ಅಪೊಸ್ತಲರ ಕೃತ್ಯಗಳು 9:42 - ಕನ್ನಡ ಸತ್ಯವೇದವು C.L. Bible (BSI)42 ಈ ಸಮಾಚಾರ ಜೊಪ್ಪದಲ್ಲೆಲ್ಲಾ ಹರಡಿತು. ಅನೇಕರು ಪ್ರಭುವನ್ನು ವಿಶ್ವಾಸಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಈ ಸಂಗತಿಯು ಯೊಪ್ಪದಲ್ಲೆಲ್ಲಾ ತಿಳಿಯಬಂದು ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಜೊಪ್ಪದ ಎಲ್ಲಾ ಕಡೆಗಳಲ್ಲಿಯೂ ಇದ್ದ ಜನರಿಗೆ ಈ ವಿಷಯ ತಿಳಿಯಿತು. ಈ ಜನರಲ್ಲಿ ಅನೇಕರು ಪ್ರಭುವನ್ನು ನಂಬಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಈ ವಿಷಯ ಯೊಪ್ಪದಲ್ಲಿದ್ದವರೆಲ್ಲರಿಗೂ ತಿಳಿಯಿತು. ಕರ್ತ ಯೇಸುವಿನಲ್ಲಿ ಅನೇಕರು ವಿಶ್ವಾಸವನ್ನಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಜೊಪ್ಪಾತ್ಲ್ಯಾ ಸಗ್ಳ್ಯಾಕ್ಡೆ ಹೊತ್ತ್ಯಾ ಲೊಕಾಕ್ನಿಬಿ ಹಿ ಖಬರ್ ಕಳ್ಲಿ ಹ್ಯಾ ಲೊಕಾತ್ನಿ ಲೈ ಲೊಕಾನಿ ಧನಿಯಾಚೆರ್ ವಿಶ್ವಾಸ್ ಥವ್ಲ್ಯಾನಿ. ಅಧ್ಯಾಯವನ್ನು ನೋಡಿ |
ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.