Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:13 - ಕನ್ನಡ ಸತ್ಯವೇದವು C.L. Bible (BSI)

13 ಇವರು ನಿಷ್ಠೂರವಾಗಿ ಮಾತಾಡುತ್ತಾ ನನ್ನ ಬಳಿಗೆ ಬಂದು, ‘ತಿನ್ನಲಿಕ್ಕೆ ನಮಗೆ ಮಾಂಸವನ್ನು ಕೊಡು’ ಎಂದು ಕೇಳುತ್ತಿದ್ದಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸ ನನಗೆಲ್ಲಿ ದೊರಕೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವರು ನನ್ನ ಬಳಿಗೆ ಅಳುತ್ತಾ ಬಂದು - ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು ಎಂದು ಕೇಳಿಕೊಳ್ಳುತ್ತಾರಲ್ಲಾ; ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇವರು ನನ್ನ ಬಳಿಗೆ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳಿಕೊಳ್ಳುತ್ತಾರಲ್ಲಾ! ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಈ ಸಮಸ್ತ ಜನರಿಗೆ ಕೊಡುವುದಕ್ಕೆ ಮಾಂಸವು ನನಗೆ ಎಲ್ಲಿಂದ ದೊರಕುವುದು? ‘ನಮಗೆ ತಿನ್ನಲು ಮಾಂಸವನ್ನು ಕೊಡು,’ ಎಂದು ನನ್ನ ಬಳಿಗೆ ಬಂದು ಅಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:13
9 ತಿಳಿವುಗಳ ಹೋಲಿಕೆ  

ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಮರುನುಡಿದರು.


ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಕೇಳಿದರು.


ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.


ಮೋಶೆ ಸರ್ವೇಶ್ವರನಿಗೆ, ” ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಆದರೂ ನೀವು, ‘ಇವರು ಇಡೀ ಒಂದು ತಿಂಗಳು ತಿನ್ನುವಷ್ಟು ಮಾಂಸವನ್ನು ಕೊಡುತ್ತೇನೆ’ ಎಂದು ಹೇಳಿದ್ದೀರಿ.


ಅವರಿಗೆ ಬೇಕಾದಷ್ಟು ಸಿಗುವಂತೆ ಆಡುಕುರಿಗಳನ್ನು ದನಗಳನ್ನೂ ಕೊಯ್ಯಬೇಕೆನ್ನುತ್ತೀರೋ? ಇಲ್ಲವೆ ಸಮುದ್ರದಲ್ಲಿರುವ ಮೀನುಗಳನ್ನೆಲ್ಲಾ ಹಿಡಿದುಕೊಳ್ಳಬೇಕೆನ್ನುತ್ತೀರೋ? ಎಂದು ಹೇಳಿದನು.


ಅದು ಓಕರಿಕೆಯಾಗಿ, ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ತಿನ್ನುವಿರಿ.”


ಅದಕ್ಕೆ ಅವನು, “ಇಷ್ಟನ್ನು ನೂರುಮಂದಿಗೆ ಹೇಗೆ ಬಡಿಸಲಿ,” ಎಂದನು. ಎಲೀಷನು, “ಇರಲಿ, ಕೊಡು; ಅವರು ಊಟಮಾಡಲಿ. ‘ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರು’ ಎಂಬುದು ಸರ್ವೇಶ್ವರನ ನುಡಿ,” ಎಂದು ಹೇಳಿದನು.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು