Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:20 - ಕನ್ನಡ ಸತ್ಯವೇದವು C.L. Bible (BSI)

20 ಅದು ಓಕರಿಕೆಯಾಗಿ, ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ತಿನ್ನುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪೂರಾ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ಓಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಒಂದು ತಿಂಗಳು ಪೂರ್ತಿ ಮಾಂಸವನ್ನು ತಿನ್ನುವಿರಿ. ಅದು ನಿಮ್ಮ ಮೂಗಿನಲ್ಲಿ ಓಕರಿಕೆಯಾಗಿ ಹೊರಬರುವ ತನಕ ಮತ್ತು ನಿಮಗೆ ಅಸಹ್ಯವಾಗುವವರೆಗೆ ಅದನ್ನು ತಿನ್ನುವಿರಿ. ನೀವು ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ತಿರಸ್ಕರಿಸಿದ್ದರಿಂದ ಮತ್ತು ‘ನಾವೇಕೆ ಈಜಿಪ್ಟನ್ನು ಬಿಟ್ಟು ಬಂದೆವು?’ ಎಂದು ಆತನ ಮುಂದೆ ದೂರು ಹೇಳಿದ್ದರಿಂದ ಇದು ನಿಮಗೆ ಸಂಭವಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದು ನಿಮ್ಮ ಮೂಗಿನಿಂದ ಬಂದು, ನಿಮಗೆ ಅಸಹ್ಯವಾಗುವ ತನಕ ಪೂರ್ತಿ ತಿಂಗಳವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವ ದೇವರನ್ನು ಅಲಕ್ಷ್ಯಮಾಡಿ, ಅವರ ಎದುರಿನಲ್ಲಿ ಅತ್ತು, ‘ನಾವು ಏಕೆ ಈಜಿಪ್ಟಿನಿಂದ ಬಂದೆವು,’ ಎಂದು ಹೇಳುತ್ತೀರಲ್ಲಾ, ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:20
21 ತಿಳಿವುಗಳ ಹೋಲಿಕೆ  

ಪೂರೈಸಿದನಾತ ಅವರ ಕೋರಿಕೆಯನು I ಕಳುಹಿಸಿದನಾದರೆ ಭೀಕರ ರೋಗವನು II


ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು.


ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


‘ಅವಹೇಳನ ಮಾಡುವವರೇ, ಗಮನಿಸಿರಿ; ದಿಗ್ಭ್ರಮೆಗೊಂಡು ದಿಕ್ಕುಪಾಲಾಗಿರಿ; ನಿಮ್ಮ ಕಾಲದಲ್ಲೇ ನಾನೊಂದು ಮಹತ್ಕಾರ್ಯವನ್ನು ಮಾಡುತ್ತೇನೆ; ಅದನ್ನು ನೀವು ನಂಬಲಾರಿರಿ, ಇನ್ನೊಬ್ಬರು ವಿವರಿಸಿ ಹೇಳಿದರೂ ನಂಬಲಾರಿರಿ’, “ ಎಂದು ಹೇಳಿದನು.


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


ಹೊಟ್ಟೆ ತುಂಬಿದವನಿಗೆ ಜೇನುಕೊಟ್ಟರೂ ಕಹಿ; ಹೊಟ್ಟೆ ಹಸಿದವನಿಗೆ ಏನು ಕೊಟ್ಟರು ಸಿಹಿ.


ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದೆ; ಹಾಗು ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ. ಆದ್ದರಿಂದ ಕತ್ತಿ ನಿನ್ನ ಮನೆಯನ್ನು ಬಿಟ್ಟು ತೊಲಗುವುದಿಲ್ಲ.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಬಳಿಕ ಎಲ್ಲಾ ಜನರಿಗೆ, “ಇಗೋ, ನೋಡಿ ಈ ಕಲ್ಲು! ಇದು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಸರ್ವೇಶ್ವರ ನಮಗೆ ಹೇಳಿದ ಎಲ್ಲ ಮಾತುಗಳನ್ನು ಇದು ಕೇಳಿದೆ.


ಸಂಜೆಯಾಗುತ್ತಲೆ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು. ಬೆಳಿಗ್ಗೆ ಪಾಳೆಯದ ಸುತ್ತಲೂ ಮಂಜು ಬಿದ್ದಿತು.


ಮೋಶೆ, “ಸಂಜೆ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನು ಕೊಡುವವರು ಸರ್ವೇಶ್ವರ. ನಾವು ಎಷ್ಟು ಮಾತ್ರದವರು? ಗೊಣಗುಟ್ಟುವ ನಿಮ್ಮ ಮಾತುಗಳು ಸರ್ವೇಶ್ವರನಿಗೆ ಕೇಳಿಸಿವೆ. ಆ ಗೊಣಗುಟ್ಟುವಿಕೆ ಸರ್ವೇಶ್ವರನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ,” ಎಂದನು.


ನಿಮ್ಮ ಮಧ್ಯೆಯೇ ಇರುವ ಸರ್ವೇಶ್ವರನನ್ನು ಧಿಕ್ಕರಿಸಿ, ಅಯ್ಯೋ, ನಾವು ಈಜಿಪ್ಟನ್ನು ಬಿಟ್ಟುಬಂದು ಮೋಸವಾಯಿತು’ ಎಂದು ಅವರ ಮುಂದೆ ನಿಷ್ಠೂರವಾಗಿ ಮಾತಾಡಿದಿರಿ. ಆದ್ದರಿಂದ ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಇಪ್ಪತ್ತು ದಿನವಲ್ಲ, ಒಂದು ತಿಂಗಳು, ಪೂರ್ತಿ ತಿನ್ನುವಿರಿ.


ಮೋಶೆ ಸರ್ವೇಶ್ವರನಿಗೆ, ” ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಆದರೂ ನೀವು, ‘ಇವರು ಇಡೀ ಒಂದು ತಿಂಗಳು ತಿನ್ನುವಷ್ಟು ಮಾಂಸವನ್ನು ಕೊಡುತ್ತೇನೆ’ ಎಂದು ಹೇಳಿದ್ದೀರಿ.


“ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.


ಇವರು ನಿಷ್ಠೂರವಾಗಿ ಮಾತಾಡುತ್ತಾ ನನ್ನ ಬಳಿಗೆ ಬಂದು, ‘ತಿನ್ನಲಿಕ್ಕೆ ನಮಗೆ ಮಾಂಸವನ್ನು ಕೊಡು’ ಎಂದು ಕೇಳುತ್ತಿದ್ದಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸ ನನಗೆಲ್ಲಿ ದೊರಕೀತು.


ಕತ್ತಿಯ ಬಾಯಿಗೆ ತುತ್ತಾಗಿಸಲು ಸರ್ವೇಶ್ವರ ಸ್ವಾಮಿ ನಮ್ಮನ್ನೇಕೆ ಈ ನಾಡಿಗೆ ಬರಮಾಡಿದರು? ನಮ್ಮ ಮಡದಿ ಮಕ್ಕಳು ಪರರ ಪಾಲಾಗುವರಲ್ಲಾ? ನಾವು ಮರಳಿ ಈಜಿಪ್ಟ್ ದೇಶಕ್ಕೆ ಹೋಗುವುದೇ ಒಳಿತಲ್ಲವೆ?” ಎಂದು ಹೇಳಿಕೊಂಡರು.


“ಒಬ್ಬ ನಾಯಕನನ್ನು ನೇಮಿಸಿಕೊಂಡು ಈಜಿಪ್ಟಿಗೆ ಹಿಂತಿರುಗಿ ಹೋಗೋಣ,” ಎಂದೂ ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಅವರು ಅವನಿಗೆ, “ನಾವು ಬರುವುದಿಲ್ಲ, ಹಾಲೂಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆತಂದು ಈ ಮರಳುಗಾಡಿನಲ್ಲಿ ಸಾಯಿಸುತ್ತಿರುವೆ. ಇದು ಅಲ್ಪಕಾರ್ಯವೆಂದು ಎಣಿಸುತ್ತೀಯೋ? ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತಿರುವೆಯೋ?”


ನಮ್ಮನ್ನು ಈ ಮರಳುಗಾಡಿಗೆ ಕರೆದುಕೊಂಡು ಬಂದುದೇಕೆ? ನಾವೂ ನಮ್ಮ ಜಾನುವಾರುಗಳೂ ಇಲ್ಲಿ ಸಾಯಬೇಕೆಂದೊ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು