Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:23 - ಕನ್ನಡ ಸತ್ಯವೇದವು C.L. Bible (BSI)

23 ಕೆಲವು ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅನೇಕ ದಿವಸಗಳು ಹೋದ ಮೇಲೆ ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅನೇಕ ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅನೇಕ ದಿನಗಳ ತರುವಾಯ, ಸೌಲನನ್ನು ಕೊಲ್ಲಲು ಯೆಹೂದ್ಯರು ರಹಸ್ಯವಾಗಿ ಯೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಲೈ ದಿಸಾ ಹೊಲ್ಲ್ಯಾ ಮಾನಾ ಜುದೆವಾಂಚ್ಯಾ ಲೊಕಾನಿ ಸಾವ್ಲಾಕ್ ಜಿವ್ ಕಾಡುಚೆ ಮನುನ್ ಯವ್ಜನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:23
14 ತಿಳಿವುಗಳ ಹೋಲಿಕೆ  

ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.


ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.


ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.


ಸೌಲನಾದರೋ ಮತ್ತಷ್ಟು ಸಾಮರ್ಥ್ಯದಿಂದ ಪ್ರಭು ಯೇಸುವೇ ಲೋಕೋದ್ಧಾರಕನೆಂದು ರುಜುವಾತುಪಡಿಸಿ ದಮಸ್ಕಸಿನ ಯೆಹೂದ್ಯರ ಬಾಯಿಮುಚ್ಚಿಸಿದನು.


ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ.


ಇಲ್ಲಿ ಅವನು ಮೂರು ತಿಂಗಳು ಕಳೆದನು. ಬಳಿಕ ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗುತ್ತಿದ್ದಾಗ , ಯೆಹೂದ್ಯರು ಅವನ ವಿರುದ್ಧ ಒಳಸಂಚು ಮಾಡುತ್ತಿರುವುದಾಗಿ ತಿಳಿದುಬಂದಿತು. ಆದುದರಿಂದ ಅವನು ಮಕೆದೋನಿಯದ ಮಾರ್ಗವಾಗಿ ಹಿಂದಿರುಗಲು ನಿರ್ಧರಿಸಿದನು.


ಮಾರನೆಯ ದಿನ ಬೆಳಿಗ್ಗೆ ಕೆಲವು ಯೆಹೂದ್ಯರು ಒಟ್ಟುಗೂಡಿ ಒಳಸಂಚುಹೂಡಿದರು. ಪೌಲನನ್ನು ಕೊಲ್ಲುವ ತನಕ ತಾವು ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು