Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸಿದ್ದೇ ಆ ಬೇಂಕಿ ಆರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಜನರು ಸಹಾಯಕ್ಕಾಗಿ ಮೋಶೆಗೆ ಮೊರೆಯಿಟ್ಟರು. ಮೋಶೆಯು ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಬೆಂಕಿ ಆರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ, ಮೋಶೆಯು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು ಆಗ ಬೆಂಕಿಯು ಆರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:2
23 ತಿಳಿವುಗಳ ಹೋಲಿಕೆ  

ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಆಗ ಸಿಮೋನನು, “ನೀವು ಹೇಳಿದ ಯಾವ ಕೇಡೂ ನನಗೆ ತಗಲದಂತೆ ನನಗಾಗಿ ನೀವೇ ಪ್ರಭುವಿನಲ್ಲಿ ಪ್ರಾರ್ಥನೆಮಾಡಿ,” ಎಂದು ಬೇಡಿಕೊಂಡನು.


“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.


ಹೀಗಿರುವಲ್ಲಿ ಅರಸ ಚಿದ್ಕೀಯನು ಶೆಲೆಮ್ಯನ ಮಗ ಯೆಹೂಕಲನನ್ನು ಮತ್ತು ಯಾಜಕ ಮಾಸೇಯನ ಮಗ ಚೆಫನ್ಯನನ್ನು ಯೆರೆಮೀಯನ ಬಳಿಗೆ ಕಳಿಸಿ, “ನಮಗಾಗಿ ನಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸು” ಎಂದು ವಿನಂತಿಸಿದನು.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II


ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಆಗ ಆರೋನನು ಮೋಶೆಗೆ, “ಅಯ್ಯಾ, ನಾವು ಮೂರ್ಖರಾಗಿ ನಡೆದು ಪಾಪಕಟ್ಟಿಕೊಂಡೆವು. ಈ ಪಾಪದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ,” ಇದು ನನ್ನ ವಿನಂತಿ.


ಆಗ ಮೋಶೆ ಸರ್ವೇಶ್ವರನಿಗೆ, “ಹೇ ದೇವಾ, ಆಕೆಯನ್ನು ಗುಣಪಡಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಮೊರೆಯಿಟ್ಟನು.


ಮೋಶೆ ಫರೋಹನ ಬಳಿಯಿಂದ ಹೊರಟುಹೋಗಿ ಸರ್ವೇಶ್ವರ ಸ್ವಾಮಿಯನ್ನು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು