Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:25 - ಕನ್ನಡ ಸತ್ಯವೇದವು C.L. Bible (BSI)

25 ಈ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕ ಅಮ್ಮೀಷದ್ದೈಯನ ಮಗ ಅಹೀಗೆಜೆರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಮೇಲೆ ಎಲ್ಲಾ ಕುಲಗಳ ಹಿಂಭಾಗದಲ್ಲಿ ದಾನ್ ಕುಲದಿಂದ ಮುನ್ನಡೆಸಲ್ಪಟ್ಟ ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಷದ್ದೈನ ಮಗನಾದ ಅಹೀಗೆಜೆರನು ದಾನ್ ಕುಲದ ಸೇನಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದಾನನ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:25
12 ತಿಳಿವುಗಳ ಹೋಲಿಕೆ  

ಯುದ್ಧಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೇ ಇದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು.


ದಾನ್ ಕುಲದಿಂದ ಅಮ್ಮೀಷದ್ದೈಯನ ಮಗ ಅಹೀಗೆಜೆರ್


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.


ಹತ್ತನೆಯ ದಿನ ದಾನ್ ಕುಲಾಧಿಪತಿ ಅಮ್ಮೀಷದ್ದೈಯನ ಮಗ ಅಹೀಗೆಜೆರನು ತಂದ ಕಾಣಿಕೆಗಳು:


ಬೆನ್ಯಾಮೀನ್ ಕುಲದ ಸೇನಾನಾಯಕ ಗಿದ್ಯೋನಿಯ ಮಗ ಅಬೀದಾನನು.


ಆಶೇರ್ ಕುಲಕ್ಕೆ ಸೇನಾನಾಯಕ ಒಕ್ರಾನನ ಮಗ ಪಗೀಯೇಲನು.


ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಸರ್ವೇಶ್ವರನ ಮಂಜೂಷದ ಮುಂದೆ ನಡೆದರು. ಯುದ್ಧಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು