Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:36 - ಕನ್ನಡ ಸತ್ಯವೇದವು C.L. Bible (BSI)

36 ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್‍ಭಾಷೆಯಲ್ಲಿ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಜೊಪ್ಪಾ ಶಾರಾತ್ ತಬಿಥಾ ಮನ್ತಲಿ ಜೆಜುಚಿ ಶಿಸೆ ಹೊತ್ತಿ, ಗ್ರಿಕ್ ಭಾಶ್ಯಾನ್ ತಿಜೆ ನಾವ್ ದೊರ್ಕಾಸ್ ಮಟ್ಲ್ಯಾರ್, “ಚಿತಾಳ್” ಮನುನ್, ತಿ ಕನ್ನಾಬಿ ಲೊಕಾಂಚ್ಯಾ ಸಾಟ್ನಿ ಬರಿ ಕಾಮಾಚ್ ಕರಿತ್ ಹೊತ್ತಿ, ಅನಿ ತಿ ಗರಿಬ್ ಹೊತ್ತ್ಯಾ ಲೊಕಾಕ್ನಿ ಕನ್ನಾಬಿ ಮಜ್ಜತ್ ಕರಿತ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:36
30 ತಿಳಿವುಗಳ ಹೋಲಿಕೆ  

ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ.


ನಾವಾದರೋ ತಮಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು, ತೆಪ್ಪಗಳಾಗಿ ಕಟ್ಟಿ, ಸಮುದ್ರಮಾರ್ಗವಾಗಿ ಜೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀವು ಅವುಗಳನ್ನು ಜೆರುಸಲೇಮಿಗೆ ತರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟನು.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.


ಆದರೆ ಪರ್ಷಿಯ ರಾಜನಾದ ಸೈರಸನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಜನರು ಕಲ್ಲುಕುಟಿಗನಿಗೆ ಹಾಗು ಬಡಗಿಗೆ ಹಣವನ್ನು ಕೊಟ್ಟಿದ್ದರು. ಅಂತೆಯೇ ಲೆಬನೋನಿನಿಂದ ಸಮುದ್ರ ಮಾರ್ಗವಾಗಿ, ಜೊಪ್ಪಕ್ಕೆ ದೇವದಾರು ಮರಗಳನ್ನು ತರತಕ್ಕ ಸಿದೋನ್ಯರಿಗೆ ಹಾಗು ಟೈರಿನವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಮಕೆದೋನಿಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ನೀವು ಪ್ರೀತಿಸುತ್ತಿರುವುದೇನೋ ನಿಜ. ಆದರೂ ಸಹೋದರರೇ, ನಿಮ್ಮ ಈ ಪ್ರೀತಿ ಇನ್ನೂ ಅಧಿಕಾಧಿಕವಾಗಬೇಕೆಂಬುದೇ ನಮ್ಮ ಆಶಯ.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.


“ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ಆಕೆ ಮನೋಹರವಾದ ಹರಿಣಿ, ಸುಂದರವಾದ ಜಿಂಕೆಮರಿ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಒಲವಿನಲ್ಲೇ ಸದಾ ತಲ್ಲೀನನಾಗಿರು.


ಗತ್ ರಿಮ್ಮೋನ್, ಮೇಯರ್ಕೋನ್, ರಕ್ಕೋನ್, ಮತ್ತು ಜೊಪ್ಪಕ್ಕೆ ಎದುರಿಗಿರುವ ಪ್ರದೇಶವೂ ಇವರಿಗೆ ದೊರಕಿತು.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ಸುಗಂಧಸಸ್ಯ ಪರ್ವತದಿಂದಲೆ ಜಿಂಕೆಯಂತೆ, ಪ್ರಾಯದ ಹುಲ್ಲೆಯಂತೆ ತ್ವರೆಮಾಡಿ ಬಾ ನನ್ನಿನಿಯನೇ.


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆನು ವನದ ಹುಲ್ಲೆ ಹರಿಣಿಗಳ ಮೇಲೆ ಆಣೆಯಿಟ್ಟು.


ನನ್ನ ಪ್ರಿಯನು ಇಹನು ಜಿಂಕೆಯಂತೆ, ಎಳೆಯ ಹುಲ್ಲೆಯಂತೆ ಇಗೋ, ನಿಂತಿಹನು ಗೋಡೆಯ ಹಿಂಭಾಗದಲೆ, ದೃಷ್ಟಿಸಿ ನೋಡುತಿಹನು ಕಿಟಕಿಗಳಲಿ ಇಣುಕು ಹಾಕುತಿಹನು ಜಾಲಾಂತರಗಳಲಿ.


ಲುದ್ದವು ಜೊಪ್ಪಕ್ಕೆ ಸಮೀಪದಲ್ಲೇ ಇತ್ತು. ಪೇತ್ರನು ಲುದ್ದದಲ್ಲಿರುವುದನ್ನು ಕೇಳಿದ ಭಕ್ತಾದಿಗಳು, “ದಯವಿಟ್ಟು ಬೇಗನೆ ನಮ್ಮೂರಿಗೆ ಬನ್ನಿ,” ಎಂದು ಇಬ್ಬರ ಮುಖಾಂತರ ಹೇಳಿ ಕಳುಹಿಸಿದರು.


ಈ ಸಮಾಚಾರ ಜೊಪ್ಪದಲ್ಲೆಲ್ಲಾ ಹರಡಿತು. ಅನೇಕರು ಪ್ರಭುವನ್ನು ವಿಶ್ವಾಸಿಸಿದರು.


ನಡೆದುದೆಲ್ಲವನ್ನೂ ತಿಳಿಸಿ ಅವರನ್ನು ಜೊಪ್ಪಕ್ಕೆ ಕಳುಹಿಸಿದನು.


ಪೇತ್ರನು ಅವರನ್ನು ಒಳಕ್ಕೆ ಬರಮಾಡಿಕೊಂಡು ಉಪಚರಿಸಿ, ರಾತ್ರಿ ಅಲ್ಲೇ ತಂಗುವಂತೆ ಮಾಡಿದನು. ಮಾರನೆಯ ದಿನ ಪೇತ್ರನು ಅವರೊಡನೆ ಹೋದನು. ಜೊತೆಯಲ್ಲಿ ಜೊಪ್ಪದ ಕೆಲವು ಸಹೋದರರೂ ಹೋದರು.


“ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿಬಿಡಲಾಗಿತ್ತು. ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು.


ಅವನು, “ನನ್ನ ಮನೆಯಲ್ಲೇ ದೂತನೊಬ್ಬನು ಕಾಣಿಸಿಕೊಂಡು, ‘ಈಗಲೇ ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು.


ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು