Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:41 - ಕನ್ನಡ ಸತ್ಯವೇದವು C.L. Bible (BSI)

41 ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ದೇವಜನರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಅವನು ಕೈನೀಡಿ, ಎದ್ದುನಿಲ್ಲಲು ಆಕೆಗೆ ಸಹಾಯ ಮಾಡಿದನು. ಬಳಿಕ ಅವನು ವಿಶ್ವಾಸಿಗಳನ್ನು ಮತ್ತು ವಿಧವೆಯರನ್ನು ಕೋಣೆಯೊಳಗೆ ಕರೆದು ಅವರಿಗೆ ತಬಿಥಳನ್ನು ತೋರಿಸಿದನು. ಆಕೆ ಜೀವಂತವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಪೇತ್ರನು ಆಕೆಯ ಕೈಯನ್ನು ಹಿಡಿದು ಆಕೆ ಎದ್ದು ನಿಂತುಕೊಳ್ಳುವಂತೆ ಮಾಡಿದನು. ಅನಂತರ ದೇವಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ಆಕೆಯನ್ನು ಅವರಿಗೆ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಪೆದ್ರುನ್ ಹಾತ್ ಧರುನ್ ತಿಕಾ ಉಟುನ್ ಇಬೆ ರಾವ್ಕ್ ಮಜ್ಜತ್ ಕರ್‍ಲ್ಯಾನ್, ಮಾನಾ ತೆನಿ ಘವ್ಮರಲ್ಯಾ ಬಾಯ್ಕಾಮಾನ್ಸಾಕ್ನಿ, ಅನಿ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಖೊಲಿತ್ ಬಲ್ವುನ್ ತಬಿಥಾ ಝಿತ್ತಿ ಹೊಲ್ಲಿ ತೆಂಕಾ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:41
15 ತಿಳಿವುಗಳ ಹೋಲಿಕೆ  

ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು.


ಆಕೆ ಅವರೆಲ್ಲರನ್ನು ಸತ್ಕರಿಸಿದಳು.


ಜೀವಂತನಾಗಿದ್ದ ಆ ಯುವಕನನ್ನು ಮನೆಗೆ ಕರೆದುಕೊಂಡುಹೋದರು. ಅವರಿಗಾದ ಸಾಂತ್ವನ ಅಷ್ಟಿಷ್ಟಲ್ಲ!


ಅವನ ಬಲಗೈಯನ್ನು ಹಿಡಿದು ನಿಲ್ಲಲು ಸಹಾಯಮಾಡಿದನು. ಆ ಕ್ಷಣವೇ ಕುಂಟನ ಅಂಗಾಲು ಮುಂಗಾಲುಗಳು ಬಲಗೊಂಡವು.


ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು.


ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು.


ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II


ಸಾಯುತ್ತಿದ್ದವನು ಹರಸುತ್ತಿದ್ದುದು ನನ್ನನೇ ವಿಧವೆಯ ಹೃದಯ ನಲಿಯುವಂತೆ ಮಾಡುತ್ತಿದ್ದುದು ನಾನೇ.


ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡುಹೋಗಿ ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು; ನಿನ್ನ ಮಗ ಜೀವಂತನಾಗಿದ್ದಾನೆ,” ಎಂದನು.


ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ.


ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ.


ಪೇತ್ರನು ಅಲ್ಲಲ್ಲಿದ್ದ ಭಕ್ತವಿಶ್ವಾಸಿಗಳಿಗೆ ಭೇಟಿಕೊಡುತ್ತಾ ಲುದ್ದ ಎಂಬ ಊರಿನಲ್ಲಿ ವಾಸವಾಗಿದ್ದ ಭಕ್ತರ ಬಳಿಗೆ ಬಂದನು.


ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು.


ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.


ಎಲೀಷನು, “ಅದನ್ನು ತೆಗೆದುಕೋ,” ಎಂದು ಆಜ್ಞಾಪಿಸಲು ಆ ವ್ಯಕ್ತಿ ಕೈಚಾಚಿ ಅದನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು