Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:10 - ಕನ್ನಡ ಸತ್ಯವೇದವು C.L. Bible (BSI)

10 ದಮಸ್ಕಸಿನಲ್ಲಿ ಅನನೀಯ ಎಂಬ ಶಿಷ್ಯನಿದ್ದನು. ಪ್ರಭು ಅವನಿಗೆ ದರ್ಶನವಿತ್ತು, “ಅನನೀಯಾ” ಎಂದು ಕರೆಯಲು ಅವನು, “ಸ್ವಾಮೀ, ಅಪ್ಪಣೆಯಾಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ - ಅನನೀಯನೇ, ಎಂದು ಅವನನ್ನು ಕರೆಯಲು ಅವನು - ಕರ್ತನೇ, ಇಗೋ, ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಮಸ್ಕದಲ್ಲಿ ಯೇಸುವಿನ ಶಿಷ್ಯನೊಬ್ಬನಿದ್ದನು. ಅವನ ಹೆಸರು ಅನನೀಯ. ಪ್ರಭುವು ಅನನೀಯನನ್ನು ದರ್ಶನದಲ್ಲಿ “ಅನನೀಯನೇ” ಎಂದು ಕರೆದನು. ಅನನೀಯನು, “ಪ್ರಭುವೇ, ಇಗೋ ಇದ್ದೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಮಸ್ಕದಲ್ಲಿ ಅನನೀಯ ಎಂಬ ಹೆಸರಿನ ಶಿಷ್ಯನಿದ್ದನು. ದರ್ಶನದಲ್ಲಿ ಕರ್ತ ಯೇಸುವು ಅವನನ್ನು, “ಅನನೀಯಾ!” ಎಂದು ಕರೆದರು. “ಇಗೋ, ಇದ್ದೇನೆ ಸ್ವಾಮಿ,” ಎಂದು ಅವನು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನನಿಯ್ ಮನ್ತಲೊ ಜೆಜುಚೊ ಶಿಸಾ ಎಕ್ಲೊ ಧಮಸ್ಕಾತ್ ಹೊತ್ತೊ, ಧನಿಯಾನ್ ತೆಕಾ ಸಪ್ನಾತ್ ಅನನಿಯ್! ಮನುನ್ ಬಲ್ವುಲ್ಯಾನ್, ತನ್ನಾ ತೆನಿ “ಧನಿಯಾ, ಹೆಬಕ್ ಮಿಯಾ ಹಿತ್ತೆ ಹಾಯ್” ಮನುನ್ ಜವಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:10
23 ತಿಳಿವುಗಳ ಹೋಲಿಕೆ  

“ದಮಸ್ಕಸಿನಲ್ಲಿ ಅನನೀಯ ಎಂಬ ಒಬ್ಬ ವ್ಯಕ್ತಿ ಇದ್ದನು. ಅವನು ಧರ್ಮಶಾಸ್ತ್ರಕ್ಕೆ ಪ್ರಾಮಾಣಿಕನಾಗಿ ಬಾಳಿದವನು. ಆ ಊರಿನ ಸಮಸ್ತ ಯೆಹೂದ್ಯರಿಂದ ಸನ್ಮಾನಿತನು.


ಅದೊಂದು ಮಧ್ಯಾಹ್ನ, ಸುಮಾರು ಮೂರು ಗಂಟೆಯ ಸಮಯ, ಅವನಿಗೊಂದು ದಿವ್ಯದರ್ಶನವಾಯಿತು: ದೇವದೂತನೊಬ್ಬನು ತನ್ನ ಮನೆಯೊಳಗೆ ಬಂದು, “ಕೊರ್ನೇಲಿಯಾ,” ಎಂದು ಕರೆಯುವುದನ್ನು ಸ್ಪಷ್ಟವಾಗಿ ಕಂಡನು.


ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.


ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.


ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು, “ಇಗೋ ಬಂದೇ,” ಎಂದು ಉತ್ತರಕೊಟ್ಟು,


ಅದನ್ನು ನೋಡಲು ಅವನು ಮುಂದಕ್ಕೆ ಬರುವುದನ್ನು, ಸರ್ವೇಶ್ವರ ಸ್ವಾಮಿ ಕಂಡರು. ಪೊದೆಯೊಳಗಿಂದ, “ಮೋಶೇ, ಮೋಶೇ,” ಎಂದು ದೇವರು ಕರೆದರು. ಅದಕ್ಕವನು, “ಇಗೋ, ಇದ್ದೇನೆ,” ಎಂದು ಉತ್ತರಕೊಟ್ಟನು.


ಆ ಕನಸಿನಲ್ಲಿ ದೇವದೂತನು, ‘ಯಕೋಬನೇ’ ಎಂದು ಕರೆದನು. ನಾನು, ‘ಇಗೋ, ಇದ್ದೇನೆ’, ಎಂದು ಹೇಳಿದೆ.


ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.


ಆ ರಾತ್ರಿಯೇ ಸ್ವಪ್ನದಲ್ಲಿ ಕನಸಿನ ಗುಟ್ಟು ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ಆತನು ಪರಲೋಕ ದೇವರನ್ನು ಹೀಗೆಂದು ಸ್ತುತಿಸಿದನು:


‘ನಿನ್ನಲ್ಲಿ ನನಗೆ ಇಷ್ಟವಿಲ್ಲ,’ ಎಂದು ತೋರಿದರೆ ತಮಗೆ ಸರಿಕಂಡಂತೆ ಮಾಡಲಿ. ಅವರ ಚಿತ್ತದಂತೆ ಆಗಲಿ,” ಎಂದನು.


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ಅಲ್ಲಿ ತನ್ನ ದಂಡನ್ನು ಇಬ್ಭಾಗವಾಗಿ ವಿಂಗಡಿಸಿ ರಾತ್ರಿವೇಳೆಯಲ್ಲಿ ಶತ್ರುಗಳ ಮೇಲೆ ಬಿದ್ದು ಸೋಲಿಸಿದನು. ಅಲ್ಲದೆ ದಮಸ್ಕಸ್ ಪಟ್ಟಣದ ಉತ್ತರಕ್ಕಿರುವ ಹೋಬಾ ಊರಿನತನಕ ಹಿಂದಟ್ಟಿದನು.


ಮೂರು ದಿನಗಳವರೆಗೂ ಅವನಿಗೆ ಕಣ್ಣು ಕಾಣಿಸಲಿಲ್ಲ. ಅಲ್ಲದೆ ಅದುವರೆಗೂ ಅವನು ಅನ್ನಪಾನಗಳನ್ನು ಮುಟ್ಟಲಿಲ್ಲ.


“ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿಬಿಡಲಾಗಿತ್ತು. ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು.


ಪೇತ್ರನು ಸೆರೆಮನೆಯ ಹೊರಕ್ಕೆ ಅವನನ್ನು ಹಿಂಬಾಲಿಸಿ ಹೋದನು. ಅಷ್ಟಾದರೂ ದೂತನು ಮಾಡುತ್ತಿರುವುದು ನಿಜವೆಂದು ಅವನಿಗೆ ಅರಿವಾಗಲಿಲ್ಲ; ತನಗೇನೋ ದರ್ಶನವಾಗುತ್ತಿದೆಯೆಂದೆ ಭಾವಿಸಿದನು.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.


ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು,


ನಾನು ದಮಸ್ಕಸಿನಲ್ಲಿದ್ದಾಗ ರಾಜ ಅರೇತನ ಕೈಕೆಳಗಿದ್ದ ರಾಜ್ಯಪಾಲನು ನನ್ನನ್ನು ಸೆರೆಹಿಡಿಯುವ ಸಲುವಾಗಿ ಪಟ್ಟಣದ ದ್ವಾರಗಳಿಗೆ ಕಾವಲಿರಿಸಿದ್ದನು.


ನನಗಿಂತ ಮುಂಚಿತವಾಗಿ ಪ್ರೇಷಿತರಾದವರನ್ನು ಕಾಣಲೆಂದು ನಾನು ಜೆರುಸಲೇಮಿಗೂ ಹೋಗಲಿಲ್ಲ. ಬದಲಿಗೆ, ನೇರವಾಗಿ ಅರೇಬಿಯಾಕ್ಕೆ ಹೋದೆ. ಅಲ್ಲಿಂದ ದಮಸ್ಕಸ್ ನಗರಕ್ಕೆ ಹಿಂದಿರುಗಿದೆ.


ಅಲ್ಲದೆ ಅನನೀಯ ಎಂಬವನು ತನ್ನ ಬಳಿಗೆ ಬಂದು ತಾನು ಮರಳಿ ದೃಷ್ಟಿಯನ್ನು ಪಡೆಯುವಂತೆ ತನ್ನ ಮೇಲೆ ಹಸ್ತನಿಕ್ಷೇಪ ಮಾಡುವುದನ್ನು ದರ್ಶನದಲ್ಲಿ ಕಂಡಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು