Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:5 - ಕನ್ನಡ ಸತ್ಯವೇದವು C.L. Bible (BSI)

5 ಈಜಿಪ್ಟ್ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಉಳ್ಳಿಗಡ್ಡೆ, ನೀರುಳ್ಳಿ, ಬೆಳ್ಳುಳ್ಳಿ ಇವೆಲ್ಲಾ ನೆನಪಿಗೆ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಐಗುಪ್ತದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸವತೆಕಾಯಿ, ಕರ್ಬೂಜು, ಉಳ್ಳಿಗಡ್ಡೆ, ನೀರುಳ್ಳಿ, ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾವು ಈಜಿಪ್ಟಿನಲ್ಲಿ ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜು, ಈರುಳ್ಳಿಸೊಪ್ಪು, ಈರುಳ್ಳಿ, ಬೆಳ್ಳುಳ್ಳಿ ಇವುಗಳನ್ನು ನಾವು ಜ್ಞಾಪಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ಈಜಿಪ್ಟ್ ದೇಶದಲ್ಲಿ ಉಚಿತವಾಗಿ ತಿಂದ ಮೀನನ್ನೂ ಸವತೆ ಕಾಯಿಯನ್ನೂ ಕರ್ಬೂಜಗಳನ್ನೂ ನೀರುಳ್ಳಿ ಈರುಳ್ಳಿ ಬೆಳ್ಳುಳ್ಳಿಗಳನ್ನೂ ಜ್ಞಾಪಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:5
7 ತಿಳಿವುಗಳ ಹೋಲಿಕೆ  

“ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.


ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.


ಆ ಗಗನದೊಡತಿಗೆ ಧೂಪಾರತಿ ಎತ್ತುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ತರಹದ ಕೊರತೆಗೆ ಗುರಿಯಾಗುತ್ತಿದ್ದೇವೆ, ಖಡ್ಗ-ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.”


ನಾವು ಈಜಿಪ್ಟಿನಲ್ಲೇ ವಾಸಮಾಡುತ್ತೇವೆ. ಅದು ಯುದ್ಧ ಕಾಣದ, ರಣಕಹಳೆ ಕೇಳದ, ಕೂಳಿನ ಕೊರತೆಯಿಲ್ಲದ ದೇಶ.’ ಎಂದುಕೊಳ್ಳಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು