Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:39 - ಕನ್ನಡ ಸತ್ಯವೇದವು C.L. Bible (BSI)

39 ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲರು ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ ಮೇಲಂಗಿಗಳನ್ನೂ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಪೇತ್ರನು ಸಿದ್ಧನಾಗಿ ಅವರೊಂದಿಗೆ ಹೋದನು. ಅವನು ಅಲ್ಲಿಗೆ ತಲುಪಿದಾಗ, ಅವರು ಅವನನ್ನು ಮೇಲ್ಮಾಳಿಗೆಯ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರೆಲ್ಲ ಅಳುತ್ತಾ ಪೇತ್ರನನ್ನು ಸುತ್ತುವರಿದರು. ದೊರ್ಕಳು ಜೀವಂತವಾಗಿದ್ದಾಗ ತಮಗಾಗಿ ತಯಾರಿಸಿ ಕೊಟ್ಟ ಮೇಲಂಗಿಗಳನ್ನು ಮತ್ತು ಬಟ್ಟೆಗಳನ್ನು ಅವರು ಪೇತ್ರನಿಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವರೊಂದಿಗೆ ಪೇತ್ರನು ಹೊರಟನು. ಅವನು ಬಂದಾಗ ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರು ಅವನ ಸುತ್ತಲೂ ನಿಂತುಕೊಂಡು ದೊರ್ಕಳು ಜೀವದಿಂದ ಇದ್ದಾಗ ಆಕೆ ಸಿದ್ಧಪಡಿಸಿದ ನಿಲುವಂಗಿಗಳನ್ನು ಇತರ ಬಟ್ಟೆಗಳನ್ನು ಅವನಿಗೆ ತೋರಿಸುತ್ತಾ ಕಣ್ಣೀರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಪೆದ್ರು ತಯಾರ್ ಹೊವ್ನ್ ತೆಂಚ್ಯಾ ವಾಂಗ್ಡಾ ಗೆಲೊ ತೊ ಥೈ ಪಾವಲ್ಯಾ ತನ್ನಾ ತೆನಿ ಪೆದ್ರುಕ್ ಮ್ಹಾಳ್ಳ್ಯಾ ವೈಲ್ಯಾ ಖೊಲಿಕ್ ಬಲ್ವುನ್ ನ್ಹೆಲ್ಯಾನಿ, ಘವ್ಮರಲ್ಲಿ ಬಾಯ್ಕಾಮಾನ್ಸಾ ಸಗ್ಳ್ಯಿ ರಡಿಂಗೆತ್ ಪೆದ್ರುಕ್ಡೆ ಯೆಲಿ, ಅನಿ ದೊರ್ಕಾಸ್ ಜಿವಾನಿ ರಾತಾನಾ ಅಪ್ನಾಕ್ನಿ ತಯಾರ್ ಕರುನ್ ದಿಲ್ಲೆ ಝಗೆ ಅನಿ ಕಪ್ಡೆ ಸಗ್ಳ್ಯೆ ಪೆದ್ರುಕ್ ದಾಕ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:39
26 ತಿಳಿವುಗಳ ಹೋಲಿಕೆ  

ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ಪ್ರಿಯಮಕ್ಕಳೇ, ನಾವು ಬರಿಯ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರಬಾರದು. ನಮ್ಮ ಪ್ರೀತಿ ಸತ್ಯದಲ್ಲೂ ಕೃತ್ಯದಲ್ಲೂ ವ್ಯಕ್ತವಾಗಬೇಕು.


ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು.


ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.


ಕೆಲವು ಭಕ್ತಾಧಿಗಳು ಸ್ತೇಫನನನ್ನು ಸಮಾಧಿಮಾಡಿ ಅವನಿಗಾಗಿ ಅತ್ತು ಗೋಳಾಡಿದರು.


ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು.


ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.


ಬಡಬಗ್ಗರು ನಿಮ್ಮ ಬಳಿಯಲ್ಲಿ ಯಾವಾಗಲೂ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿ ಇರುವುದಿಲ್ಲ,” ಎಂದರು.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ತನ್ನಿಂದ ಏನು ಸಾಧ್ಯವೋ ಅದನ್ನು ಈಕೆ ಮಾಡಿದ್ದಾಳೆ; ನನ್ನ ದೇಹವನ್ನು ಮುಂಚಿತವಾಗಿಯೇ ಸುಗಂಧ ತೈಲದಿಂದ ಲೇಪಿಸಿ ಅದನ್ನು ಶವಸಂಸ್ಕಾರಕ್ಕಾಗಿ ಸಿದ್ಧಪಡಿಸಿದ್ದಾಳೆ.


ಬಡಬಗ್ಗರು ನಿಮ್ಮ ಸಂಗಡ ಯಾವಾಗಲೂ ಇರುತ್ತಾರೆ. ಆದರೆ ನಾನು ನಿಮ್ಮ ಸಂಗಡ ಯಾವಾಗಲೂ ಇರುವುದಿಲ್ಲ.


ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಸೌಲನಿಗಾಗಿ ಅತ್ತು ಪ್ರಲಾಪಿಸಿರಿ ಇಸ್ರಯೇಲಿನ ಮಹಿಳೆಯರೇ, ಉಲ್ಲಾಸಕರ ರಕ್ತಾಂಬರಗಳ ಉಡಿಸಿದವನು ಅವನೇ ಅಲ್ಲವೆ ನಿಮಗೆ? ಅವುಗಳ ಮೇಲೆ ಸುವರ್ಣಾಂಬರಗಳ ತೊಡಿಸಿದವನು ಆತನೇ ಅಲ್ಲವೆ ನಿಮಗೆ?


ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.


ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು.


ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು