ಅರಣ್ಯಕಾಂಡ 11:18 - ಕನ್ನಡ ಸತ್ಯವೇದವು C.L. Bible (BSI)18 “ಇದಲ್ಲದೆ ಇಸ್ರಯೇಲರಿಗೆ ಹೀಗೆಂದು ಹೇಳು: ‘ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ; ನಾಳೆ ನಿಮಗೆ ಮಾಂಸಾಹಾರ ದೊರಕುವುದು. ನೀವು ಸರ್ವೇಶ್ವರನಿಗೆ ಕೇಳಿಸುವಂತೆ - ನಮಗೆ ಮಾಂಸ ಕೊಡುವವರೇ ಇಲ್ಲ; ಈಜಿಪ್ಟ್ ದೇಶದಲ್ಲಿ ಎಷ್ಟೋ ಸುಖವಾಗಿದ್ದೆವು - ಎಂದು ನಿಷ್ಠೂರವಾಗಿ ಮಾತಾಡುತ್ತೀರಿ. ಆದ್ದರಿಂದ ಸರ್ವೇಶ್ವರನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅದಲ್ಲದೆ ಇಸ್ರಾಯೇಲ್ಯರಿಗೆ ಹೀಗೆ ಹೇಳು - ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸಾಹಾರವು ದೊರೆಯುವದು. ನೀವು ಯೆಹೋವನಿಗೆ ಕೇಳಿಸುವಂತೆ - ನಮಗೆ ಮಾಂಸವನ್ನು ಕೊಡುವವರೇ ಇಲ್ಲ ; ಐಗುಪ್ತದೇಶದಲ್ಲಿ ಎಷ್ಟೋ ಸುಖವಾಗಿದ್ದೆವಲ್ಲಾ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಇಸ್ರೇಲರಿಗೆ ಹೀಗೆ ಹೇಳು: ನಾಳೆಗಾಗಿ ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ನಾಳೆ ನೀವು ಮಾಂಸವನ್ನು ತಿನ್ನುವಿರಿ. ‘ನಮಗೆ ಮಾಂಸವನ್ನು ಕೊಡುವವರು ಯಾರು? ನಾವು ಈಜಿಪ್ಟಿನಲ್ಲಿ ಇದಕ್ಕಿಂತಲೂ ಚೆನ್ನಾಗಿದ್ದೆವಲ್ಲಾ’ ಎಂಬ ನಿಮ್ಮ ದೂರನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ಯೆಹೋವನು ನಿಮಗೆ ಮಾಂಸವನ್ನು ಕೊಡುವನು ಮತ್ತು ನೀವು ತಿನ್ನುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಜನರಿಗೆ ನೀನು, “ ‘ನಾಳೆಗಾಗಿ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ. ನಮಗೆ ಯಾವನು ಮಾಂಸವನ್ನು ತಿನ್ನುವುದಕ್ಕೆ ಕೊಡುವನು? ಈಜಿಪ್ಟ್ ದೇಶದಲ್ಲಿ ನಮಗೆ ಒಳ್ಳೆಯದು ಇತ್ತು,’ ಎಂದು ಹೇಳಿ, ಯೆಹೋವ ದೇವರು ಕೇಳುವಂತೆ ಅತ್ತಿರಿ. ಆದಕಾರಣ ಯೆಹೋವ ದೇವರು ನಿಮಗೆ ತಿನ್ನುವುದಕ್ಕೆ ಮಾಂಸವನ್ನು ಕೊಡುವನು ಮತ್ತು ನೀವು ಅದನ್ನು ತಿನ್ನುವಿರಿ. ಅಧ್ಯಾಯವನ್ನು ನೋಡಿ |