Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:24 - ಕನ್ನಡ ಸತ್ಯವೇದವು C.L. Bible (BSI)

24 ಅದು ಸೌಲನಿಗೆ ತಿಳಿದುಬಂದಿತು. ಅವರು ಅವನನ್ನು ಕೊಲ್ಲಲು ಹಗಲಿರುಳು ಪಟ್ಟಣದ ದ್ವಾರಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರ ಆಲೋಚನೆಯು ಸೌಲನಿಗೆ ತಿಳಿದುಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೂದ್ಯರು ಸೌಲನಿಗಾಗಿ ಎದುರುನೋಡುತ್ತಾ ನಗರದ ದ್ವಾರಗಳನ್ನು ಹಗಲಿರುಳು ಕಾಯುತ್ತಿದ್ದರು. ಆದರೆ ಅವರ ಯೋಜನೆ ಸೌಲನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಅವರ ಯೋಚನೆ ಸೌಲನಿಗೆ ತಿಳಿಯಿತು. ಅವರು ಅವನನ್ನು ಕೊಲ್ಲುವುದಕ್ಕಾಗಿ ಹಗಲಿರುಳು ಪಟ್ಟಣದ ದ್ವಾರಗಳ ಬಳಿಯಲ್ಲಿ ಹೊಂಚುಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜುದೆವಾಂಚಿ ಲೊಕಾ ಸಾವ್ಲಾಚಿ ವಾಟ್ ಬಗುನ್ ಘೆತ್ ಶಾರಾಚ್ಯಾ ದಡ್ಪ್ಯಾಕ್ನಿ ರಾತ್ ಅನಿ ದಿಸ್ ರಾಯ್ತ್ , ಖರೆ ತೆಂಚಿ ಹಿ ಯವ್ಜುನ್ ಸಾವ್ಲಾಕ್ ಗೊತ್ತ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:24
15 ತಿಳಿವುಗಳ ಹೋಲಿಕೆ  

ನಾನು ದಮಸ್ಕಸಿನಲ್ಲಿದ್ದಾಗ ರಾಜ ಅರೇತನ ಕೈಕೆಳಗಿದ್ದ ರಾಜ್ಯಪಾಲನು ನನ್ನನ್ನು ಸೆರೆಹಿಡಿಯುವ ಸಲುವಾಗಿ ಪಟ್ಟಣದ ದ್ವಾರಗಳಿಗೆ ಕಾವಲಿರಿಸಿದ್ದನು.


ಅವರು ಫೆಸ್ತನನ್ನು ವಿನಂತಿಸಿ, ಪೌಲನನ್ನು ಜೆರುಸಲೇಮಿಗೆ ಕರೆತರಿಸುವ ಉಪಕಾರವನ್ನು ಮಾಡಬೇಕೆಂದು ಕೇಳಿಕೊಂಡರು. ಏಕೆಂದರೆ, ಮಾರ್ಗದಲ್ಲೇ ಪೌಲನನ್ನು ಕೊಲ್ಲುವ ಸಂಚನ್ನು ಹೂಡಿದ್ದರು.


ಯೆಹೂದ್ಯರ ಕುತಂತ್ರಗಳಿಂದ ನನಗೆ ಬಂದೊದಗಿದ ಸಂಕಷ್ಟಗಳಲ್ಲಿ ನಾನು ಅತಿ ನಮ್ರತೆಯಿಂದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆಮಾಡಿಕೊಂಡು ಬಂದೆನು.


ಇಲ್ಲಿ ಅವನು ಮೂರು ತಿಂಗಳು ಕಳೆದನು. ಬಳಿಕ ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗುತ್ತಿದ್ದಾಗ , ಯೆಹೂದ್ಯರು ಅವನ ವಿರುದ್ಧ ಒಳಸಂಚು ಮಾಡುತ್ತಿರುವುದಾಗಿ ತಿಳಿದುಬಂದಿತು. ಆದುದರಿಂದ ಅವನು ಮಕೆದೋನಿಯದ ಮಾರ್ಗವಾಗಿ ಹಿಂದಿರುಗಲು ನಿರ್ಧರಿಸಿದನು.


ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು.


ಆದರೂ ಇವನ ವಿರುದ್ಧ ಒಳಸಂಚು ನಡೆಯುತ್ತಲೇ ಇದೆಯೆಂದು ನನಗೆ ತಿಳಿದುಬಂದಿತು. ಕೂಡಲೇ ನಾನು ಇವನನ್ನು ತಮ್ಮ ಬಳಿಗೆ ಕಳುಹಿಸಿದ್ದೇನೆ. ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಸನ್ನಿಧಾನದಲ್ಲೇ ಬಂದು ಆ ಆಪಾದನೆಗಳನ್ನು ನಿವೇದಿಸಬಹುದೆಂದು ಅಪ್ಪಣೆಮಾಡಿದ್ದೇನೆ.”


ತಂತ್ರೋಪಾಯಗಳ ಕಲ್ಪಿಸಿದರೂ ನಡೆಯದು I ಕೇಡನು ನಿನಗೆ ಬಗೆದರೂ ಅದು ಕೈಗೂಡದು II


ಒಂದು ರಾತ್ರಿ ಸೌಲನ ಶಿಷ್ಯರು ಅವನನ್ನು ಕರೆದುಕೊಂಡು ಹೋಗಿ ಗೂಡೆಯೊಂದರಲ್ಲಿ ಕೂರಿಸಿ ಗೋಡೆಯ ಮೇಲಿಂದ ಕೆಳಕ್ಕೆ ಇಳಿಸಿದರು.


ದುಷ್ಟನೇ, ನೀತಿವಂತನ ಮನೆಗೆ ಕನ್ನಹಾಕಬೇಡ; ಅವನು ಕೂಡಿಸಿದ್ದನ್ನು ಕೊಳ್ಳೆಹೊಡೆಯಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು