Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:22 - ಕನ್ನಡ ಸತ್ಯವೇದವು C.L. Bible (BSI)

22 ಅವರಿಗೆ ಬೇಕಾದಷ್ಟು ಸಿಗುವಂತೆ ಆಡುಕುರಿಗಳನ್ನು ದನಗಳನ್ನೂ ಕೊಯ್ಯಬೇಕೆನ್ನುತ್ತೀರೋ? ಇಲ್ಲವೆ ಸಮುದ್ರದಲ್ಲಿರುವ ಮೀನುಗಳನ್ನೆಲ್ಲಾ ಹಿಡಿದುಕೊಳ್ಳಬೇಕೆನ್ನುತ್ತೀರೋ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಆಡುಕುರಿಗಳನ್ನೂ ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡುಕೊಳ್ಳಬೇಕೋ? ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾವು ಎಲ್ಲಾ ಕುರಿಗಳನ್ನು, ದನಕರುಗಳನ್ನು ಕೊಂದರೂ ಇಷ್ಟು ಜನರು ಒಂದು ತಿಂಗಳು ತಿನ್ನುವುದಕ್ಕೆ ಸಾಕಾಗದು. ಸಮುದ್ರದಲ್ಲಿರುವ ಮೀನುಗಳೆಲ್ಲವನ್ನು ಹಿಡಿದರೂ ಅದು ಇಷ್ಟು ಜನರಿಗೆ ಸಾಕಾಗದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರಿಗೆ ಸಾಕಾಗುವ ಹಾಗೆ ಕುರಿದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ಮೀನುಗಳನ್ನೆಲ್ಲಾ ಕೂಡಿಸಿ ತರಬೇಕೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:22
11 ತಿಳಿವುಗಳ ಹೋಲಿಕೆ  

ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಕೇಳಿದರು.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.


“ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತದೆ?” ಎಂದನು.


ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು.


ಅದಕ್ಕೆ ಜಕರೀಯನು, “ಈ ಮಾತು ನಿಜವಾಗುವುದೆಂದು ನಾನು ತಿಳಿಯುವುದಾದರೂ ಹೇಗೆ? ನಾನೋ ಮುದುಕ; ನನ್ನ ಪತ್ನಿಗೂ ಮುಪ್ಪು,” ಎಂದನು.


ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಮರುನುಡಿದರು.


ಆಗ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿ,” ಎಂದರು. ಅದಕ್ಕೆ ಶಿಷ್ಯರು, “ನಾವು ಹೋಗಿ ಇನ್ನೂರು ದೆನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುತಂದು ಅವರಿಗೆ ಊಟಕ್ಕೆ ಬಡಿಸೋಣವೇನು?” ಎಂದರು.


ಇವರು ನಿಷ್ಠೂರವಾಗಿ ಮಾತಾಡುತ್ತಾ ನನ್ನ ಬಳಿಗೆ ಬಂದು, ‘ತಿನ್ನಲಿಕ್ಕೆ ನಮಗೆ ಮಾಂಸವನ್ನು ಕೊಡು’ ಎಂದು ಕೇಳುತ್ತಿದ್ದಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸ ನನಗೆಲ್ಲಿ ದೊರಕೀತು.


ಮೋಶೆ ಸರ್ವೇಶ್ವರನಿಗೆ, ” ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಆದರೂ ನೀವು, ‘ಇವರು ಇಡೀ ಒಂದು ತಿಂಗಳು ತಿನ್ನುವಷ್ಟು ಮಾಂಸವನ್ನು ಕೊಡುತ್ತೇನೆ’ ಎಂದು ಹೇಳಿದ್ದೀರಿ.


ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು