Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:31 - ಕನ್ನಡ ಸತ್ಯವೇದವು C.L. Bible (BSI)

31 ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಅಶೆ ರಾತಾನಾ ಜುದೆಯಾ, ಗಲಿಲಿಯಾ, ಅನಿ ಸಮಾರಿಯಾ ಗಾಂವಾತ್ನಿ ಹೊತ್ತ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ನಿ ಶಾಂತ್ಪಾನ್ ಹೊಲೆ, ಪವಿತ್ರ್ ಆತ್ಮ್ಯಾಚ್ಯಾ ಮಜತಿ ವೈನಾ ತೆ ತಾಂಡೆ ವಾಡುಕ್ ಲಾಗ್ಲೆ, ಲೊಕಾನಿ ಅಪ್ನಿ ಧನಿಯಾಕ್ ಮಾನ್ ದಿತ್ಯಾತ್ ಮನ್ತಲೆ ಅಪ್ಲ್ಯಾ ಜಿವಿತಾನಿ ದಾಕ್ವುನ್ ದಿಲ್ಯಾನಿ, ಹೆಚ್ಯಾ ಸಾಟ್ನಿ ದೆವಾಚ್ಯಾ ಲೊಕಾಂಚೊ ತಾಂಡೊ ಲೈ ವಾಡುಕ್ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:31
56 ತಿಳಿವುಗಳ ಹೋಲಿಕೆ  

ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ನಿಮ್ಮ ಕಾಲಕ್ಕೆ ಬೇಕಾದ ಸ್ಥಿರತೆಯನ್ನು ನೀಡುವರು. ರಕ್ಷಣೆಗೆ ಬೇಕಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುವರು. ಸರ್ವೇಶ್ವರ ಸ್ವಾಮಿಯಲ್ಲಿ ನಿಮಗಿರುವ ಭಯಭಕ್ತಿಯೇ ನಿಮ್ಮ ನಿಧಿಯಾಗಿರುವುದು.


ಪಾಪಿಗಳನ್ನು ನೋಡಿ ಅಸೂಯೆಪಡಬೇಡ; ಸರ್ವೇಶ್ವರನಲ್ಲಿರಲಿ ನಿರಂತರ ಭಯಭಕ್ತಿ.


ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಆಮೇಲೆ ನಾನು ಅವರಿಗೆ, “ನೀವು ಮಾಡಿದ್ದು ಸರಿಯಲ್ಲ; ನಾವು ನಮ್ಮ ವಿರೋಧಿಗಳಾದ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ?


ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.


ಆದ್ದರಿಂದಲೇ ನಿಮ್ಮ ಬಳಿಗೆ ಬರುವುದಕ್ಕೆ ಮುಂಚೆಯೇ ಇದನ್ನೆಲ್ಲಾ ಬರೆಯುತ್ತಿದ್ದೇನೆ. ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿಯೇ ಪ್ರಭು ನನಗೆ ಅಧಿಕಾರವನ್ನು ಕೊಟ್ಟಿರುವುದು. ಎಂದೇ, ನಿಮ್ಮ ಮಧ್ಯೆ ಬಂದಾಗ ಅಧಿಕಾರ ಪ್ರಯೋಗಿಸಿ ಕಠಿಣವಾಗಿ ವರ್ತಿಸಲು ಅವಕಾಶವಿರಬಾರದೆಂಬುದೇ ನನ್ನ ಅಪೇಕ್ಷೆ.


ಪ್ರಭು ನಮಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿ. ಈ ಅಧಿಕಾರವನ್ನು ಕುರಿತು ಒಂದು ವೇಳೆ, ನಾವು ಕೊಂಚ ಹೆಚ್ಚಾಗಿ ಹೊಗಳಿಕೊಂಡಿದ್ದರೂ ಅದಕ್ಕಾಗಿ ಸಂಕೋಚಪಡುವುದಿಲ್ಲ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ಹೀಗೆ ಕ್ರೈಸ್ತಸಭೆಗಳು ವಿಶ್ವಾಸದಲ್ಲಿ ದೃಢಗೊಂಡು ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯತೊಡಗಿತು.


ದೇವರ ಶುಭಸಂದೇಶವಾದರೋ ಹಬ್ಬಿ ಹರಡತೊಡಗಿತು.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


ಪ್ರಿಯರೇ, ನೀವಾದರೋ ಅತಿ ಪರಿಶುದ್ಧ ವಿಶ್ವಾಸದ ಆಧಾರದ ಮೇಲೆ ನಿರ್ಮಿಸಲಾದ ಮಂದಿರದಂತೆ ಪ್ರವರ್ಧಿಸಿರಿ; ಪವಿತ್ರಾತ್ಮ ಅವರಿಂದ ಪ್ರೇರಿತರಾಗಿ ಪ್ರಾರ್ಥಿಸಿರಿ.


ಆದಕಾರಣ, ದೇವಜನರು ಅನುಭವಿಸುವುದಕ್ಕಿರುವ ಸಬ್ಬತ್ತೆಂಬ ವಿಶ್ರಾಂತಿ ಇನ್ನೂ ಉಳಿದಿದೆ.


ಕಟ್ಟುಕತೆಗಳಲ್ಲೂ ಕೊನೆಮೊದಲಿಲ್ಲದ ವಂಶಾವಳಿಗಳ ನಿರೂಪಣೆಗಳಲ್ಲೂ ಕಾಲಹರಣ ಮಾಡಬಾರದೆಂದು ಅವರಿಗೆ ಆಜ್ಞಾಪಿಸಬೇಕು. ಅಂಥ ಕತೆಗಳು, ವಂಶಾವಳಿಗಳು ಅನಗತ್ಯವಾದ ವಾದವಿವಾದಗಳಿಗೆ ಎಡೆಮಾಡುತ್ತವೆಯೇ ಹೊರತು ದೇವರ ಯೋಜನೆ ಕೈಗೂಡಲು ಅವು ಅನುಕೂಲವಾಗಿಲ್ಲ; ವಿಶ್ವಾಸದಿಂದ ಮಾತ್ರ ಅದು ಸಾಧ್ಯ.


ಆದುದರಿಂದ ನೀವು ಈಗ ನಡೆದುಕೊಳ್ಳುತ್ತಿರುವಂತೆ, ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.


ಕ್ರಿಸ್ತಯೇಸುವಿನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಿರಿ.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.


ನಾವು ತಪ್ಪಿತಸ್ಥರಲ್ಲವೆಂದು ನಿಮ್ಮ ಮುಂದೆ ಸಮರ್ಥಿಸಿಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇವೆಂದು ನೆನಸಬೇಡಿ. ದೇವರ ಸನ್ನಿಧಿಯಲ್ಲಿ, ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಹೇಳುತ್ತೇನೆ: ಪ್ರಿಯ ಸಹೋದರರೇ, ನಾವು ಮಾಡುತ್ತಿರುವುದೆಲ್ಲ ನಿಮ್ಮ ಆಧ್ಯಾತ್ಮಿಕ ಅಭಿವೃದ್ಧಿಗಾಗಿಯೇ.


ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.


ಆದ್ದರಿಂದ ಪವಿತ್ರಾತ್ಮ ವರಗಳ ಮೇಲೆ ಆಸಕ್ತಿಯುಳ್ಳ ನೀವು, ಧರ್ಮಸಭೆಯನ್ನು ಅಭಿವೃದ್ಧಿಗೊಳಿಸಬಲ್ಲ ವರಗಳ ಮೇಲೆ ಆಸಕ್ತರಾಗಿರಿ.


ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇನ್ನು ಮುಂದೆ ಜನಾಂಗಗಳೂ ಹಲವು ನಗರ ನಿವಾಸಿಗಳೂ ಜೆರುಸಲೇಮಿಗೆ ಬರುವರು.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ನೆಮ್ಮದಿ ನೀಡುವೆ ಅವನು ಸಂಕಟದಲಿರುವಾಗ I ದುರುಳರಿಗೆ ನೀನು ಗುಂಡಿಯನು ತೋಡುವಾಗ II


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲೂ ನಿಮಗೆ ನೆಮ್ಮದಿಯನ್ನು ಅನುಗ್ರಹಿಸಿದ್ದಾರೆ. ನಾಡಿನ ಮೂಲ ನಿವಾಸಿಗಳನ್ನು ನನ್ನ ಕೈಗೊಪ್ಪಿಸಿದ್ದಾರೆ. ನೀವೆ ನೋಡುವ ಹಾಗೆ ನಾಡು ಸರ್ವೇಶ್ವರನಿಗೂ ಅವರ ಪ್ರಜೆಗಳಿಗೂ ಸ್ವಾಧೀನವಾಗಿದೆ.


ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ಮೋವಾಬ್ಯರು ಇಸ್ರಯೇಲರಿಗೆ ಶರಣಾದರು; ನಾಡಿನಲ್ಲಿ ಎಂಬತ್ತು ವರ್ಷ ನೆಮ್ಮದಿ ಇತ್ತು.


ಸರ್ವೇಶ್ವರ ಅವರ ಪೂರ್ವಜರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲೆಡೆಯಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು. ಶತ್ರುಗಳಾರು ಅವರನ್ನು ಪ್ರತಿಭಟಿಸಿ ನಿಲ್ಲಲಿಲ್ಲ. ಎಲ್ಲರೂ ಅವರ ಕೈವಶವಾದರು.


ಆದರೆ ನೀವು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸೊತ್ತಾಗಿ ಕೊಡುವ ಆ ನಾಡಿನಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಸರ್ವೇಶ್ವರ ಮಾಡುವರು;


ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.


ಇಡೀ ಧರ್ಮಸಭೆಯೂ ಇದನ್ನು ಕೇಳಿದ ಎಲ್ಲರೂ ಭಯಭ್ರಾಂತರಾದರು.


“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು