Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:12 - ಕನ್ನಡ ಸತ್ಯವೇದವು C.L. Bible (BSI)

12 ನಿಮ್ಮ ದಯೆಗೆ ನಾನು ಅಯೋಗ್ಯನಾದೆನೇ? ‘ಮೊಲೆ ಕೂಸನ್ನು ಎತ್ತಿಕೊಂಡು ಹೋಗುವವಳಂತೆ ಈ ಜನರನ್ನು ತೋಳತೆಕ್ಕೆಯಲ್ಲಿರಿಸಿ, ಅವರ ಪೂರ್ವಜರಿಗೆ ನಾನು ಪ್ರಮಾಣಮಾಡಿದ ನಾಡಿಗೆ ಒಯ್ಯಿ’ ಎಂದು ಹೇಳುತ್ತೀರಲ್ಲವೆ? ನಾನು ಇವರಿಗೆ ಹೆತ್ತ ತಾಯಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ? ನೀನು ನನಗೆ - ಕೂಸನ್ನು ಎತ್ತಿಕೊಂಡು ಹೋಗುವವನಂತೆ ಈ ಜನವನ್ನು ಉಡಿಲಲ್ಲಿಟ್ಟುಕೊಂಡು ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿ ಕೊಟ್ಟ ದೇಶಕ್ಕೆ ಒಯ್ಯಿ ಎಂದು ಹೇಳುತ್ತೀಯಲ್ಲಾ. ನಾನು ಇವರಿಗೆ ಹೆತ್ತ ತಾಯಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಇವರಿಗೆ ಹೆತ್ತ ತಾಯಿಯೋ? ನಾನು ಅವರಿಗೆ ಜನ್ಮ ಕೊಡಲಿಲ್ಲವೆಂದು ನಿನಗೆ ಗೊತ್ತಿದೆ. ದಾದಿಯು ಮಗುವನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ನಾನು ನನ್ನ ಮಡಿಲಲ್ಲಿ ಇಟ್ಟು, ನೀನು ಅವರ ಪೂರ್ವಿಕರಿಗೆ ವಾಗ್ದಾನಮಾಡಿರುವ ದೇಶಕ್ಕೆ ಎತ್ತಿಕೊಂಡು ಹೋಗುವಂತೆ ನೀನು ನನಗೇಕೆ ಹೇಳುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಈ ಎಲ್ಲಾ ಜನರನ್ನು ಗರ್ಭಧರಿಸಿ ಜನ್ಮವಿತ್ತೆನೋ? ದಾದಿಯು ಹಸುಗೂಸನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಅವರ ಪಿತೃಗಳಿಗೆ ನೀವು ವಾಗ್ದಾನ ಮಾಡಿದ ದೇಶಕ್ಕೆ ನಡೆಸಬೇಕೆಂದು ನೀವು ನನಗೇಕೆ ಹೇಳಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:12
20 ತಿಳಿವುಗಳ ಹೋಲಿಕೆ  

ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ತಾಯಿ ತನ್ನ ಮಕ್ಕಳನ್ನು ಸಾಕಿಸಲಹುವಂತೆಯೇ, ನಾವು ನಿಮ್ಮನ್ನು ವಾತ್ಸಲ್ಯದಿಂದ ಕಂಡೆವು.


ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


“ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ.


“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ.


ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.


ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು.


“ಸರ್ವೇಶ್ವರ ಸ್ವಾಮಿ ನಿಮಗೂ ನಿಮ್ಮ ಪೂರ್ವಜರಿಗೂ ಕೊಟ್ಟ ವಾಗ್ದಾನದ ಮೇರೆಗೆ ನಿಮ್ಮನ್ನು ಕಾನಾನ್ಯರ ನಾಡಿಗೆ ಬರಮಾಡಿ ಆ ನಾಡನ್ನು ನಿಮಗೆ ಕೊಟ್ಟನಂತರ


ಮೋಶೆಗೆ ಸರ್ವೇಶ್ವರ ಸ್ವಾಮಿ ಹೇಳಿದ ಮಾತುಗಳಿವು: “ನೀನು ಈಜಿಪ್ಟಿನಿಂದ ಕರೆದುತಂದ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳಬಿಟ್ಟು ತೆರಳು. ನಾನು ಅಬ್ರಹಾಮ್, ಇಸಾಕ್, ಯಕೋಬ್ ಎಂಬುವರೊಡನೆ ಅವನ ಸಂತತಿಯವರಿಗೆ ಕೊಡುವುದಾಗಿ ಪ್ರಮಾಣ ಮಾಡಿದ ನಾಡಿಗೆ ಹೊರಟುಹೋಗು.


ಸಮಾರಿಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಜೆಸ್ರೀಲಿನ ಅಧಿಕಾರಿಗಳಾದ ಹಿರಿಯರಿಗೂ ರಾಜಪುತ್ರಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರ ಕಳುಹಿಸಿದನು.


ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರು ಎಲ್ಲರು ಕೂಡಿ ಯೇಹುವಿಗೆ, “ನಾವು ನಿಮ್ಮ ಆಜ್ಞಾಧಾರಕರಾದ ಸೇವಕರು, ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ; ನಿಮ್ಮ ಚಿತ್ತವೇ ನೆರವೇರಲಿ,” ಎಂದು ಹೇಳಿಕಳುಹಿಸಿದರು.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


ನೀವು ಈ ಸ್ಥಳಕ್ಕೆ ಸೇರುವ ಪರ್ಯಂತರ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೋ ಹಾಗೆಯೇ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಹೊತ್ತುತಂದರಲ್ಲವೇ?” ಎಂದು ನಿಮಗೆ ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು