ಅರಣ್ಯಕಾಂಡ 10:35 - ಕನ್ನಡ ಸತ್ಯವೇದವು C.L. Bible (BSI)35 ಸರ್ವೇಶ್ವರನ ಮಂಜೂಷ ಹೊರಡುವಾಗ ಮೋಶೆ, “ಹೊರಡೋಣವಾಗಲಿ ಸರ್ವೇಶ್ವರಾ, ಎಚ್ಚೆತ್ತು ಚದರಿಹೋಗಲಿ ನಿಮ್ಮ ಶತ್ರುಗಳು ಬೆಂಗೊಟ್ಟು ಓಡಿಹೋಗಲಿ ನಿಮ್ಮ ಹಗೆಗಾರರು” ಎಂದು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೆಹೋವನ ಮಂಜೂಷವು ಹೊರಡುವಾಗ ಮೋಶೆ - ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಹಗೆಗಾರರು ಬೆಂಗೊಟ್ಟು ಓಡಿಹೋಗಲಿ ಎಂದು ಹೇಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಜನರು ಪವಿತ್ರ ಪೆಟ್ಟಿಗೆಯನ್ನು ಎತ್ತಿಕೊಂಡು ಹೊರಡುವಾಗ, ಮೋಶೆಯು, “ಯೆಹೋವನೇ, ಎದ್ದೇಳು! ನಿನ್ನ ವೈರಿಗಳು ಚದರಿಹೋಗಲಿ, ನಿನ್ನ ಶತ್ರುಗಳು ಬೆನ್ನುಕೊಟ್ಟು ಓಡಿಹೋಗಲಿ” ಎಂದು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇದಲ್ಲದೆ ಮಂಜೂಷವು ಹೊರಡುವಾಗ ಮೋಶೆಯು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಎದ್ದೇಳಿರಿ, ನಿಮ್ಮ ಶತ್ರುಗಳು ಚದರಿಹೋಗಲಿ. ನಿಮ್ಮನ್ನು ಹಗೆ ಮಾಡುವವರು ನಿಮ್ಮ ಎದುರಿನಿಂದ ಓಡಿಹೋಗಲಿ.” ಅಧ್ಯಾಯವನ್ನು ನೋಡಿ |