Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:17 - ಕನ್ನಡ ಸತ್ಯವೇದವು C.L. Bible (BSI)

17 ನಾನು ಅಲ್ಲಿಗೆ ಇಳಿದುಬಂದು ನಿನ್ನೊಡನೆ ಮಾತಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಅವರಿಗೂ ಹಂಚಿಕೊಡುವೆನು. ಆಗ ನೀನೊಬ್ಬನೇ ಈ ಜನರ ಜವಾಬ್ದಾರಿಯನ್ನು ವಹಿಸಬೇಕಾಗುವುದಿಲ್ಲ; ನಿನ್ನ ಸಂಗಡ ಇವರೂ ವಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮೀಯ ವರಗಳಲ್ಲಿ ಕೆಲವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಭಾರವನ್ನು ವಹಿಸಬೇಕಾಗಿರುವದಿಲ್ಲ; ನಿನ್ನ ಜೊತೆಯಲ್ಲಿ ಇವರೂ ವಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:17
32 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರನ ಆತ್ಮ ನಿನ್ನ ಮೇಲೆ ಬರುವುದು. ನೀನೂ ಮಾರ್ಪಟ್ಟು ಪ್ರವಾದಿಸುವೆ.


ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ.


ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ.


ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು.


“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಅವರಿಗಿತ್ತಿರಿ ಉಪದೇಶಿಸಲು ಸತ್ಯಾತ್ಮವನು ಅವರ ಬಾಯಿಂದ ಹಿಂದೆಗೆಯಲಿಲ್ಲ ಮನ್ನವನು ಬಾಯಾರಿದ್ದಾಗ ಕುಡಿಯಲಿತ್ತಿರಿ ಅವರಿಗೆ ನೀರನು.


ಅವರೇ ಸದಾ ಜನರಿಗೆ ನ್ಯಾಯ ತೀರಿಸಲಿ; ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಆಗ ಅವರೂ ಈ ಹೊಣೆಯನ್ನು ಹೊರುವುದರಿಂದ ನಿನ್ನ ಹೊರೆ ಹಗುರವಾಗುವುದು.


ಇವರು ನಿಮ್ಮಲ್ಲಿ ಭಿನ್ನಭೇದವನ್ನು ಉಂಟುಮಾಡುವವರು, ಪ್ರಾಪಂಚಿಕ ವಿಷಯಾಸಕ್ತರು; ಪವಿತ್ರಾತ್ಮರಹಿತರಾಗಿ ಬಾಳುವವರು.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಅವರು ಬಂದಾಗ ಸರ್ವೇಶ್ವರ ಮೇಘಸ್ತಂಭದಲ್ಲಿ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತು ಆರೋನ್ ಹಾಗೂ ಮಿರ್ಯಾಮಳನ್ನು ಹತ್ತಿರಕ್ಕೆ ಕರೆದರು.


ಸರ್ವೇಶ್ವರ ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದರು. ಅವರು, “ಬೆಟ್ಟದ ತುದಿಗೆ ಬಾ,” ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.


ನರಮಾನವರು ಕಟ್ಟುತ್ತಿದ್ದ ಆ ಪಟ್ಟಣವನ್ನು ಹಾಗೂ ಗೋಪುರವನ್ನು ನೋಡಲು ಸರ್ವೇಶ್ವರ ಸ್ವಾಮಿ ಇಳಿದು ಬಂದರು.


ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.


ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ಅದಕ್ಕೆ ಸರ್ವೇಶ್ವರ, “ನೂನನ ಮಗ ಯೆಹೋಶುವನು ಆತ್ಮವರ ಸಂಪನ್ನನು.


ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.


ಆಗ ಸರ್ವೇಶ್ವರ ಸ್ವಾಮಿ ಮೇಘಾವೃತರಾಗಿ ಇಳಿದುಬಂದು ಅಲ್ಲಿ ಅವನ ಹತ್ತಿರ ನಿಂತು, ‘ಸರ್ವೇಶ್ವರ’ ಎಂಬ ತಮ್ಮ ನಾಮವನ್ನು ಪ್ರಕಟಿಸಿದರು.


ಮೂರನೆಯ ದಿನ ಸಿದ್ಧರಾಗಿರಲಿ. ಏಕೆಂದರೆ ಆ ಮೂರನೆಯ ದಿನ ಸರ್ವೇಶ್ವರನಾದ ನಾನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಲು ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವೆನು.


ಅನಂತರ ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿ ಸರ್ವೇಶ್ವರ ಸ್ವಾಮಿ ಹೊರಟುಹೋದರು. ಅಬ್ರಹಾಮನು ತನ್ನ ಮನೆಗೆ ಹಿಂತಿರುಗಿದನು.


ಬರುವ ವರ್ಷ ಇದೇ ಕಾಲದಲ್ಲಿ ಸಾರಳು ಅವನನ್ನು ಹೆರುವಳು,” ಎಂದರು. ಇಷ್ಟನ್ನು ಮಾತಾಡಿ ಮುಗಿಸಿದ ಮೇಲೆ ದೇವರು ಅಬ್ರಹಾಮನಿಂದ ಅದೃಶ್ಯರಾದರು.


ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.


ಈ ಕೆಲಸ ಬಹು ಕಷ್ಟಕರವಾದುದು; ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನೂ ನಿನ್ನ ಈ ಜನರೂ ಖಂಡಿತವಾಗಿ ಬಳಲಿಹೋಗುವಿರಿ.


ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು