Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:15 - ಕನ್ನಡ ಸತ್ಯವೇದವು C.L. Bible (BSI)

15 ನೀವು ಹೀಗೆ ಮಾಡುವುದಕ್ಕಿಂತಲೂ ನನ್ನನ್ನು ಈ ಕೂಡಲೆ ಕೊಂದುಹಾಕಿದರೆ ಉಪಕಾರವಾದೀತು; ನನಗಾಗುತ್ತಿರುವ ಸಂಕಟವನ್ನು ಸಹಿಸಲಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ಹೀಗೆ ಮಾಡುವದಕ್ಕಿಂತಲೂ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರ; ನನಗಾಗುವ ದುರವಸ್ಥೆಯನ್ನು ನಾನು ನೋಡಲಾರೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀನು ಹೀಗೆಯೇ ನನಗೆ ಮಾಡುವುದಾಗಿದ್ದರೆ ಅದಕ್ಕೆ ಬದಲಾಗಿ ನನ್ನನ್ನು ಕೊಂದುಬಿಡು ಎಂದು ಬೇಡಿಕೊಳ್ಳುತ್ತೇನೆ. ಆಗ ನಾನು ಈ ದುರವಸ್ಥೆಗಳಿಂದ ವಿಮುಕ್ತನಾಗುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:15
12 ತಿಳಿವುಗಳ ಹೋಲಿಕೆ  

“ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಮೊರೆಯಿಟ್ಟನು.


ಗರ್ಭ ಬಿಟ್ಟು ನಾನೇಕೆ ಹೊರಬಂದೆ? ಕಷ್ಟದುಃಖಗಳನ್ನು ಅನುಭವಿಸುವುದಕ್ಕೊ? ಅವಮಾನದಲ್ಲೆ ಬಾಳಿನ ದಿನಗಳನ್ನೆಲ್ಲ ಕಳೆಯುವುದಕ್ಕೊ?


ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.


ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.


ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.


ಈ ಸಹನೆ ಸಿದ್ಧಿಗೆ ಬಂದಾಗ ನೀವು ಯಾವ ಕುಂದುಕೊರತೆ ಇಲ್ಲದೆ, ಪರಿಪೂರ್ಣರೂ ಸರ್ವಗುಣ ಸಂಪನ್ನರೂ ಆಗುತ್ತೀರಿ.


ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


ಎಂದೇ ಉಸಿರುಕಟ್ಟಿ ನಾನು ಪ್ರಾಣಬಿಡುವುದು ಲೇಸು ಮೂಳೆಮಾಂಸದ ಈ ತಡಿಕೆಬಾಳಿಗಿಂತ ಸಾವು ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು