ಅರಣ್ಯಕಾಂಡ 1:40 - ಕನ್ನಡ ಸತ್ಯವೇದವು C.L. Bible (BSI)40-41 ಆಶೇರ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 41,500: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40-41 ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 41,500 ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಆಶೇರ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆಶೇರನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. ಅಧ್ಯಾಯವನ್ನು ನೋಡಿ |