Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:10 - ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ, ಉತ್ಸವ ದಿನಗಳಲ್ಲೂ ಹಬ್ಬ ದಿನಗಳಲ್ಲೂ ಅಮಾವಾಸ್ಯೆಯಲ್ಲೂ ಮತ್ತು ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಅರ್ಪಿಸುವಾಗಲೂ ಆ ಕಹಳೆಗಳನ್ನು ಮೊಳಗಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ನೆನಪಿಗೆ ತರಲು ನೆರವಾಗುವುದು. ನಾನೇ ನಿಮ್ಮ ದೇವರಾದ ಸರ್ವೇಶ್ವರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸುವಾಗ ಆ ತುತೂರಿಗಳನ್ನು ಊದಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವದು; ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದಲ್ಲದೆ, ನೀವು ಉತ್ಸವಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ನಿಮ್ಮನ್ನು ಗಮನಿಸಬೇಕೆಂದು ಆ ತುತ್ತೂರಿ ಧ್ವನಿಗಳು ನಿಮ್ಮ ದೇವರಿಗೆ ನೆನಪನ್ನುಂಟುಮಾಡುತ್ತವೆ. ನೀವು ಇದನ್ನು ಮಾಡಬೇಕೆಂದು ನಾನು ಆಜ್ಞಾಪಿಸುತ್ತೇನೆ. ನಿಮ್ಮ ದೇವರಾದ ಯೆಹೋವನು ನಾನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಸಂತೋಷದ ದಿವಸದಲ್ಲಿಯೂ, ನಿಮ್ಮ ಹಬ್ಬಗಳಲ್ಲಿಯೂ ನಿಮ್ಮ ತಿಂಗಳಿನ ಆರಂಭದಲ್ಲಿಯೂ ತುತೂರಿಗಳನ್ನು ಊದಬೇಕು. ನಿಮ್ಮ ದಹನಬಲಿಗಳನ್ನೂ ಸಮಾಧಾನದ ಬಲಿಯನ್ನೂ ಅರ್ಪಿಸುವಾಗ ಅವುಗಳನ್ನು ಊದಬೇಕು. ಅವುಗಳ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:10
34 ತಿಳಿವುಗಳ ಹೋಲಿಕೆ  

ಊದಿರಿ ಕೊಂಬನು ಅಮವಾಸ್ಯೆಯಲಿ I ಉತ್ಸವದಿನವಾದ ಪೂರ್ಣಿಮೆಯಲಿ II


ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


ಅವರೊಂದಿಗೆ ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ ಆದ


ಕಟ್ಟುವವರು ಸರ್ವೇಶ್ವರನ ಮಂದಿರದ ಅಸ್ತಿವಾರವನ್ನು ಹಾಕಿದಾಗ, ಇಸ್ರಯೇಲರ ಅರಸ ದಾವೀದನು ನೇಮಿಸಿದ ಕ್ರಮಕ್ಕನುಸಾರ, ಸರ್ವೇಶ್ವರನನ್ನು ಸಂಕೀರ್ತಿಸಿದರು. ಇದಕ್ಕಾಗಿ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆ ಹಾಗು ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆ ನಿಂತುಕೊಂಡು,


ದಹನಬಲಿ ಸಮರ್ಪಣೆಯು ಮುಗಿಯುವವರೆಗೆ ಸಭೆಸೇರಿದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಾ ಇದ್ದರು; ಗಾಯಕರು ಗಾನ ಮಾಡುತ್ತಾ ಇದ್ದರು; ತುತೂರಿ ಊದುವವರು ಊದುತ್ತಾ ಇದ್ದರು.


ಆ ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರಲು ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.


ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಪೀಡಿಸುವ ಶತ್ರುಗಳ ಮೇಲೆ ಯುದ್ಧಕ್ಕೆ ಹೊರಡುವಾಗ ಆ ಕಹಳೆಗಳನ್ನು ಆರ್ಭಟವಾಗಿ ಮೊಳಗಿಸಬೇಕು. ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ನೆನಪಿಗೆ ತಂದುಕೊಂಡು ಶತ್ರುಗಳ ಕೈಯಿಂದ ನಿಮ್ಮನ್ನು ಬಿಡಿಸುವರು.


ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II


ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಸರ್ವೇಶ್ವರನ ಗಾಯನಸೇವೆಗಾಗಿ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿ ಇದ್ದವು. ಇವರು ರಾಜಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡೆಸುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಯನ್ನು ಸಮರ್ಪಿಸಿರಿ; ಅವರ ಅಚಲಪ್ರೀತಿ ಶಾಶ್ವತ” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಯೇಲರೆಲ್ಲರೂ ನಿಂತಿದ್ದರು.


ಸ್ತುತಿಗೀತೆಗಳನ್ನು ಹಾಡುವಾಗ ತುತೂರಿ, ತಾಳ, ಮತ್ತಿತರ ವಾದ್ಯಗಳನ್ನು ಬಾರಿಸುವವರ ಮೇಲ್ವಿಚಾರಣೆಯೂ ಹೇಮಾನ್ ಮತ್ತು ಯೆದುತೂನರದಾಗಿತ್ತು. ಯೆದುತೂನನ ಮಕ್ಕಳಿಗೆ ದ್ವಾರಗಳನ್ನು ಕಾಯುವ ಹೊಣೆಯೂ ಇತ್ತು.


ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.


‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಜೋರ್ಡನನ್ನು ದಾಟುವಾಗ ಅದರ ಮುಂದೆ ಜೋರ್ಡನಿನ ನೀರು ನಿಂತುಹೋಯಿತು,’ ಎಂದು ಹೇಳಿರಿ. ಅದರ ನೀರು ನಿಂತುಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಯೇಲರಿಗೆ ಚಿರಸ್ಮಾರಕಗಳಾಗಿರುವುವು,” ಎಂದು ಹೇಳಿದನು.


‘ಏಳನೆಯ ತಿಂಗಳಿನ ಮೊದಲನೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆ ಸೇರಬೇಕು. ಅದು ನಿಮಗೆ ಕೊಂಬೂದುವ ದಿನ.


ನೀನು ಏಳನೆಯ ತಿಂಗಳಿನ ಮೊದಲನೆಯ ದಿನ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಕೂಡಬೇಕು.


“ದೈವನಿರ್ಣಯದ ಚೀಲವುಳ್ಳ ಆ ಫಲಕದ ಮೇಲೆ ಇಸ್ರಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಅದನ್ನು ತನ್ನ ಎದೆಯ ಮೇಲೆ ಧರಿಸಿಕೊಂಡು ಪವಿತ್ರಸ್ಥಾನದೊಳಗೆ ಬರುವಾಗಲೆಲ್ಲಾ ಆ ಹೆಸರುಗಳನ್ನು ಸರ್ವೇಶ್ವರನಾದ ನನ್ನ ನೆನಪಿಗೆ ಸತತವಾಗಿ ತರುವನು.


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಆದ್ದರಿಂದ, ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿ.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ಆತನನ್ನು ಸ್ತುತಿಸಿರಿ ಕೊಂಬುಗಳನ್ನೂದುತಾ I ಸ್ವರಮಂಡಲಗಳನು, ಕಿನ್ನರಿಗಳನು ಬಾರಿಸುತಾ II


ಪ್ರಾಣರಕ್ಷಣೆಯ ಈ ಹಣವನ್ನು ನೀನು ಇಸ್ರಯೇಲರಿಂದ ಶೇಖರಿಸಿ ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸು. ಇಸ್ರಯೇಲರ ಪ್ರಾಣವನ್ನು ಉಳಿಸಬೇಕೆಂಬುದಾಗಿ ಈ ತೆರಿಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕಪಡಿಸುವುದು.”


‘ಅಮಾವಾಸ್ಯೆಯಲ್ಲಿ ದಹನಬಲಿಗಾಗಿ ಕಳಂಕರಹಿತವಾದ ಟಗರು, ವರ್ಷದ ಎರಡು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳು - ಇವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಅದಕ್ಕೆ ದಾವೀದನು, “ನಾಳೆ ಶುದ್ಧಪಾಡ್ಯಮಿ; ನಾನು ಅರಸರ ಪಂಕ್ತಿಯಲ್ಲಿ ಕುಳಿತು ಊಟಮಾಡಬೇಕಾಗಿರುವುದು; ನೀನು ಅಪ್ಪಣೆ ಕೊಟ್ಟರೆ ನಾನು ಈಗಲೆ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.


ಅದಕ್ಕೆ ಅವನು, “ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ತೂ ಅಲ್ಲ, ಈ ದಿನ ಹೋಗಿ ಪ್ರಯೋಜನವಿಲ್ಲ,” ಎಂದನು.


ಏಳುಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ಕೊಂಬುಗಳನ್ನು ಊದಬೇಕು.


ದೇವರಿತ್ತ ನಿಯಮವದು ಯಕೋಬ್ಯರಿಗೆ I ಕೊಟ್ಟಕಟ್ಟಳೆಯದು ಇಸ್ರಯೇಲರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು