Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:32 - ಕನ್ನಡ ಸತ್ಯವೇದವು C.L. Bible (BSI)

32-33 ಜೋಸೆಫನಿಂದ ಹುಟ್ಟಿದವರೊಳಗೆ: ಎಫ್ರಾಯೀಮ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 40,500:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32-33 ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡ ತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 40,500 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೋಸೇಫನ ಮಗನಾದ ಎಫ್ರಾಯೀಮ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೋಸೇಫನ ಮಕ್ಕಳಾದ ಎಫ್ರಾಯೀಮನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:32
14 ತಿಳಿವುಗಳ ಹೋಲಿಕೆ  

ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


ಈಜಿಪ್ಟಿನಲ್ಲಿ ಜೋಸೆಫನಿಗೆ ಓನ್ ಪಟ್ಟಣದ ಆಚಾರ್ಯ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಮತ್ತು ಎಫ್ರಯಿಮ್.


ಸರ್ವೇಶ್ವರ ನನಗೆ ಇನ್ನೂ ಒಂದು ಗಂಡು ಮಗುವನ್ನು ಅನುಗ್ರಹಿಸಲಿ,” ಎಂದುಕೊಂಡು ಆ ಮಗುವಿಗೆ ‘ಜೋಸೆಫ್’ ಎಂದು ನಾಮಕರಣ ಮಾಡಿದಳು.


ಜೋಸೆಫ್ ಕುಲ ಕುರಿತು ಮೋಶೆ ನುಡಿದದ್ದು : “ಇವನ ಪ್ರಾಂತ್ಯ ಆಶೀರ್ವದಿತವಾಗಲಿ ಸರ್ವೇಶ್ವರನಿಂದ ಮೇಲಣ ಆಕಾಶದ ಮಂಜಿನಿಂದ ಕೆಳಗಿನ ಸಾಗರದ ಒರತೆಗಳಿಂದ;


ನಿಮ್ಮ ಬಂಧುಬಳಗದವರನ್ನು ಅಂದರೆ, ಇಡಿ ಎಫ್ರಯಿಮ್ ವಂಶದವರನ್ನು ತೊಲಗಿಸಿಬಿಟ್ಟಂತೆ, ನಿಮ್ಮನ್ನೂ ನನ್ನ ಸನ್ನಿಧಿಯಿಂದ ತೊಲಗಿಸುವೆನು.”


ಆಗ ದಕ್ಷಿಣವಲಯದವರು ಏಸಾವಿನ ಪರ್ವತವನ್ನು ಸ್ವಾಧೀನಪಡಿಸಿಕೊಳ್ಳುವರು. ಪಶ್ಚಿಮದ‌ ಬಯಲು ಸೀಮೆಯವರು ಫಿಲಿಷ್ಟಿಯವನ್ನೂ ಎಫ್ರಯಿಮ್ ಮತ್ತು ಸಮಾರ್ಯದ ಭೂಮಿಯನ್ನೂ ವಶಪಡಿಸಿಕೊಳ್ಳುವರು. ಬೆನ್ಯಾಮಿನ ವಂಶಜರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು