Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:11 - ಕನ್ನಡ ಸತ್ಯವೇದವು C.L. Bible (BSI)

11 ಪ್ರಭು ಅವನಿಗೆ, “ನೀನೆದ್ದು ‘ನೇರಬೀದಿ’ ಎಂಬ ಹಾದಿಗೆ ಹೋಗು; ತಾರ್ಸದ ಸೌಲ ಎಂಬ ವ್ಯಕ್ತಿಗಾಗಿ ಯೂದನ ಮನೆಯಲ್ಲಿ ವಿಚಾರಿಸು. ಆ ಸೌಲನು ಪ್ರಾರ್ಥನೆಯಲ್ಲಿರುವುದನ್ನು ಕಾಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕರ್ತನು ಅವನಿಗೆ, “ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನು ಅವನಿಗೆ - ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಅವನು ಪ್ರಾರ್ಥನೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರಭುವು ಅನನೀಯನಿಗೆ, “ಎದ್ದು, ‘ನೇರಬೀದಿ’ ಎಂಬ ಬೀದಿಗೆ ಹೋಗು. ಅಲ್ಲಿರುವ ಯೂದನ ಮನೆಯನ್ನು ಕಂಡುಕೊಂಡು ತಾರ್ಸಸ್ ಪಟ್ಟಣದ ಸೌಲನ ಬಗ್ಗೆ ವಿಚಾರಿಸು. ಈಗ ಅವನು ಅಲ್ಲಿ ಪ್ರಾರ್ಥಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕರ್ತ ಯೇಸುವು ಅವನಿಗೆ, “ನೀನೆದ್ದು ‘ನೇರ ಬೀದಿ’ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬುವನನ್ನು ವಿಚಾರಿಸು. ಅವನು ಪ್ರಾರ್ಥನೆ ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಧನಿಯಾನ್ ಅನನಿಯಾಕ್ ತಿಯಾ ಉಟುನ್ ನಿಟ್ಲಿ ವಾಟ್ ಮನುನ್ ಬಲ್ವುತಲ್ಲ್ಯಾ ವಾಟೆಕ್ ಜಾ, ಥೈ ಹೊತ್ತ್ಯಾ ಜುದಾಸಾಚೆ ಘರ್ ಹುಡ್ಕುನ್ ಕಾಡುನ್ ತಾರ್ಸಿಸ್ ಶಾರಾತ್ಲ್ಯಾ ಸಾವ್ಲಾಚ್ಯಾ ವಿಶಯಾತ್ ಇಚಾರ್, ತೊ ಅತ್ತಾ ಥೈ ಮಾಗ್ನಿ ಕರುನ್ಗೆತ್ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:11
28 ತಿಳಿವುಗಳ ಹೋಲಿಕೆ  

“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ಪೌಲನು ಪ್ರತ್ಯುತ್ತರವಾಗಿ, “ನಾನು ಯೆಹೂದ್ಯನು, ತಾರ್ಸದವನು, ಸಿಲಿಸಿಯ ಪ್ರಾಂತ್ಯದ ಪ್ರಖ್ಯಾತ ಪಟ್ಟಣದವನು. ಈ ಜನರೊಡನೆ ಮಾತನಾಡಲು ದಯವಿಟ್ಟು ಅವಕಾಶಕೊಡಿ,” ಎಂದು ಭಿನ್ನವಿಸಿದನು.


ಇದನ್ನು ಅರಿತುಕೊಂಡ ಭಕ್ತಾದಿಗಳು ಅವನನ್ನು ಸೆಜರೇಯಕ್ಕೆ ಕರೆತಂದು ಅಲ್ಲಿಂದ ತಾರ್ಸಕ್ಕೆ ಕಳುಹಿಸಿಬಿಟ್ಟರು.


ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು.


ಅವನು, “ನನ್ನ ಮನೆಯಲ್ಲೇ ದೂತನೊಬ್ಬನು ಕಾಣಿಸಿಕೊಂಡು, ‘ಈಗಲೇ ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು.


ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.


ಪ್ರಭುವಿನ ನಾಮಸ್ಮರಣೆ ಮಾಡುವವರೆಲ್ಲ ಪಡೆಯುವರಾಗ ಜೀವೋದ್ಧಾರ.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


“ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು.


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು