Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:28 - ಕನ್ನಡ ಸತ್ಯವೇದವು C.L. Bible (BSI)

28 ಚಿಕ್ಕಂದಿನಿಂದ ಮೋಶೆಗೆ ಶಿಷ್ಯನಾಗಿದ್ದ ಹಾಗೂ ನೂನನ ಮಗನಾಗಿದ್ದ ಯೆಹೋಶುವನು ಮೋಶೆಗೆ, “ಗುರುವೇ, ಅವರಿಗೆ ಅದು ಬೇಡವೆನ್ನಬೇಕು ಎಂದು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೌವನದಿಂದ ಮೋಶೆಗೆ ಶಿಷ್ಯನಾದ ನೂನನ ಮಗ ಯೆಹೋಶುವನು ಮೋಶೆಗೆ - ಸ್ವಾಮೀ, ಅವರಿಗೆ ಬೇಡವೆನ್ನಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೂನನ ಮಗನಾದ ಯೆಹೋಶುವನು ಮೋಶೆಗೆ, “ಸ್ವಾಮೀ, ನೀನು ಅವರನ್ನು ತಡೆಯಬೇಕು” ಎಂದನು. (ಯೆಹೋಶುವನು ಯೌವನಸ್ಥನಾಗಿದ್ದಾಗಿನಿಂದಲೂ ಮೋಶೆಯ ಸಹಾಯಕನಾಗಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದಕ್ಕೆ ಯೌವನಸ್ಥರಲ್ಲಿ ಒಬ್ಬನೂ, ಮೋಶೆಯ ಸೇವಕನೂ ಆಗಿದ್ದ ನೂನನ ಮಗ ಯೆಹೋಶುವನು, “ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:28
9 ತಿಳಿವುಗಳ ಹೋಲಿಕೆ  

ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


ಸರ್ವೇಶ್ವರಸ್ವಾಮಿ, ತಮ್ಮ ದಾಸ ಮೋಶೆ ಮರಣಹೊಂದಿದ ಮೇಲೆ ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ ಹೀಗೆಂದು ಆಜ್ಞಾಪಿಸಿದರು:


ಒಬ್ಬ ಮನುಷ್ಯ ತನ್ನ ಗೆಳೆಯನೊಡನೆ ಹೇಗೆ ಮಾತಾಡುತ್ತಾನೋ ಹಾಗೆಯೇ ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದರು. ತರುವಾಯ ಮೋಶೆ ಪಾಳೆಯಕ್ಕೆ ಮರಳಿ ಬರುತ್ತಿದ್ದನು. ಆದರೆ ನೂನನ ಮಗನಾದ ಯೆಹೋಶುವ ಎಂಬ ಹೆಸರುಳ್ಳ ಯುವಕನೊಬ್ಬನು ಮೋಶೆಯ ಶಿಷ್ಯನಾಗಿ ಆ ಗುಡಾರದಲ್ಲೇ ಇರುತ್ತಿದ್ದನು. ಅದನ್ನು ಬಿಟ್ಟು ಹೋಗುತ್ತಿರಲಿಲ್ಲ.


‘ಮೋಶೆ ಯೆಹೋಶುವನಿಗೆ, “ನೀನು ಯೋಧರನ್ನು ಆರಿಸಿಕೊಂಡು ನಾಳೆ ನಮ್ಮ ಪರವಾಗಿ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ದೇವದಂಡವನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು,” ಎಂದು ಹೇಳಿದನು.


ಆಗ ಒಬ್ಬ ಯುವಕ ಮೋಶೆಯ ಬಳಿಗೆ ಓಡಿಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸುತ್ತಿದ್ದಾರೆ,” ಎಂದು ತಿಳಿಸಿದನು.


ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು