ಅರಣ್ಯಕಾಂಡ 10:33 - ಕನ್ನಡ ಸತ್ಯವೇದವು C.L. Bible (BSI)33 ಅವರು ಸರ್ವೇಶ್ವರನ ಬೆಟ್ಟವನ್ನು ಬಿಟ್ಟು ಮೂರುದಿನದ ಪ್ರಯಾಣದಷ್ಟು ದೂರಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡಲು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರಿಗೆ ಮುಂದಾಗಿ ಹೋಗುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳುಕೊಳ್ಳತಕ್ಕ ಸ್ಥಳವನ್ನು ನೋಡುವದಕ್ಕೋಸ್ಕರ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರ ಮುಂದಾಗಿ ಹೋಗುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವರು ಯೆಹೋವನ ಬೆಟ್ಟದಿಂದ ಹೊರಟು ಮೂರು ದಿನ ಪ್ರಯಾಣ ಮಾಡಿದರು. ಲೇವಿಯರು ಹೊತ್ತುಕೊಂಡಿದ್ದ ಯೆಹೋವನ ಒಡಂಬಡಿಕೆ ಪೆಟ್ಟಿಗೆಯು ಮತ್ತೆ ಪಾಳೆಯ ಹಾಕಲು ಯೋಗ್ಯವಾದ ಸ್ಥಳವನ್ನು ಎದುರು ನೋಡುತ್ತಾ ಜನರ ಮುಂದೆ ಮೂರು ದಿನಗಳವರೆಗೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು. ಅಧ್ಯಾಯವನ್ನು ನೋಡಿ |