನು. ಅವನು ತನ್ನ ತಂತ್ರಗಳಿಂದ ಸಮಾರ್ಯದ ಜನರೆಲ್ಲರನ್ನು ವಿಸ್ಮಯಗೊಳಿಸಿದ್ದನು. ಸಿಮೋನನು ತನ್ನನ್ನು ಮಹಾವ್ಯಕ್ತಿಯೆಂದು ಹೇಳಿಕೊಂಡು ಜಂಭಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ಪಟ್ಟಣದಲ್ಲಿ ಕೆಲ ಸಮಯದಿಂದ ಸೀಮೋನ ಎಂಬ ಹೆಸರಿನ ಒಬ್ಬನು ಮಂತ್ರ ವಿದ್ಯೆ ಉಪಯೋಗಿಸಿ ಸಮಾರ್ಯದ ಜನರನ್ನು ಆಶ್ಚರ್ಯಗೊಳಿಸಿದ್ದನು. ತಾನೊಬ್ಬ ಮಹಾವ್ಯಕ್ತಿ ಎಂದು ಕೊಚ್ಚಿಕೊಳ್ಳುತ್ತಿದ್ದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ತ್ಯಾ ಶಾರಾತ್ ಸಿಮಾವ್ ಮನ್ತಲೊ ಎಕ್ಲೊ ಹೊತ್ತೊ, ತೊ ಅಪ್ಲ್ಯಾ ಮೊಡಿ ಮಂತ್ರಾನಿ ಥೈತ್ಲ್ಯಾ ಲೊಕಾಕ್ನಿ ಕಂಗಾಲ್ ಕರುನ್ ಥವಲ್ಲ್ಯಾನ್, ತೊ ಅಪ್ನಾಕುಚ್ ಅಪ್ನಿ ಮೊಟೊ ಮಾನುಸ್ ಮನುನ್ ಘೆವ್ನ್ ಬಡಾಯ್ ಕರಿತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:9
20 ತಿಳಿವುಗಳ ಹೋಲಿಕೆ  

ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡುತ್ತಾ ಪಾಫೊಸ್ ಎಂಬ ಊರಿಗೆ ಹೋದರು. ಅಲ್ಲಿ ‘ಬಾರ್‍ಯೇಸು’ ಎಂಬ ಮಂತ್ರವಾದಿಯನ್ನು ಕಂಡರು.


ಸ್ವಲ್ಪಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು.


ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.


“ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.


ಬಹುಕಾಲದಿಂದ ಇವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಬೆಲೆಕೊಡುತ್ತಿದ್ದರು.


ಆದರೆ ಈಜಿಪ್ಟ್ ದೇಶದ ಮಾಟಗಾರರು ಕೂಡ ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನ ಹೃದಯ ಕಠಿಣವಾಯಿತು. ಸರ್ವೇಶ್ವರ ಈ ಮೊದಲೇ ತಿಳಿಸಿದ್ದಂತೆ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆಹೋದನು.


ಫರೋಹನು ಈಜಿಪ್ಟ್ ದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಸಿದನು. ಆ ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿಯಾಗಿ ಮಾಡಿದರು.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಅವರು ಭಕ್ತಿಯ ವೇಷ ಧರಿಸಿದ್ದರೂ ಅದರ ನಿಜವಾದ ಶಕ್ತಿಯನ್ನು ಅಲ್ಲಗಳೆಯುವರು. ಇಂಥವರ ಸಹವಾಸ ನಿನಗೆ ಬೇಡ.


ಜನರು ಸ್ವಾರ್ಥಚಿಂತಕರೂ ಲೋಭಿಗಳೂ ಅಹಂಕಾರಿಗಳೂ ಬಡಾಯಿಕೋರರೂ ದೇವದೂಷಕರೂ ಹೆತ್ತವರಿಗೆ ಅವಿಧೇಯರೂ ಕೃತಘ್ನರೂ ಭಕ್ತಿಹೀನರೂ ಆಗುವರು.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ಆ ಹುಣ್ಣುಗಳು ಮಂತ್ರವಾದಿಗಳಲ್ಲೂ ಈಜಿಪ್ಟಿನವರೆಲ್ಲರಲ್ಲೂ ಇದ್ದುದರಿಂದ ಆ ಮಂತ್ರವಾದಿಗಳು ಹುಣ್ಣುಗಳ ನಿಮಿತ್ತ ಮೋಶೆಯ ಮುಂದೆ ನಿಲ್ಲಲಾರದೆ ಹೋದರು.


ಆದರೆ ಆ ಮಂತ್ರವಾದಿ (ಗ್ರೀಕ್ ಭಾಷೆಯಲ್ಲಿ ಅವನನ್ನು ‘ಎಲಿಮ’ ಎಂದು ಕರೆಯುತ್ತಿದ್ದರು) ಅವರನ್ನು ವಿರೋಧಿಸಿದನು. ರಾಜ್ಯಪಾಲನು ವಿಶ್ವಾಸಿಯಾಗದಂತೆ ತಡೆಯಲು ಯತ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು