ಅರಣ್ಯಕಾಂಡ 1:53 - ಕನ್ನಡ ಸತ್ಯವೇದವು C.L. Bible (BSI)53 ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ [ಯೆಹೋವನ] ಕೋಪವು ಇಸ್ರಾಯೇಲ್ಯರ ಮೇಲೆ ಉಂಟಾಗುವದಕ್ಕೆ ಆಸ್ಪದವಿರುವದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.” ಅಧ್ಯಾಯವನ್ನು ನೋಡಿ |
ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.