Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:16 - ಕನ್ನಡ ಸತ್ಯವೇದವು C.L. Bible (BSI)

16 ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ಇಸ್ರಾಯೇಲ್ಯರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನೀನು ತಿಳುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡ ಕರಿಸಿ ದೇವದರ್ಶನದ ಗುಡಾರದ ಬಾಗಲಿಗೆ ಕರತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಲ್ಲಿ ಹಿರಿಯರೆಂದೂ ಅಧಿಕಾರಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನಗುಡಾರದ ಬಾಗಿಲಿಗೆ ಕರೆದುತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಮೋಶೆಗೆ, “ಜನರ ನಾಯಕರೆಂದೂ, ಹಿರಿಯರೆಂದೂ, ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂತಹ ಇಸ್ರಾಯೇಲರ ಹಿರಿಯರೊಳಗಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ, ಅವರನ್ನು ದೇವದರ್ಶನದ ಗುಡಾರದ ಕಡೆಗೆ ಕರೆದುಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:16
14 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು, ಆರೋನ, ನಾದಾಬ್ ಹಾಗೂ ಅಬೀಹೂ ಮತ್ತು ಇಸ್ರಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಸರ್ವೇಶ್ವರನಾದ ನನ್ನ ಬಳಿಗೆ ಬಂದು ದೂರದಲ್ಲೆ ನಿಂತು ಅಡ್ಡಬೀಳಬೇಕು.


ಮೋಶೆ, ಆರೋನ್, ನಾದಾಬ್ ಹಾಗೂ ಅಬೀಹು ಮತ್ತು ಇಸ್ರಯೇಲರಲ್ಲಿ ಎಪ್ಪತ್ತು ಮಂದಿ ಬೆಟ್ಟವನ್ನು ಹತ್ತಿದರು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರೆಯಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ ಹಾಗು ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ಹಾಗು ಉಪಾಧಿಕಾರಿಗಳನ್ನಾಗಿ ನೇಮಿಸಿದೆ.


ಅವರಲ್ಲದೆ ಈಜಿಪ್ಟ್ ದೇಶದಲ್ಲಿ ಜೋಸೆಫನಿಗೆ ಹುಟ್ಟಿದವರು ಇಬ್ಬರು. ಈಜಿಪ್ಟ್ ದೇಶಕ್ಕೆ ಹೋದ ಯಕೋಬನ ಕುಟುಂಬದವರೆಲ್ಲರು ಒಟ್ಟಾಗಿ ಎಪ್ಪತ್ತು ಮಂದಿ.


ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು.


ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು.


ಇಸ್ರಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು: ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ತರುವಾಯ ಅವರಿಬ್ಬರು ಹೋಗಿ ಇಸ್ರಯೇಲರ ಹಿರಿಯರನ್ನೆಲ್ಲ ಕೂಡಿಸಿದರು.


ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ, ಅವರಿಗೆ ವಿರುದ್ಧ ಸಾಕ್ಷಿಗಳಾಗುವುದಕ್ಕೆ ಭೂಮ್ಯಾಕಾಶಗಳನ್ನೇ ಕರೆಯುವೆನು.


ಇಸ್ರಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಮೇಲೆ ಅಧಿಪತಿಗಳನ್ನು ನೇಮಿಸಿದನು.


ಮೋಶೆ ಹೊರಟುಹೋಗಿ ಸರ್ವೇಶ್ವರನ ಮಾತುಗಳನ್ನು ಜನರಿಗೆ ತಿಳಿಸಿದನು. ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.


ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಹೇಳಿದರು : “ಹೋಗು, ಕುಂಬಾರ ಮಾಡಿದ ಮಣ್ಣಿನ ಮಡಕೆಯೊಂದನ್ನು ಕೊಂಡುಕೊ. ಜನರ ಹಿರಿಯರಲ್ಲೂ ಯಾಜಕರ ಹಿರಿಯರಲ್ಲೂ ಕೆಲವರನ್ನು ಕರೆದುಕೊಂಡು


ಆಗ ಮೋಶೆ ಎದ್ದು ದಾತಾನ್ - ಅಬೀರಾಮರ ಬಳಿಗೆ ಹೋದನು. ಇಸ್ರಯೇಲರ ಹಿರಿಯರು ಅವನ ಹಿಂದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು