Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:4 - ಕನ್ನಡ ಸತ್ಯವೇದವು C.L. Bible (BSI)

4 ಈ ಕೆಲಸಕ್ಕಾಗಿ ಒಂದೊಂದು ಕುಲದಿಂದ ಆಯಾ ಕುಲದ ಮುಖ್ಯಸ್ಥನನ್ನು ಸಹಾಯಕನನ್ನಾಗಿ ತೆಗೆದುಕೊಳ್ಳಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಕೆಲಸಕ್ಕಾಗಿ ಒಂದೊಂದು ಕುಲದಲ್ಲಿ ಆಯಾ ಕುಲದ ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿಯೊಂದು ಕುಲದ ಕುಟುಂಬದ ನಾಯಕನು ನಿಮಗೆ ಸಹಾಯಮಾಡಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರತಿಯೊಂದು ಗೋತ್ರದ ಒಬ್ಬೊಬ್ಬ ಮುಖ್ಯಸ್ಥನು ನಿಮಗೆ ಸಹಾಯಕನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:4
19 ತಿಳಿವುಗಳ ಹೋಲಿಕೆ  

ಇವರು ಸಮಾಜದಲ್ಲಿ ಹೆಸರು ಪಡೆದವರು. ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನ ಪುರುಷರು, ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳು.


ಇಸ್ರಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಮೇಲೆ ಅಧಿಪತಿಗಳನ್ನು ನೇಮಿಸಿದನು.


ಮತ್ತು ಕುಲಕ್ಕೆ ಒಬ್ಬನಂತೆ ಹತ್ತುಮಂದಿ ನಾಯಕರನ್ನೂ ಕಳಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ-ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರೆಯಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ ಹಾಗು ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ಹಾಗು ಉಪಾಧಿಕಾರಿಗಳನ್ನಾಗಿ ನೇಮಿಸಿದೆ.


ಆ ಮಿದ್ಯಾನ್ ಮಹಿಳೆಯೊಡನೆ ಹತನಾದವನ ಹೆಸರು ಜಿಮ್ರೀ. ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರ ನಾಯಕನಾದ ಸಾಲೂ ಎಂಬವನ ಮಗ.


ಮೋಶೆಗೆ, “ಈ ಜನರ ಮುಖಂಡರೆಲ್ಲರನ್ನು ಹಿಡಿಸಿ, ನನ್ನ ಆಜ್ಞಾನುಸಾರ ಬಹಿರಂಗವಾಗಿ ಮರಣದಂಡನೆಗೆ ಗುರಿಮಾಡಿಸು. ಆಗ ನನ್ನ ಕೋಪಾಗ್ನಿ ಇಸ್ರಯೇಲರಿಂದ ತೊಲಗುವುದು,” ಎಂದರು.


ಲೇವಿಯ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸು.


ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


ಮೋಶೆ ಇಸ್ರಯೇಲರ ಕುಲನಾಯಕರಿಗೆ ಹೀಗೆಂದು ಹೇಳಿದನು: ಸರ್ವೇಶ್ವರ ಸ್ವಾಮಿಯ ಆಜ್ಞೆ ಇದು:


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು.


ಮೋಶೆ, ಆರೋನ್ ಮತ್ತು ಕುಲಪ್ರತಿನಿಧಿಗಳಾದ ಆ ಹನ್ನೆರಡು ಪ್ರಧಾನರು ಎಣಿಸಿದ ಇಸ್ರಯೇಲರ ಸಂಖ್ಯೆ ಇಷ್ಟು.


ಮೋಶೆ ಹಾಗು ಆರೋನರು ಮತ್ತು ಸಮೂಹದ ಮುಖ್ಯಸ್ಥರು ಕೆಹಾತ್ಯರಲ್ಲಿ ಯಾರಾರು ಮೂವತ್ತರಿಂದ ಐವತ್ತು ವರ್ಷದವರೆಗಿನ ವಯಸ್ಸುಳ್ಳವರಾಗಿದ್ದಾರೋ ಹಾಗೂ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಎಣಿಸಿದರು.


ಆಗ ಇಸ್ರಯೇಲರ ಮುಖ್ಯಸ್ಥರು, ಅಂದರೆ ಗೋತ್ರನಾಯಕರು ಹಾಗೂ ಕುಲಾಧಿಪತಿಗಳಾಗಿದ್ದು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು, ಕಾಣಿಕೆಗಳನ್ನು ತಂದೊಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು