Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:29 - ಕನ್ನಡ ಸತ್ಯವೇದವು C.L. Bible (BSI)

29 ಮೋಶೆ ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗ ಹೋಬಾಬನಿಗೆ, “ಸರ್ವೇಶ್ವರ ನಮಗೆ ಕೊಡುವುದಾಗಿ ವಾಗ್ದಾನ ಮಾಡಿದ ನಾಡಿಗೆ ನಾವು ಪ್ರಯಾಣ ಮಾಡುತ್ತಿದ್ದೇವೆ. ಇಸ್ರಯೇಲರಿಗೆ ಒಳಿತನ್ನೇ ಮಾಡುವುದಾಗಿ ಸರ್ವೇಶ್ವರ ಸ್ವಾಮಿಯೇ ಹೇಳಿದ್ದಾರೆ. ಆದ್ದರಿಂದ ನೀನೂ ನಮ್ಮ ಸಂಗಡ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೋಶೆ ತನ್ನ ಮಾವನಾಗಿದ್ದ ವಿುದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ - ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲ್ಯರಿಗೆ ಮೇಲನ್ನುಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದದರಿಂದ ನೀನು ನಮ್ಮ ಜೊತೆಯಲ್ಲಿ ಬಾ; ನವ್ಮಿುಂದ ನಿನಗೂ ಮೇಲುಂಟಾಗುವದೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕೆಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋಶೆ ತನ್ನ ಮಾವನಾಗಿದ್ದ ಮಿದ್ಯಾನನಾದ ರೆಯೂವೇಲನ ಮಗ ಹೊಬಾಬನಿಗೆ, “ಯೆಹೋವ ದೇವರು ನಮಗೆ ಕೊಡುತ್ತೇನೆಂದು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ. ನಮ್ಮ ಸಂಗಡ ನೀನೂ ಬಾ, ನಾವು ನಿನಗೆ ಒಳ್ಳೆಯದನ್ನು ಮಾಡುವೆವು. ಏಕೆಂದರೆ ಯೆಹೋವ ದೇವರು ಇಸ್ರಾಯೇಲರನ್ನು ಕುರಿತು ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:29
31 ತಿಳಿವುಗಳ ಹೋಲಿಕೆ  

ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಕೇನ್ಯನಾದ ಹೆಬೆರನು ಮೋಶೆಯ ಮಾವ ಹೋಬಾಬನ ವಂಶದ ಉಳಿದ ಕೇನ್ಯರನ್ನು ಬಿಟ್ಟು ಕೆದೆಷಿನ ಹತ್ತಿರ ಇರುವ ‘ಚಾನನ್ನೀಮ್’ ಎಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.


ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


ಹುಡುಗಿಯರು ತಮ್ಮ ತಂದೆ ರೆಗೂವೇಲನ ಬಳಿಗೆ ಹಿಂದಿರುಗಿದಾಗ ಅವನು, “ಈ ಹೊತ್ತು ಬಲುಬೇಗ ಬಂದು ಇದ್ದೀರಿ, ಏನು ಕಾರಣ?” ಎಂದು ವಿಚಾರಿಸಿದನು.


ನಿನಗೆ ಒಳ್ಳೆಯದನ್ನೇ ಮಾಡಿ ನಿನ್ನ ಸಂತತಿಯನ್ನು ಎಣಿಸಲಾಗದ ಕಡಲತೀರದ ಮರಳಿನಂತೆ ಹೆಚ್ಚಿಸುವೆನು, ಎಂದು ಹೇಳಿದವರು ನೀವೇ ಅಲ್ಲವೇ?”


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ಆಗ ಇಲ್ಲಿ ಕಾಲಿಡುವಷ್ಟು ನೆಲವನ್ನು ಕೂಡ ದೇವರು ಅವನಿಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ. ಸ್ವಂತ ಸೊತ್ತಾಗಿ ಅವನಿಗೂ ಅವನ ಬಳಿಕ ಅವನ ಸಂತತಿಗೂ ಕೊಡುವುದಾಗಿ ವಾಗ್ದಾನಮಾಡಿದರಷ್ಟೆ. ಆಗ ಅಬ್ರಹಾಮನಿಗೆ ಮಕ್ಕಳೇ ಇರಲಿಲ್ಲ.


ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II


ಆದರೆ ಕೇನ್ಯರಿಗೆ ಅವನು, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರ ಅಲ್ಲವೆ?” ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.


ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಬಳಿಕ ಮೋಶೆ ತನ್ನ ಮಾವನನ್ನು ಬೀಳ್ಕೊಟ್ಟನು. ಅವನು ತನ್ನ ನಾಡಿಗೆ ಹಿಂತಿರುಗಿ ಹೋದನು.


ಇತ್ರೋ, ಮೋಶೆಯ ಮಾವ ಹಾಗೂ ಮಿದ್ಯಾನರ ಪೂಜಾರಿ. ದೇವರು ಮೋಶೆಗೂ ತಮ್ಮ ಜನರಾದ ಇಸ್ರಯೇಲರಿಗೂ ಮಾಡಿದ ಮಹಾತ್ಕಾರ್ಯಗಳನ್ನು ಕುರಿತು ಇವನು ಕೇಳಿದ್ದನು. ಸರ್ವೇಶ್ವರ ಸ್ವಾಮಿ ಹೇಗೆ ಇಸ್ರಯೇಲರನ್ನು ಈಜಿಪ್ಟಿನಿಂದ ಕರೆದುತಂದರೆಂಬ ವಿಷಯ ಇವನಿಗೆ ಮುಟ್ಟಿತ್ತು.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.


ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ.


ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.


ಈ ಕ್ರಮದಲ್ಲಿ ಇಸ್ರಯೇಲರು ಸೈನ್ಯ ಸೈನ್ಯವಾಗಿ ಹೊರಟು ಪ್ರಯಾಣ ಮಾಡಿದರು.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


ನಿಮ್ಮ ಪಿತೃಗಳಿಗೆ ಸ್ವಂತವಾಗಿದ್ದ ನಾಡಿನಲ್ಲಿ ಸೇರಿಸುವರು. ಅದು ನಿಮಗೂ ಸ್ವದೇಶವಾಗುವಂತೆ ಮಾಡಿ ನಿಮಗೆ ಒಳಿತನ್ನುಂಟುಮಾಡುವರು; ಪಿತೃಗಳಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವರು.


ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II


ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ I


ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ಮೋಶೆ ಆ ಮನುಷ್ಯನ ಸಂಗಡ ವಾಸಮಾಡಲು ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು