Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:6 - ಕನ್ನಡ ಸತ್ಯವೇದವು C.L. Bible (BSI)

6 ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈಗ ಎದ್ದು ಪಟ್ಟಣದೊಳಗೆ ಹೋಗು. ನೀನು ಏನು ಮಾಡಬೇಕೆಂಬುದನ್ನು ಅಲ್ಲಿಯ ಒಬ್ಬನು ನಿನಗೆ ತಿಳಿಸುವನು” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 “ಖರೆ ತಿಯಾ ಅತ್ತಾ ಉಟುನ್ ಶಾರಾತ್ ಜಾ, ತಿಯಾ ಕಾಯ್ ಕರುಚೆ ಮನ್ತಲೆ ಥೈತ್ಲೊ ಎಕ್ ಮಾನುಸ್ ತುಕಾ ಸಾಂಗ್ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:6
33 ತಿಳಿವುಗಳ ಹೋಲಿಕೆ  

‘ನಾನೇನು ಮಾಡಬೇಕು ಪ್ರಭೂ,?’ ಎಂದು ಕೇಳಿದೆ. ಅದಕ್ಕೆ ಪ್ರಭು, ‘ಏಳು, ದಮಸ್ಕಸಿಗೆ ಹೋಗು, ನೀನು ಏನು ಮಾಡಬೇಕೆಂದು ನಿಶ್ಚಯಿಸಲಾಗಿದೆಯೋ ಅದೆಲ್ಲವನ್ನೂ ನಿನಗೆ ತಿಳಿಸಲಾಗುವುದು,’ ಎಂದು ಹೇಳಿದರು.


ಎದ್ದು ನಿಂತುಕೋ; ನಿನ್ನನ್ನು ನನ್ನ ದಾಸನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಿಕೊಳ್ಳುವುದಕ್ಕಾಗಿ ನಿನಗೆ ದರ್ಶನವಿತ್ತಿದ್ದೇನೆ. ಈ ದರ್ಶನದಲ್ಲಿ ನನ್ನ ವಿಷಯವಾಗಿ ಕಂಡದ್ದನ್ನು ಮತ್ತು ಮುಂದಿನ ದರ್ಶನಗಳಲ್ಲಿ ನಾನು ನಿನಗೆ ತೋರಿಸಲಿರುವ ವಿಷಯಗಳನ್ನು ಕುರಿತು ಬೇರೆಯವರಿಗೆ ನೀನು ತಿಳಿಸಬೇಕು.


ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ಯೆಶಾಯನು ಮತ್ತಷ್ಟು ದಿಟ್ಟತನದಿಂದ ಈ ರೀತಿ ಹೇಳಿದ್ದಾನೆ: “ನನ್ನನ್ನು ಅರಸದವರಿಗೂ ನಾನು ಕಾಣಿಸಿಕೊಂಡೆ ನನ್ನ ಬಗ್ಗೆ ವಿಚಾರಿಸದವರಿಗೂ ನಾನು ಪ್ರತ್ಯಕ್ಷನಾದೆ.”


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ಧರ್ಮಶಾಸ್ತ್ರದ ಅರಿವಿಲ್ಲದೆ ಒಮ್ಮೆ ನಾನು ಜೀವಿಸುತ್ತಿದ್ದೆನು; ಆಜ್ಞೆ ಎಂಬುದು ತಲೆದೋರಿದ ಕೂಡಲೇ ಪಾಪಕ್ಕೆ ಜೀವ ಬಂದಿತು.


ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.


ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾದ ಸಿಮೋನನನ್ನು ಬರಮಾಡಿಕೊ. ಅವನು ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದನು.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಅವನು, ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದು ಹೇಳಿ ದೂತನು ಅದೃಶ್ಯನಾದನು.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಆಗ ಜನಸಮೂಹವು, “ಹಾಗಾದರೆ ನಾವೇನು ಮಾಡಬೇಕು?” ಎಂದು ಕೇಳಲು.


ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.


ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ಫಿಲಿಷ್ಟಿಯರ ಪಾಳೆಯವನ್ನು ಕಂಡಾಗ ಭಯಭೀತಿಯಿಂದ ಅವನ ಎದೆಯೊಡೆಯಿತು.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಆಮೇಲೆ ನೀನು ಮಾಡಬೇಕಾದುದನ್ನು ನಾನೇ ತಿಳಿಸುತ್ತೇನೆ; ನಾನು ಯಾರನ್ನು ತೋರಿಸುತ್ತೇನೋ ಅವನನ್ನೇ ನೀನು ಅಭಿಷೇಕಿಸಬೇಕು,” ಎಂದರು.


ಸರ್ವೇಶ್ವರ ನನಗೆ, “ನರಪುತ್ರನೇ, ಎದ್ದು ನಿಲ್ಲು; ನಿನ್ನ ಸಂಗಡ ಮಾತಾಡಬೇಕು,” ಎಂದು ಹೇಳಿದರು.


ಅದೇ ಸ್ಥಳದಲ್ಲಿ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನಗೆ, “ನೀನೆದ್ದು ಬಯಲುಪ್ರದೇಶಕ್ಕೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತಾಡುವೆನು,” ಎಂದು ಹೇಳಿದರು.


ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು